ಮಹಾರಾಷ್ಟ್ರದ ವಸತಿ ಸಚಿವ ಜಿತೇಂದ್ರ ಅವಾದ್ ಗೆ ಕೋವಿಡ್ -19 ಸೋಂಕು ದೃಢ
Team Udayavani, Apr 24, 2020, 8:29 AM IST
ಮುಂಬೈ: ಮಹಾರಾಷ್ಟ್ರದ ವಸತಿ ಸಚಿವ ಜಿತೇಂದ್ರ ಅವಾದ್ ಗೆ ಕೊವಿಡ್ ಸೋಂಕು ಪಾಸಿಟಿವ್ ವರದಿ ಬಂದಿದ್ದು, ಐಸೋಲೇಶನ್ ವಾರ್ಡ್ನಲ್ಲಿ ದಾಖಲಿಸಲಾಗಿದೆ.
ಸಚಿವರ ಸಿಬ್ಬಂದಿಗಳಲ್ಲಿ ಕೆಲವರಿಗೆ ಕೋವಿಡ್ 19 ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಾವೂ ಕೂಡ ಪರೀಕ್ಷೆಗೆ ಒಳಪಟ್ಟಿದ್ದರು. ಮಾತ್ರವಲ್ಲದೆ ಏ. 13 ರಿಂದಲೂ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದರು. ಮೊದಲ ಬಾರಿಗೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ಎಂದೂ ಫಲಿತಾಂಶ ಬಂದರೂ, ಎರಡನೇ ಬಾರಿ ಅದು ಪಾಸಿಟಿವ್ ಆಗಿ ಬದಲಾಗಿತ್ತು.
ಕೆಲ ದಿನಗಳ ಹಿಂದೆ ಸಚಿವ ಜಿತೇಂದ್ರ ಅವಾದ್ ಅವರ ಮನೆಯ ಕೆಲಸಗಾರರು, ಮತ್ತು ಐವರು ಭದ್ರತಾ ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ತಾವೂ ಸುಮಾರು 15 ಮಂದಿ ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದ ಕಾರಣಕ್ಕೆ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು.. ಅದಾಗ್ಯೂ ಸಚಿವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಹಾರಾಷ್ಟ್ರದಲ್ಲೇ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಈವರೆಗೂ ಸುಮಾರು 6,427 ಪ್ರಕರಣಗಳು ದೃಢಪಟ್ಟಿವೆ. ಮಾತ್ರವಲ್ಲದೆ ಈ ರಾಜ್ಯದಲ್ಲೇ ದಾಖಲೆಯ 283 ಜನರು ಮೃತಪಟ್ಟಿದ್ದಾರೆಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.