Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Team Udayavani, Nov 23, 2024, 8:50 AM IST
ಮಹಾರಾಷ್ಟ್ರ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶನಿವಾರ ಬೆಳಿಗ್ಗೆ ಆರಂಭವಾಗಿದ್ದು, ಮತಎಣಿಕೆ ಕೇಂದ್ರದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಈಗಾಗಲೇ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು ಮಹಾರಾಷ್ಟ್ರದಲ್ಲಿ ಈಗಾಗಲೇ ಅಂಚೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಈಗಾಗಲೇ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಮಹಾ ವಿಕಾಸ್ ಅಘಾಡಿ 18 ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ
ಅಲ್ಲದೆ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದು. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು 2,750 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಪಕ್ಷ ಸಂಪೂರ್ಣವಾಗಿ ಅಧಿಕಾರಕ್ಕೆ ಬರಬೇಕು ಎಂದರೆ 145 ಕ್ಷೇತ್ರಗಳಲ್ಲಿ ಗೆಲುವು ಪಡೆಯಬೇಕಾಗಿದೆ. ಜಾರ್ಖಂಡ್‌ನಲ್ಲಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಬೇಕಾದರೆ 41 ಸ್ಥಾನಗಳಲ್ಲಿ ಜಯ ಸಾಧಿಸಬೇಕಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಒಟ್ಟು 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿತ್ತು. ಜಾರ್ಖಂಡ್‌ನಲ್ಲಿ ಒಟ್ಟು 81 ವಿಧಾನಸಭಾ ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾನ ನಡೆಸಲಾಗಿತ್ತು. ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ 38 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.