ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಕಾರಿನಿಂದ ಹಾರಿದ ತಾಯಿ: ಮಗು ಸಾವು
Team Udayavani, Dec 11, 2022, 9:44 PM IST
ಮುಂಬೈ: ಕ್ಯಾಬ್ ಚಾಲಕನ ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು 10 ತಿಂಗಳ ಮಗು ಸಮೇತ ತಾಯಿ ಚಲಿಸುತ್ತಿರುವ ಕಾರಿನಿಂದ ಧುಮುಕಿದ್ದು, ಗಾಯಗೊಂಡ ಮಗು ಸ್ಥಳದಲ್ಲೇ ಅಸುನೀಗಿದ ಘಟನೆ ಅಹಮದಾಬಾದ್-ಮುಂಬೈ ಹೆದ್ದಾರಿಯಲ್ಲಿ ನಡೆದಿದೆ.
ಈ ಸಂಬಂಧ ಮಹಾರಾಷ್ಟ್ರದ ವಿರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದ ಪೆಲ್ಹಾರ್ನ ನಿವಾಸಿಯಾಗಿರುವ 19 ವರ್ಷದ ಮಹಿಳೆ, ಮಗುವಿನೊಂದಿಗೆ ಬಾಡಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ಲೈಂಗಿಕ ದೌರ್ಜನ್ಯನಿಂದ ತಪ್ಪಿಸಿಕೊಳ್ಳಲು ಕಾರಿನಿಂದ ಹಾರಿರುವುದಾಗಿ ಆಕೆ ವಿಚಾರಣೆ ವೇಳೆ ತಿಳಿಸಿದ್ದಾರೆ. ಆದರೆ ಆಕೆ ಪದೇ ಪದೆ ಹೇಳಿಕೆ ಬದಲಿಸುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯನ್ನು ಪೊಲೀಸರು ಪಾಲಕರಿಗೆ ಒಪ್ಪಿಸಿದ್ದಾರೆ.ಆದರೆ, ಮಹಿಳೆ ತನ್ನ ಗಂಡನೊಂದಿಗೆ ಮಾತನಾಡಲು ಮೊಬೈಲ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಆಕೆಯ ಕೈನಿಂದ ಜಾರಿ ಮಗು ಕಿಟಿಕಿಯ ಹೊರಗೆ ಬಿದ್ದಿತು ಎಂದು ಕಾರಿನ ಚಾಲಕ ಹೇಳಿದ್ದಾರೆ. ಸತ್ಯ ತಿಳಿಯಲು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.