ಮಾಕೇನ್ ವಿರುದ್ಧ ಕಿರುಕುಳ ದೂರು ನೀಡಿದ ಕೈ ಜಿಲ್ಲಾ ಘಟಕಾಧ್ಯಕ್ಷೆ !
Team Udayavani, Apr 14, 2017, 1:51 PM IST
ಹೊಸದಿಲ್ಲಿ : ದೆಹಲಿ ಕಾಂಗ್ರೆಸ್ನಲ್ಲಿ ರುವ ಆಂತರಿಕ ಕಲಹಕ್ಕೆ ಸಾಕ್ಷಿ ಎಂಬಂತೆ ಮಹಿಳಾ
ಕಾಂಗ್ರೆಸ್ನ ಜಿಲ್ಲಾ ಅಧ್ಯಕ್ಷೆಯೊಬ್ಬರು ಪಕ್ಷದ ಹಿರಿಯ ನಾಯಕ ಅಜಯ್ ಮಾಕೇನ್ ಸೇರಿದಂತೆ ಮೂವರ ವಿರುದ್ಧ ಕಿರುಕುಳ ನೀಡಿದ ಆರೋಪ ಮಾಡಿದ್ದಾರೆ.
ರಚನಾ ಸಚ್ದೇವಾ ಎನ್ನುವರು ಮಾಕೇನ್ ಮತ್ತು ಹಿರಿಯ ನಾಯಕಿ ಶೋಭಾ ಓಝಾ ಮತ್ತು ನೆಟ್ಟಾ ಡಿ ಸೋಜಾ ವಿರುದ್ಧ ಮಾನಸಿಕ ಕಿರುಕಳ ನೀಡಿದ ಬಗ್ಗೆ ಆರೋಪ ಮಾಡಿದ್ದಾರೆ.
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯ ಟಿಕೇಟ್ ಹಂಚಿಕೆ ವಿಚಾರದಲ್ಲಿ ರಾಹುಲ್ ಗಾಂಧಿ ಅವರ ಭೇಟಿಯಾದ ಕಾರಣಕ್ಕೆ ನನ್ನನ್ನು ಕೋಣೆಯೊಂದರಲ್ಲಿ ಬಂಧಿಯಾಗಿಸಿ ಕ್ಷಮಾಪಣ ಪತ್ರ ಬರೆಸಲಾಗಿದೆ ಎಂದು ರಚನಾ ಆರೋಪಿಸಿ ತುಘಲಕ್ ರಸ್ತೆಯ ಪೊಲೀಸ್ ಠಾಣೆಗೆ ಮೂವರ ವಿರುದ್ಧ ದೂರು ನೀಡಿದ್ದಾರೆ.
ಕಾಂಗ್ರೆಸ್ ನಾಯಕರು ತಮ್ಮ ಸಂಬಂಧಿಕರಿಗೆ ಟಿಕೇಟ್ ಹಂಚುತ್ತಿದ್ದು ನೈಜ ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಆರೋಪವನ್ನು ತಳ್ಳಿ ಹಾಕಿರುವ ಶೋಭಾ ಓಝಾ ಬಿಜೆಪಿ ಚಿತಾವಣೆಯಲ್ಲಿ ರಚನಾ ಈ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.