ಪ್ರಹಾರ್ ಜನಶಕ್ತಿ ಪಕ್ಷದ ಮುಖಂಡನ ಗುಂಡಿಕ್ಕಿ ಹತ್ಯೆ
Team Udayavani, Feb 22, 2020, 6:15 PM IST
ಸಾಂದರ್ಭಿಕ ಚಿತ್ರ..
ಅಕೋಲಾ: ಜಿಲ್ಲೆಯ ಅಕೋಟ್ ಪಟ್ಟಣದಲ್ಲಿ ಪ್ರಹಾರ್ ಜನಶಕ್ತಿ ಪಕ್ಷದ(ಪಿಜೆಪಿ) ಸ್ಥಳೀಯ ಮುಖಂಡರೊಬ್ಬರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಗೈದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಪಿಜೆಪಿಯ ಅಕೋಲಾ ಜಿಲ್ಲಾ ಘಟಕದ ಮಾಜಿ ಮುಖ್ಯಸ್ಥರಾಗಿದ್ದ ತುಷಾರ್ ಪುಂಡ್ಕರ್ ಅವರಿಗೆ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಗುಂಡು ಹಾರಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮುಂಜಾನೆ ಅಕೋಲಾದ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು ಎಂದು ಪೊಲೀಸರು ಹೇಳಿದ್ದಾರೆ.
ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಅಕೋಟ್‌ನ ಪೊಲೀಸ್ ಕಾಲೋನಿ ಪ್ರದೇಶದಲ್ಲಿ ಪುಂಡ್ಕರ್ ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಿಂದಿನಿಂದ ಎರಡು ಗುಂಡುಗಳನ್ನು ಹಾರಿಸಿದರು. ದೇಹಕ್ಕೆ ಗುಂಡು ತಗಲಿ ಪುಂಡ್ಕರ್ ನೆಲದ ಮೇಲೆ ಕುಸಿದುಬಿದ್ದರು. ಕೆಲವು ಸ್ಥಳೀಯ ನಿವಾಸಿಗರು ಎಚ್ಚರಿಸಿದ ಅನಂತರ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪುಂಡ್ಕರ್ ಅವರನ್ನು ಪಟ್ಟಣದ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದರು.
ಅನಂತರ ಅವರನ್ನು ಅಕೋಲಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳದಿಂದ ಬಂದೂಕು ಮತ್ತು ಎರಡು ಖಾಲಿ ಕಾಟ್ರಿìಡ್ಜ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪುಂಡ್ಕರ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಅಕೋಲಾ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಹತ್ಯೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದರು.
ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಪಿಜೆಪಿ ಸಂಸ್ಥಾಪಕ ಅಧ್ಯಕ್ಷ ಮತ್ತು ಅಚಲಪುರ ಶಾಸಕ ಬಚ್ಚಾ ಕಡೂ ಅವರು, ಅಪರಾಧದ ಹಿಂದಿನ ದುಷ್ಕರ್ಮಿಗಳ ವಿರುದ್ಧ ತತ್‌ಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಅಪರಾಧದ ದುಷ್ಕರ್ಮಿಗಳು ಮತ್ತು ಕೊಲೆಗೆ ಸುಪಾರಿ ನೀಡಿದ ಜನರನ್ನು ಪತ್ತೆಹಚ್ಚುವುದು ಬಹಳ ಮುಖ್ಯವಾಗಿದೆ ಎಂದವರು ನುಡಿದಿದ್ದಾರೆ.
ಈ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅಕೋಲಾ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಕಡೂ ಹೇಳಿದ್ದಾರೆ. 2019ರ ಅಕ್ಟೋಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪುಂಡ್ಕರ್ ಪಿಜೆಪಿಯ ಟಿಕೆಟ್‌ನಲ್ಲಿ ಅಕೋಟ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.