![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 28, 2024, 10:58 AM IST
ಮುಂಬೈ: ಮಹಾದೇವ್ ಬೆಟ್ಟಿಂಗ್ ಆ್ಯಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಹಿಲ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಪೊಲೀಸ್ ಸೈಬರ್ ಸೆಲ್ ನ ವಿಶೇಷ ತನಿಖಾ ತಂಡವು ಛತ್ತೀಸ್ ಗಢದಲ್ಲಿ ಸಾಹಿಲ್ ಖಾನ್ ರನ್ನು ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ಬಳಿಕ ಬಂಧಿಸಲಾಗಿದೆ.
ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ಸಾಹಿಲ್ ಖಾನ್ ಪರಾರಿಯಾಗಿದ್ದರು ಎಂದು ವರದಿಯಾಗಿದೆ.
ಛತ್ತೀಸ್‌ಗಢ ಪೊಲೀಸರ ಸಹಾಯದಿಂದ ವಿಶೇಷ ತನಿಖಾ ತಂಡವು ಸತತ 40 ಗಂಟೆಗಳ ಕಾರ್ಯಾಚರಣೆ ನಡೆಸಿ ಸಾಹಿಲ್ ಖಾನ್ ಅವರನ್ನು ಬಂಧಿಸಿದೆ. ಅವರನ್ನು ಮುಂಬೈಗೆ ಕರೆದುಕೊಂಡು ಬರಲಾಗುತ್ತಿದ್ದು, ಕೋರ್ಟ್ ಗೆ ಹಾಜರು ಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿದೆ.
ಸಾಹಿಲ್ ಖಾನ್ ಅವರು ‘ಸ್ಟೈಲ್’ ಮತ್ತು ‘ಎಸ್ಕ್ಯೂಸ್ ಮಿ’ ಚಿತ್ರಗಳಿಂದ ಹೆಸರಾದವರು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ದರಾಗಿದ್ದಾರೆ.
ಛತ್ತೀಸ್‌ಗಢದ ಕೆಲವು ಹಣಕಾಸು ಮತ್ತು ರಿಯಲ್ ಎಸ್ಟೇಟ್ ಸಂಸ್ಥೆಗಳು ಮತ್ತು ವಿವಾದಿತ ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರ ನಡುವಿನ ಅಕ್ರಮ ವಹಿವಾಟಿನ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ.
ಈ ವಾರದ ಆರಂಭದಲ್ಲಿ, ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನ ಅಂಗಸಂಸ್ಥೆ ಅಪ್ಲಿಕೇಶನ್ ನ ಪ್ರಚಾರಕ್ಕೆ ಸಂಬಂಧಿಸಿದಂತೆ ನಟ ತಮನ್ನಾ ಭಾಟಿಯಾ ಅವರನ್ನು ವಿಚಾರಣೆಗೆ ಕರೆಸಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.