Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Team Udayavani, Nov 28, 2024, 8:20 AM IST
ಹೊಸದಿಲ್ಲಿ: ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ವಾರವಾಗುತ್ತಾ ಬಂದರೂ ಇನ್ನೂ ಮುಂದಿನ ಮುಖ್ಯಮಂತ್ರಿ ಯಾರೆಂದು ನಿರ್ಧಾರವಾಗಿಲ್ಲ. ಮುಖ್ಯಮಂತ್ರಿ ರೇಸ್ ನಲ್ಲಿದ್ದ ಏಕನಾಥ್ ಶಿಂಧೆ ಇದೀಗ ಹಿಂದೆ ಸರಿದಿದ್ದು, ಬಿಜೆಪಿಯ ವ್ಯಕ್ತಿಯೇ ಮಹಾರಾಷ್ಟ್ರ ಸಿಎಂ ಆಗಲಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೆ ಶಿಂಧೆ ಶಿವಸೇನೆಯ ಒಬ್ಬರು ಮತ್ತು ಅಜಿತ್ ಪವಾರ್ ಎನ್ ಸಿಪಿಯ ಒಬ್ಬರು ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವರದಿ ಹೇಳಿದೆ.
288 ಸ್ಥಾನಗಳ ಮಹಾ ವಿಧಾನಸಭೆಯಲ್ಲಿ ಬಿಜೆಪಿಯು ಸ್ವಂತವಾಗಿ 132 ಅಸೆಂಬ್ಲಿ ಸ್ಥಾನಗಳನ್ನು ಗೆದ್ದುಕೊಂಡಿದೆ. ಮಿತ್ರಪಕ್ಷಗಳ ಮಹಾಯುತಿ ಒಕ್ಕೂಟವು ಒಟ್ಟು 235 ಸ್ಥಾನಗಳನ್ನು ಗೆದ್ದಿದೆ.
ಹೊಸ ಮುಖ್ಯಮಂತ್ರಿಯನ್ನು ಇನ್ನೂ ಹೆಸರಿಸದಿದ್ದರೂ, 2014 ಮತ್ತು 2019 ರ ನಡುವೆ ಅಧಿಕಾರದಲ್ಲಿದ್ದ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ಸಿಎಂ ಆಗುವುದು ಬಹುತೇಕ ನಿಶ್ಚಿತ.
ಬುಧವಾರ ತಮ್ಮ ನಿವಾಸದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಶಿಂಧೆ, “ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಮೋದಿ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧವಾಗಿರಲಿದ್ದೇವೆ. ಯಾವುದೇ ರೀತಿಯ ಅಡ್ಡಗಾಲು ಹಾಕುವುದಿಲ್ಲ. ಮೋದಿ ಹಾಗೂ ಅಮಿತ್ ಶಾ ಅವರಿಗೆ ಕರೆ ಮಾಡಿ ಸಿಎಂ ಆಯ್ಕೆ ಮಾಡಿ ಎಂದು ನಾನೇ ಹೇಳಿದೆ’ ಎಂದು ಹೇಳಿದರು.
“ನಮ್ಮ ಶಿವಸೇನೆ ಬಿಜೆಪಿಗೆ ಎಂದೆಂದಿಗೂ ಬೆಂಬಲ ನೀಡಲಿದೆ. ಬಿಜೆಪಿ ತೆಗೆದುಕೊಳ್ಳುವ ನಿರ್ಧಾರಗಳಿಗೆ ನಾವು ಬದ್ಧರಾಗಿರುತ್ತೇವೆ. ನಮಲ್ಲಿ ಯಾರಿಗೂ ಬೇಸರವಾಗಿಲ್ಲ. ನಾವು ಮಹಾಯುತಿಯ ಒಳಿತಿಗಾಗಿ ದುಡಿಯುತ್ತೇವೆ. ನಾನೊಬ್ಬ ಕಾರ್ಯಕರ್ತ, ನನಗೆ ಸಿಎಂ ಎಂದರೆ ಚೀಫ್ ಮಿನಿಸ್ಟರ್ ಅಲ್ಲ, ಕಾಮನ್‌ಮ್ಯಾನ್. ಗುರುವಾರ ನಾವೆಲ್ಲರೂ ದೆಹಲಿ ಪ್ರಯಾಣ ಕೈಗೊಳ್ಳುತ್ತಿದ್ದೇವೆ. ಈ ವೇಳೆ ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಲಿದ್ದೇವೆ’ ಎಂದರು.
ಮುಖ್ಯಮಂತ್ರಿ ಸ್ಥಾನ ಕೈ ತಪ್ಪುವ ಸಾಧ್ಯತೆ ಇರುವುದರಿಂದ ಏಕನಾಥ್ ಶಿಂಧೆ ಹಾಗೂ ಅವರ ಬೆಂಬಲಿಗರು ಬೇಸರಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದ್ದವು. ಆದರೆ ಪತ್ರಿಕಾಗೋಷ್ಠಿಯ ಸಮಯದಲ್ಲಿ ಶಿಂಧೆ ಯಾವುದೇ ಬೇಸರವನ್ನು ತೋರಿಸಿಕೊಂಡಿಲ್ಲ. ಮಹಾರಾಷ್ಟ್ರ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಏಕನಾಥ ಶಿಂಧೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷೆ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.