Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
Team Udayavani, Dec 4, 2024, 12:10 PM IST
ಮುಂಬಯಿ: ಮಾಹಾರಾಷ್ಟ್ರದಲ್ಲಿ ಕುತೂಹಲವಾಗಿ ಉಳಿದಿದ್ದ ಮಾಹಾಯುತಿ ಮೈತ್ರಿಕೂಟದ ನಾಯಕನ ಆಯ್ಕೆ ಕಗ್ಗಂಟು ಬುಧವಾರ ಬಗೆ ಹರಿದಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಭಾರತದ ಆರ್ಥಿಕ ರಾಜಧಾನಿ ಮುಂಬಯಿಯಲ್ಲಿ ಮಹಾಯುತಿ ಮೈತ್ರಿಕೂಟವು ಮತ್ತೆ ಅಧಿಕಾರಕ್ಕೆ ಬಂದ ನಂತರ ಕೆಲ ದಿನಗಳ ಕೂತೂಹಲ ಕೊನೆಗೊಳಿಸಿದ ಬಿಜೆಪಿ ಮಹತ್ವದ ಸಭೆಯಲ್ಲಿ ಫಡ್ನವೀಸ್ ಅವರಿಗೆ ಮೂರನೇ ಅವಧಿಗೆ ಅಧಿಕಾರ ನೀಡಿದೆ. ಹಂಗಾಮಿ ಸಿಎಂ ಶಿವಸೇನಾ ಮುಖ್ಯಸ್ಥ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗುವ ಸಾಧ್ಯತೆ ಇದೆ.
ಫಡ್ನವಿಸ್, ಶಿಂಧೆ ಮತ್ತು ಪವಾರ್ ಅವರು ಗುರುವಾರ ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ಸಭೆಯಲ್ಲಿ, ಮುಂಬೈಗೆ ಪಕ್ಷದ ವೀಕ್ಷಕರಾಗಿ ಬಂದಿದ್ದ ವಿಜಯ್ ರೂಪಾನಿ ಅವರು ಉನ್ನತ ಹುದ್ದೆಗೆ ಫಡ್ನವಿಸ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಪ್ರಸ್ತಾಪವನ್ನು ಬಿಜೆಪಿಯ ಹಿರಿಯ ನಾಯಕರಾದ ಸುಧೀರ್ ಮುಂಗಂತಿವಾರ್ ಮತ್ತು ಪಂಕಜಾ ಮುಂಡೆ ಅವರು ಸರ್ವಾನುಮತದಿಂದ ಅನುಮೋದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್
Panaji: ಸಂತ ಫ್ರಾನ್ಸಿಸ್ ಜೇವಿಯರ್ ಹಬ್ಬ ಆಚರಣೆ
Tragedy: ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.