ಮಹಾರಾಷ್ಟ್ರದ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಬೆಂಕಿ ಅವಘಡ:13 ಕೋವಿಡ್ ರೋಗಿಗಳು ಸಜೀವ ದಹನ ..!
Team Udayavani, Apr 23, 2021, 12:38 PM IST
ಮುಂಬೈ : ಮಹಾರಾಷ್ಟ್ರದಲ್ಲಿ ಇಂದು(ಶುಕ್ರವಾರ, ಏಪ್ರಿಲ್ 23) ಮುಂಜಾನೆ ಕೋವಿಡ್-19 ಸೆಂಟರ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 13 ಕೊರೋನಾ ರೋಗಿಗಳು ಸಜೀವ ದಹನವಾದ ದುರಂತ ಘಟನೆಯೊಂದು ನಡೆದಿದೆ.
ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ವಾಸೈನಲ್ಲಿನ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, 13 ಮಂದಿ ಸಜೀವ ದಹನವಾಗಿದ್ದಲ್ಲದೇ ಹಲವು ರೋಗಿಗಳಿಗೆ ಸುಟ್ಟ ಗಾಯವಾಗಿದ್ದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿಯಾಗಿದೆ.
ಇದು ಎರಡೇ ದಿನಗಳಲ್ಲಿ ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದ 2ನೇ ದುರಂತವಗಿದ್ದು. ಬುಧವಾರ ನಾಸಿಕ್ ನ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆಯಾಗಿ 24 ರೋಗಿಗಳು ಸಾವನ್ನಪ್ಪಿದ್ದರು.
ಇದನ್ನೂ ಓದಿ : ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್
ಮಹಾರಾಷ್ಟ್ರದಲ್ಲಿ ಕೋವಿಡ್ ರೂಪಾಂತರಿ ಅಲೆ ನಿತ್ಯ ಹೆಚ್ಚಳವಾಗುತ್ತಿದ್ದು, ನಿತ್ಯ ಸಾವು ನೋವಗಳು ಜಾಸ್ತಿಆಗುತ್ತಿವೆ. ಕೋವಿಡ್ ಆಸ್ಪತ್ರೆಗಳು ಕೋವಿಡ್ ಸೊಮಕಿತರಿಂದ ತುಂಬಿಹೋಗಿದ್ದು, ಬೆಡ್ ಇಲ್ಲದಂತಾಗಿದೆ ಎಂಬ ವರದಿ ಒಂದೆಡೆಯಾಗುತ್ತಿದ್ದರೇ, ಈ ನಡುವೆ ಕೋವಿಡ್ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮತ್ತಷ್ಟು ಆಘಾತ ಹೆಚ್ಚಿಸಿದೆ.
ಮಹಾರಾಷ್ಟ್ರದ ವಾಸೈನ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 3.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಐಸಿಯುನಲ್ಲಿದ್ದ ಏರ್ ಕಂಡೀಷನರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಐಸಿಯುನಲ್ಲಿದ್ದ 17 ಮಂದಿ ಕೋವಿಡ್ ರೋಗಿಗಳಲ್ಲಿ 13 ಮಂದಿ ಸಜೀವ ದಹನವಾಗಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
Maharashtra | 13 people have died in a fire that broke out at Vijay Vallabh COVID care hospital in Virar, early morning today pic.twitter.com/DoySNt4CSQ
— ANI (@ANI) April 23, 2021
ಇನ್ನು, ಈ ಘಟನೆಯ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ತುರ್ತಾಗಿ ತನಿಖೆ ನಡೆಸಿ, ವರದಿ ನೀಡುವಂತೆ ಹೇಳಿದ್ದಾರೆ.
ಈ ಘಟನೆಗೂ ಕೇವಲ 24 ಗಂಟೆ ಮೊದಲು ಮಹಾರಾಷ್ಟ್ರದ ನಾಸಿಕ್ನಲ್ಲಿ ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ಸೋರಿಕೆಯಾಗಿ 24 ರೋಗಿಗಳು ಸಾವನ್ನಪ್ಪಿದ್ದರು. ಆಮ್ಲಜನಕ ಸೋರಿಕೆಯಿಂದಾಗಿ 24 ರೋಗಿಗಳು ಮೃತಪಟ್ಟಿದ್ದರು.ಈ ದುರ್ಘಟನೆಯ ಬೆನ್ನಲ್ಲೆ ಬೆಂಕಿ ಅವಘಡ ಉಂಟಾಗಿದೆ.
ಇದನ್ನೂ ಓದಿ : ಸಾಯಬೇಕೋ ಅಥವಾ ವ್ಯಾಪಾರ ಮಾಡಬೇಕೋ ನೀವು ತೀರ್ಮಾನ ಮಾಡಿ: ವ್ಯಾಪಾರಸ್ಥರಿಗೆ ಸಚಿವ ಈಶ್ವರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.