ಮಹಾರಾಷ್ಟ್ರ: ನಗದು ಸೇರಿದಂತೆ 123 ಕೋ. ರೂ. ಮೌಲ್ಯದ ವಸ್ತು ಜಪ್ತಿ
Team Udayavani, Apr 24, 2019, 4:09 PM IST
ಮುಂಬಯಿ: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಹಣ ಮತ್ತು ಹೆಂಡದ ಹೊಳೆ ಹರಿದಿದ್ದು, ನೀತಿ ಸಂಹಿತೆ ಜಾರಿ ತಂಡಗಳು ನಗರದ ವಿವಿಧೆಡೆಗಳಲ್ಲಿ ನಗದು ಸೇರಿದಂತೆ 123 ಕೋ. ರೂ. ಗಳ ಅಮೂಲ್ಯ ವಸ್ತುಗಳನ್ನು ವಶಪಡಿಸಿ ಮತದಾರರಿಗೆ ಅಮಿಷ ಒಡ್ಡಲು ರಾಜಕೀಯ ಪಕ್ಷಗಳು ನಡೆಸಿದ ಪ್ರಯತ್ನಗಳನ್ನು ವಿಫಲಗೊಳಿಸಿದಂತಾಗಿದೆ.
ವಶಪಡಿಸಿಕೊಂಡ ಒಟ್ಟಾರೆ ಸೊತ್ತುಗಳಲ್ಲಿ ನಗದು, ಹೆಂಡ, ಡ್ರಗ್ಸ್, ಚಿನ್ನಾಭರಣ, ಬೆಳ್ಳಿ ಇನ್ನಿತರ ವಸ್ತುಗಳು ಸೇರಿಕೊಂಡಿವೆ ಎಂದು ರಾಜ್ಯ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಪ್ ಶಿಂಧೆ ಅವರು ತಿಳಿಸಿದ್ದಾರೆ.
123 ಕೋ.75 ಲ. ರೂ.ಮೌಲ್ಯದ ವಸ್ತುಗಳನ್ನು ತಂಡವು ವಶಪಡಿಸಿಕೊಂಡಿದ್ದು, ಇದರಲ್ಲಿ 46.62 ಕೋ. ರೂ. ನಗದು ಸೇರಿದೆ. 8 ಲಕ್ಷ 796 ಲೀಟರ್ ಹೆಂಡ, 7 ಕೋಟಿ 61 ಲಕ್ಷ ರೂ. ಬೆಲೆಬಾಳುವ ಮಾದಕ ವಸ್ತು, 45 ಕೋ. 45 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣಗಳು ಸೇರಿದೆ.
22,795 ಪ್ರಕರಣ
ಚುನಾವಣ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಹೆಂಡ, ಮಾದಕ ಪದಾರ್ಥ, ಚಿನ್ನಾಭರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಇಲ್ಲಿಯವರೆಗೆ 22,795 ಪ್ರಕರಣಗಳನ್ನು ದಾಖಲಿಸಿಕೊಂಡಿವೆ. 40 ಸಾವಿರಕ್ಕೂ ಅಧಿಕ ಮಾರಕಾಯುಧಗಳನ್ನು ಜಪ್ತಿ ಮಾಡಿರುವ ಅಧಿಕಾರಿಗಳು ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ಚುನಾವಣ ನೀತಿ ಸಂಹಿತೆ ಜಾರಿಯಾದ ಬಳಿಕ ಸುಮಾರು 30 ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆಯನ್ನು ಪಾಲಿಸದ ಸುಮಾರು 135 ವ್ಯಕ್ತಿಗಳ ಮಾರಕಾಯುಧಗಳ ಲೈಸನ್ಸ್ ಅನ್ನು ರದ್ದುಗೊಳಿಸಲಾಗಿದೆ. ಅನಧಿಕೃತ ಮಾರಕಾಯುಧಗಳನ್ನು ಹೊಂದಿದ್ದ 1,571 ಮಂದಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. 566 ಕಾಡತೂಸು, 18,513 ಜಿಲೆಟಿನ್ ಮಾದರಿಯ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಚುನಾವಣ ಆಯೋಗದ ಹೆಚ್ಚುವರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಪ್ ಶಿಂಧೆ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.