ಅಘಾಡಿ ಪತನ: ಬಿಜೆಪಿ ಸಂಭ್ರಮ: ಗೋವಾಕ್ಕೆ ಬಂದಿಳಿದ ಭಿನ್ನಮತೀಯರು
Team Udayavani, Jun 30, 2022, 1:30 AM IST
ಪಣಜಿ/ಮುಂಬಯಿ: ಗುರುವಾರವೇ ವಿಧಾನಸಭೆಯಲ್ಲಿ ವಿಶ್ವಾಸಮತ ಕೋರುವಂತೆ ಸುಪ್ರೀಂಕೋರ್ಟ್ ಸೂಚನೆ ಬೆನ್ನಲ್ಲಿಯೇ ಸಿಎಂ ಹುದ್ದೆಗೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ.
ಈ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಹಾರಾಷ್ಟ್ರದಾದ್ಯಂತ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ “ಕರ್ಮದ ಫಲ ಯಾರನ್ನೂ ಬಿಡುವುದಿಲ್ಲ’ ಎಂದಿದ್ದಾರೆ. ಜತೆಗೆ ಕೊನೇಯ ಸಂಪುಟ ಸಭೆಯಲ್ಲಿ ಕೆಲವೊಂದು ನಗರಗಳ ಹೆಸರು ಬದಲಾವಣೆ ಸೇರಿದಂತೆ ಪ್ರಮುಖ ನಿರ್ಣಯಗಳನ್ನು ಕೈಗೊಂಡಿರುವುದನ್ನು ಖಂಡಿಸಿದ್ದಾರೆ. ಜತೆಗೆ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗೆ ಇಳಿದು ಸಂಭ್ರಮಿಸಿದರು.
ಮುಂಬಯಿಯ ಹೋಟೆಲ್ ಒಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಮುಖಂಡರ ಜತೆಗೆ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಸಿಹಿ ಹಂಚಿ ಸಂಭ್ರಮಿಸಲಾಯಿತು
ಪಣಜಿಗೆ ಆಗಮನ: ಗುವಾಹಾಟಿಯಿಂದ ವಿಶೇಷ ವಿಮಾನದಲ್ಲಿ ಹೊರಟ ಶಿವಸೇನೆಯ ಭಿನ್ನಮತೀಯ ಶಾಸಕರು ಬುಧವಾರ ರಾತ್ರಿ ಗೋವಾ ರಾಜಧಾನಿ ಪಣಜಿಗೆ ಆಗಮಿಸಿದ್ದಾರೆ.
ಬಿಗಿಭದ್ರತೆ: ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆ, ಮುಂಬಯಿಯಾದ್ಯಂತ ಭಾರೀ ಬಿಗಿಭದ್ರತೆ ಏರ್ಪಡಿಸಿದೆ.
ಹೊಸ ಸರಕಾರ ರಚನೆಯಾಗುವ ಹಿನ್ನೆಲೆಯಲ್ಲಿ ಶಿವಸೇನೆಯ ಕಚೇರಿಯಿಂದ ಮಹಾರಾಷ್ಟ್ರ ವಿಧಾನಸಭೆಗೆ ಸಾಗುವ ಎಲ್ಲ ಮಾರ್ಗಗಳಲ್ಲಿ ಪೊಲೀಸ್ ಕಾವಲು ಹಾಕಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ನಾಕಾಬಂದಿ ಹಾಕಲಾಗಿದೆ ಹಾಗೂ ಮಹಾರಾಷ್ಟ್ರ ವಿಧಾನಸೌಧದ ಆವರಣ ಹಾಗೂ ಆಜುಬಾಜಿನಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಪಕ್ಷಗಳ ಬಲ ಪಕ್ಷ ಸಂಖ್ಯೆ
ಶಿವಸೇನೆ 16
ಎನ್‌ಸಿಪಿ 53
ಕಾಂಗ್ರೆಸ್ 44
ಬಿಜೆಪಿ 106
ಶಿಂಧೆ ಬಣ 39
ಪಕ್ಷೇತರರು 29
ತೆರವಾದ ಸ್ಥಾನ 1
ಒಟ್ಟು ಸ್ಥಾನ 288
ಬಹುಮತಕ್ಕೆ 144
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.