ಮರಾಠ ಮೀಸಲಾತಿ ಆಗ್ರಹಿಸಿ ಮಹಾರಾಷ್ಟ್ರ ಬಂದ್: ಪ್ರತಿಭಟನೆ ತೀವ್ರ
Team Udayavani, Jul 24, 2018, 10:37 AM IST
ಮುಂಬಯಿ : ಸರಕಾರಿ ಉದ್ಯೋಗದಲ್ಲಿ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಆಗ್ರಹಿಸಿ ಅನೇಕ ಮರಾಠಾ ಸಂಘಟನೆಗಳು ಇಂದು ಮಂಗಳವಾರ ಜು.24ರಂದು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿವೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಮ್ಮ ಸಮುದಾಯದ ಮೀಸಲಾತಿ ಬೇಡಿಕೆಯನ್ನು ಪರಿಗಣಿಸುವುದಾಗಿ ಹಲವು ಬಾರಿ ಆಶ್ವಾಸನೆ ನೀಡಿರುವ ಹೊರತಾಗಿಯೂ ಅವರು ಈ ವರೆಗೆ ಏನನ್ನೂ ಮಾಡಿಲ್ಲ ಎಂದು ಮರಾಠಾ ಸಂಘಟನೆಗಳು ಆಕ್ಷೇಪಿಸಿವೆ.
ನಿನ್ನೆ ಸೋಮವಾರ ಮರಾಠಾ ಸಮುದಾಯದ 27ರ ಹರೆಯದ ಯುವಕ ಕಾಕಾಸಾಹೇಬ್ ಶಿಂಧೆ ಎಂಬಾತ ಔರಂಗಾಬಾದ್ ಸಮೀಪ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಮರಾಠಾ ಮೀಸಲಾತಿ ಚಳವಳಿಗೆ ಹೊಸ ತಿರುವನ್ನು ನೀಡಿದೆ.
ಯುವಕ ಶಿಂಧೆ ಸಾವಿನಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಹೊಸ ಪ್ರತಿಭಟನೆಗಳು ನಡೆಯುತ್ತಿದ್ದು ಇದಕ್ಕೆ ಬಿಜೆಪಿ ನೇತೃತ್ವದ ಸರಕಾರವೇ ಕಾರಣವೆಂದು ಮಾರಾಠ ನಾಯಕರು ಆಪಾದಿಸಿದ್ದಾರೆ.
ಶಿಂಧೆ ಕುಟುಂಬಕ್ಕೆ ರಾಜ್ಯ ಸರಕಾರ 10 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.
ಇಂದು ಪ್ರತಿಭಟನಕಾರರು ಪರ್ಭಾನಿ ಜಿಲ್ಲೆಯ ಗಂಗಾಖೇಡ್ ತೆಹಶೀಲ್‌ನಲ್ಲಿನ ಅಹ್ಮದಾಬಾದ್ -ಔರಂಗಾಬಾದ್ ಹೆದ್ದಾರಿಯನ್ನು ತಡೆದು ಪೊಲೀಸ್ ವ್ಯಾನ್ ಮತ್ತು ಬಸ್ ಸಹಿತ ಹಲವು ವಾಹನಗಳಿಗೆ ಹಾನಿ ಉಂಟುಮಾಡಿದ್ದಾರೆ.
ಈ ನಡುವೆ ರಾಜ್ಯಸಭಾ ಸದಸ್ಯರಾಗಿರುವ ಸಂಭಾಜಿ ರಾಜೆ ಅವರು ಮರಾಠಾ ಸಮುದಾಯದವರು ಪ್ರತಿಭಟನೆ ಹೆಸರಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.