Maharatsra Polls: ಮಹಾರಾಷ್ಟ್ರ ಮಹಾಯುತಿ ತೆಕ್ಕೆಗೆ… ಮತಗಟ್ಟೆ ಸಮೀಕ್ಷೆ
Team Udayavani, Nov 21, 2024, 8:15 AM IST
ಹೊಸದಿಲ್ಲಿ: 288 ಸ್ಥಾನಗಳ ವಿಧಾನಸಭೆಗೆ ಮತದಾನ ಮುಕ್ತಾಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು, 9 ಸಮೀಕ್ಷೆಗಳಲ್ಲಿ 8 ಸಮೀಕ್ಷೆಗಳು ಬಿಜೆಪಿ ನೇತೃತ್ವದ ಮಹಾಯುತಿ ಸರಕಾರದ ಪರವಾಗಿ ಭವಿಷ್ಯ ನುಡಿದಿವೆ.
ಕೇವಲ 1 ಸಮೀಕ್ಷೆ ಮಾತ್ರ ಮಹಾ ವಿಕಾಸ ಅಘಾಡಿಗೆ ಬಹುಮತ ಸಿಗಲಿದೆ ಎಂದಿದೆ. ಪ್ರಸ್ತುತ ರಾಜ್ಯದಲ್ಲಿ ಮಹಾಯುತಿ ಮೈತ್ರಿಕೂಟ 202 ಸ್ಥಾನಗಳನ್ನು ಹೊಂದಿವೆ. ಈ ಚುನಾವಣೆ ಸಮೀಕ್ಷೆಗಳ ಪ್ರಕಾರ ಈ ಸ್ಥಾನ 154ಕ್ಕೆ ಕುಸಿತ ಕಂಡರೂ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಗಲಿದೆ. ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಅಘಾಡಿ ಮೈತ್ರಿಕೂಟದ ಸ್ಥಾನಗಳ ಸಂಖ್ಯೆ ಹೆಚ್ಚಾದರೂ ಸಹ ಅಧಿಕಾರ ಹಿಡಿಯಲು ಬೇಕಾದಷ್ಟು ಸ್ಥಾನಗಳನ್ನು ಗೆಲ್ಲುವುದು ಸಾಧ್ಯವಿಲ್ಲ ಎಂದು ಸಮೀಕ್ಷೆಗಳು ಹೇಳಿವೆ.
ದೈನಿಕ್ ಭಾಸ್ಕರ್ ಸುದ್ದಿ ಸಂಸ್ಥೆ ಮಾತ್ರ ಎಂವಿಎಗೆ ಬಹುಮತ ಸಿಗಲಿದೆ ಎಂದು ಹೇಳಿದೆ. ಇದರ ಪ್ರಕಾರ ಎಂವಿಎ 135ರಿಂದ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ. ಆದರೆ ಯಾವುದೇ ಏಕೈಕ ಪಕ್ಷಕ್ಕೆ ಯಾವುದೇ ಸಮೀಕ್ಷೆಗಳು ಬಹುಮತ ನೀಡಿಲ್ಲ.
ಸಮೀಕ್ಷೆ ಸುಳ್ಳಾಗಲಿದ್ದು, ನ.23ರಂದು ಎಂವಿಎ ಮಹಾರಾಷ್ಟ್ರದಲ್ಲಿ ಸರಕಾರ ರಚಿಸಲಿದೆ.
ನಾನಾ ಪಟೋಲೆ, ಕಾಂಗ್ರೆಸ್ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.