ಮಹಾರಾಷ್ಟ್ರ : ಪ್ಲಾಸ್ಟಿಕ್‌ ನಿಷೇಧ ಜಾರಿ, ಬಳಸಿದರೆ 5,000 ರೂ. ದಂಡ


Team Udayavani, Jun 23, 2018, 4:39 PM IST

plastic-ban1-600.jpg

ಮುಂಬಯಿ : ಮಹಾರಾಷ್ಟ್ರ ಸರಕಾರ ರಾಜ್ಯಾದ್ಯಂತ ಹೇರಿರುವ ಪ್ಲಾಸ್ಟಿಕ್‌ ನಿಷೇಧ ಇಂದು ಶನಿವಾರದಿಂದ ಜಾರಿಗೆ ಬಂದಿದೆ. 

ಹಾಗಾಗಿ ಯಾವುದೇ ಬಗೆಯ ಪ್ಲಾಸ್ಟಿಕ್‌ ವಸ್ತುಗಳನ್ನು, ಕ್ಯಾರಿ ಬ್ಯಾಗ್‌ ಅಥವಾ ಥರ್ಮಕೋಲ್‌ಗ‌ಳನ್ನು ಜನರು ಬಳಸುವಂತಿಲ್ಲ.

ಈ ನಿಟ್ಟಿನಲ್ಲಿ ಮೊದಲ ಬಾರಿಗೆ ಅಪರಾಧ ಎಸಗುವವರಿಗೆ 5,000 ರೂ. ದಂಡ ಇದೆ; ಎರಡನೇ ಬಾರಿ ಅಪರಾಧ ಎಸಗುವವರಿಗೆ 10,000 ರೂ. ದಂಡ ಇದೆ. ಮೂರನೇ ಬಾರಿ ಅಪರಾಧ ಎಸಗುವವರಿಗೆ 25,000 ರೂ. ದಂಡ ಮತ್ತು ಮೂರು ತಿಂಗಳ ಜೈಲು ಶಿಕ್ಷೆ ಇದೆ. 

ಎಲ್ಲ ಹಿತಾಸಕ್ತಿದಾರರು ಈ ಕ್ರಮವನ್ನು ಬೆಂಬಲಿಸಿದರೆ ಮಾತ್ರವೇ ಪ್ಲಾಸ್ಟಿಕ್‌ ನಿಷೇಧ ರಾಜ್ಯದಲ್ಲಿ ಪರಿಪೂರ್ಣವಾಗಿ ಯಶಸ್ವಿಯಾದೀತು ಎಂದು ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ.

“ಯಾವ ಬಗೆಯ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಸಂಗ್ರಹಿಸಲಾಗದೋ, ನಿಯಂತ್ರಿಸಲಾಗದೋ, ಪುನರ್‌ ಬಳಕೆ ಮಾಡಲಾಗದೋ ಅಂಥವುಗಳನ್ನು ನಾವು ನಿಷೇಧಿಸಿದ್ದೇವೆ; ಆದುದರಿಂದ ಹೊಣೆಯರಿತ ಪ್ಲಾಸ್ಟಿಕ್‌ ಬಳಕೆಯನ್ನು ನಾವು ಉತ್ತೇಜಿಸುತ್ತಿದ್ದೇವೆ’ ಎಂದು ಫ‌ಡ್ನವೀಸ್‌ ಹೇಳಿದರು. 

ಪ್ಲಾಸ್ಟಿಕ್‌ ನಿಷೇಧದಿಂದಾಗಿ ಈಗ ಪರಿಸರ ಹಾಳುಮಾಡುವವರ ಮೇಲೆ ಹೆಚ್ಚಿನ ಹೊಣೆಗಾರಿಕೆ ಇದೆ. ಇದೇ ವೇಳೆ ವ್ಯಾಪಾರ ವಹಿವಾಟುದಾರರಿಗೆ ಸ್ವಲ್ಪ ಮಟ್ಟಿನ ರಿಯಾಯಿತಿ ನೀಡಲಾಗಿದೆ. ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್‌ ಬದಲಿಗೆ ಬಳಸಬಹುದಾದ ವಸ್ತುಗಳು  ದೊಡ್ಡ ಮಟ್ಟದಲ್ಲಿ ಬಳಕೆಗೆ ಬರುವ ತನಕ ವ್ಯಾಪಾರಸ್ಥರಿಗೆ ಹಾನಿ ಆಗದಿರಲೆಂದು ರಿಯಾಯಿತಿ ತೋರಿಸಲಾಗಿದೆ ಎಂದು ಫ‌ಡ್ನವೀಸ್‌ ಹೇಳಿದರು. 

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.