ಮಹಾರಾಷ್ಟ್ರ: KSRTC ಬಸ್‌ಗಳ ಮೇಲೆ ಕಲ್ಲು ತೂರಾಟ
Team Udayavani, Oct 17, 2017, 10:38 AM IST
ಕೊಲ್‌ಹಾಪುರ : ಇಲ್ಲಿನ ಕಾಗಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಕಾರ್ಮಿಕರ ಪ್ರತಿಭಟನೆ ತೀವ್ರಗೊಂಡಿರುವ ವೇಳೆ ಕಲ್ಲು ತೂರಾಟ ನಡೆಸಲಾಗಿದೆ.
ಘಟನೆಯಿಂದಾಗಿ ಬಸ್‌ಗಳು ಸಂಚಾರ ನಿಲ್ಲಿಸಿದ ಕಾರಣ ಹಲವು ಪ್ರಯಾಣಿಕರು ಪರದಾಡಬೇಕಾಯಿತು, ಖಾಸಗಿ ವಾಹನಗಳನ್ನು ಅವಲಂಬಸಿ ಪ್ರಯಾಣ ಮುಂದುವರಿಸಬೇಕಾಯಿತು.
ಬಳ್ಳಾರಿಯಿಂದ ಪೂನಾಕ್ಕೆ ತೆರಳುತ್ತಿದ್ದ ಬಸ್‌ಗಳನ್ನು ಗುರಿಯಾಗಿರಿಸಿ ಕಲ್ಲು ತೂರಾಟ ನಡೆಸಲಾಗಿದೆ. 15 ಕ್ಕೂ ಹೆಚ್ಚು ಬಸ್‌ಗಳನ್ನು ತಡೆಯಲಾಗಿದೆ ಎಂದು ವರದಿಯಾಗಿದೆ.
ಘಟನೆಯ ಬಳಿಕ ಮಹಾರಾಷ್ಟ್ರಕ್ಕೆ ತೆರಳುವ ಎಲ್ಲಾ ಸರ್ಕಾರಿ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಿರುವುದಾಗಿ ಕೆಎಸ್‌ಆಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಹಬ್ಬದ ಸಂಭ್ರಮಕ್ಕಾಗಿ ಪ್ರಯಾಣಿಸಲೇಬೇಕಾದ ಜನರಿಗೆ ಇದರಿಂದಾಗಿ ಭಾರಿ ಸಮಸ್ಯೆ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.