ಮಹಾದಾಯಿ: ರಾಜ್ಯಕ್ಕೆ ಭಾಗಶಃ ಜಯ: ಕರ್ನಾಟಕಕ್ಕೆ 13.4 ಟಿಎಂಸಿ ನೀರು
Team Udayavani, Aug 15, 2018, 10:45 AM IST
ಹೊಸದಿಲ್ಲಿ: ಕರ್ನಾಟಕ ಮತ್ತು ಗೋವಾ ನಡುವೆ ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಹಾದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಮಂಡಳಿ ತೀರ್ಪು ಪ್ರಕಟಿಸಿದ್ದು, ತನ್ನ ಪಾಲಿನ ನೀರು ಪಡೆಯುವಲ್ಲಿ ಕರ್ನಾಟಕ ಭಾಗಶಃ ಯಶಸ್ವಿಯಾಗಿದೆ. ಮೂರೂ ರಾಜ್ಯಗಳಿಗೆ ನೀರು ಹಂಚಿಕೆ ಮಾಡಿರುವ ನ್ಯಾಯಮಂಡಳಿ ಕರ್ನಾಟಕಕ್ಕೆ 13.42 ಟಿಎಂಸಿ, ಗೋವಾಕ್ಕೆ 24 ಟಿಎಂಸಿ, ಮಹಾರಾಷ್ಟ್ರಕ್ಕೆ 1.30 ಟಿಎಂಸಿ ನೀರು ನೀಡಿದೆ. ಜತೆಗೆ ಮಹಾದಾಯಿ ನದಿ ನೀರನ್ನು ಮಲಪ್ರಭಾ ಕಡೆ ತಿರುಗಿಸಲು ಕೂಡ ನ್ಯಾಯಮಂಡಳಿ ಅನು ಮತಿ ನೀಡಿದ್ದು, ಇದರಿಂದ ಕರ್ನಾಟಕಕ್ಕೆ ಹನಿ ನೀರೂ ಬಿಡುವುದಿಲ್ಲ ಎಂದು ಹೇಳಿದ್ದಲ್ಲದೆ, ಕಳಸಾ- ಬಂಡೂರಿ ನಾಲಾ ಯೋಜನೆಗೆ ಇನ್ನಿಲ್ಲದಂತೆ ಕಾಡಿದ ಗೋವಾಕ್ಕೆ ಭಾರೀ ಹಿನ್ನಡೆಯಾಗಿದೆ. ಮಹಾದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾ| ಜೆ.ಎಂ. ಪಾಂಚಾಲ್ ನೇತೃತ್ವದ ನ್ಯಾಯಮಂಡಳಿ ಮಂಗಳವಾರ ತೀರ್ಪು ಪ್ರಕಟಿಸಿದ್ದು, ಸಮಗ್ರ ತೀರ್ಪನ್ನು 12 ಸಂಪುಟಗಳಲ್ಲಿ ಕೇಂದ್ರ ಸರಕಾರಕ್ಕೆ ಸಲ್ಲಿಕೆ ಮಾಡಿದೆ.
ಮಹಾದಾಯಿ ನದಿಯಲ್ಲಿ ಶೇ. 75ರ ಅವಲಂಬನೆ ಆಧಾರದಲ್ಲಿ 188 ಟಿಎಂಸಿ ನೀರು ಲಭ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮಂಡಳಿ ಈ ಪೈಕಿ ಮೂರು ರಾಜ್ಯಗಳಿಗೆ ಒಟ್ಟಾರೆ 38.72 ಟಿಎಂಸಿ ನೀರು ಹಂಚಿಕೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ ಧನಾತ್ಮಕ ಅಂಶವೆಂದರೆ, ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗೆ ನೀರು ವಿಂಗಡಣೆ ಮಾಡಿ ನೀರು ತಿರುಗಿಸಲು ಅನುಮತಿ ನೀಡಿರುವುದು ಮತ್ತು ಮಹಾದಾಯಿ ನೀರಿನಿಂದ ಜಲವಿದ್ಯುತ್ ಯೋಜನೆ ಕೈಗೆತ್ತಿಕೊಳ್ಳಲು ಅನುಮೋದನೆ ಕೊಟ್ಟಿರುವುದು. ಈ ತೀರ್ಪಿನ ಬಗ್ಗೆ ಆಕ್ಷೇಪಗಳಿದ್ದರೆ ಅದನ್ನು ಸಂಬಂಧಿಸಿದ ನ್ಯಾಯಾಂಗದ ಮುಂದೆ ಪ್ರಶ್ನಿಸಲು ಅವಕಾಶವಿದೆ ಎಂದೂ ತೀರ್ಪಿನಲ್ಲಿ ಹೇಳಿದೆ.
ಪ್ರಾಧಿಕಾರ ರಚನೆಗೆ ಸೂಚನೆ
ಮಹಾದಾಯಿ ನದಿ ನೀರು ಹಂಚಿಕೆ ಮತ್ತು ಅದಕ್ಕೆ ಸಂಬಂಧಿಸಿದ ಯೋಜನೆಗಳ ಜಾರಿಗಾಗಿ ಮಹಾದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಬೇಕು ಎಂದು ನ್ಯಾಯಮಂಡಳಿ ಸೂಚಿಸಿದೆ. ಅಲ್ಲದೆ, ಈ ತೀರ್ಪು 2048ರ ಆಗಸ್ಟ್ 31ರವರೆಗೆ ಜಾರಿಯಲ್ಲಿರುತ್ತದೆ. ಅನಂತರ ಅದರಲ್ಲಿ ಬದಲಾವಣೆ ಮಾಡಬಹುದು.
ತೀರ್ಪು ಜಾರಿ ಯಾವತ್ತಿನಿಂದ?
ನ್ಯಾಯಮಂಡಳಿಯ ತೀರ್ಪಿನ ಬಗ್ಗೆ ಕೇಂದ್ರ ಸರಕಾರ ಅಂತಾರಾಜ್ಯ ನದಿ ವಿವಾದ ಕಾಯ್ದೆಯನ್ವಯ ಗೆಜೆಟ್ ಅಧಿಸೂಚನೆ ಪ್ರಕಟಿಸಿದ ಬಳಿಕ ತೀರ್ಪು ಜಾರಿಯಾಗಲಿದೆ. ಗೋವಾ ಸ್ವಾಗತ ನ್ಯಾಯಮಂಡಳಿದ ಶಿಫಾರಸನ್ನು ಗೋವಾ ಸಿಎಂ ಮನೋಹರ ಪಾರೀಕರ್ ಸ್ವಾಗತಿಸಿದ್ದಾರೆ.
ಸುಪ್ರೀಂ ಮೆಟ್ಟಿಲೇರುವುದು ಖಚಿತ
ನ್ಯಾಯಮಂಡಳಿ ನೀಡಿರುವ ತೀರ್ಪು ಪ್ರಶ್ನಿಸಿ ಮೂರೂ ರಾಜ್ಯಗಳು ಸುಪ್ರಿಂ ಕೋರ್ಟ್ ಮೊರೆ ಹೋಗುವುದು ಬಹುತೇಕ ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.