ಮೈನ್‌ಪುರಿ ಲೋಕಸಭಾ ಉಪಚುನಾವಣೆ : ಡಿಂಪಲ್ ಕಣಕ್ಕಿಳಿಸಿದ ಎಸ್ ಪಿ
Team Udayavani, Nov 13, 2022, 2:20 PM IST
ಲಕ್ನೋ : ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಮಾಜವಾದಿ ಪಕ್ಷವು ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರನ್ನು ಕಣಕ್ಕಿಳಿಸಿದೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ತೆರವಾದ ಮೈನ್‌ಪುರಿ ಕ್ಷೇತ್ರದಲ್ಲಿ ಡಿಸೆಂಬರ್ 5 ರಂದು ಉಪಚುನಾವಣೆ ನಿಗದಿಯಾಗಿದ್ದು ಸಮಾಜವಾದಿ ಪಕ್ಷವು ಕುಟುಂಬದ ಭದ್ರಕೋಟೆಯನ್ನು ಹೊಂದಿದ್ದು, ಬಿಜೆಪಿಯ ಸವಾಲನ್ನು ಹಿಮ್ಮೆಟ್ಟಿಸಲು ಹೊಸ ತಂತ್ರ ಹಣೆದಿದೆ.
ಕ್ಷೇತ್ರದ ಅಡಿಯಲ್ಲಿ ಬರುವ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎರಡು ಸ್ಥಾನಗಳನ್ನು ಪ್ರಸ್ತುತ ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಯಾದವ್ ಅವರು ಶಾಸಕರಾಗಿ ಪ್ರತಿನಿಧಿಸುತ್ತಿದ್ದಾರೆ.
”ಮೈನ್‌ಪುರಿಯಲ್ಲಿ ಒಂದು ಕಾಲದಲ್ಲಿ ಎಸ್‌ಪಿ ಬೂತ್ ವಶಪಡಿಸಿಕೊಳ್ಳುವುದು, ಮತ ದೋಚುವುದು, ಜನರನ್ನು ಬೆದರಿಸುವುದು ಸಾಮಾನ್ಯವಾಗಿತ್ತು, ಆದರೆ ಈಗ ಚುನಾವಣೆಗಳು ಪಾರದರ್ಶಕವಾಗಿದ್ದು, ಬಿಜೆಪಿ ಕೂಡ ಪ್ರಬಲ ಅಭ್ಯರ್ಥಿಯೊಂದಿಗೆ ಸ್ಪರ್ಧಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರದೀಪ್ ಚೌಹಾಣ್ ಹೇಳಿಕೆ ನೀಡಿದ್ದಾರೆ.ಹಲವರ ಹೆಸರು ಕೇಳಿ ಬರುತ್ತಿದ್ದು ಬಿಜೆಪಿ ಅಭ್ಯರ್ಥಿ ಇನ್ನಷ್ಟೇ ಅಂತಿಮವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.