AIADMK ಮಾಜಿ ಸಂಸದ ಮೈತ್ರೇಯನ್ ಬಿಜೆಪಿ ಸೇರ್ಪಡೆ
ಎರಡು ದಶಕಗಳ ನಂತರ ಮಾತೃ ಪಕ್ಷಕ್ಕೆ ಮರಳಿದ ನಾಯಕ
Team Udayavani, Jun 9, 2023, 10:17 PM IST
ಹೊಸದಿಲ್ಲಿ: ಎಐಎಡಿಎಂಕೆಯ ಮಾಜಿ ಸಂಸದ ಡಾ.ವಿ ಮೈತ್ರೇಯನ್ ಅವರು ಶುಕ್ರವಾರ (ಜೂನ್ 9) ಮಾತೃ ಪಕ್ಷಕ್ಕೆ ಬಿಜೆಪಿ ಸೇರ್ಪಡೆಗೊಂಡರು.
ಪಕ್ಷದ ದೆಹಲಿಯ ಪ್ರಧಾನ ಕಚೇರಿಯಲ್ಲಿ ಬಿಜೆಪಿ ನಾಯಕ ಅರುಣ್ ಸಿಂಗ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಅವರ ಆರಂಭಿಕ ದಿನಗಳಿಂದಲೂ, ಮೈತ್ರೇಯನ್ ಅವರು RSS ಸದಸ್ಯರಾಗಿದ್ದರು. 1991 ರಲ್ಲಿಬಿಜೆಪಿ ತಮಿಳುನಾಡು ಘಟಕದ ಕಾರ್ಯಕಾರಿ ಸದಸ್ಯರಾದರು. 1995 ರಿಂದ 1997 ರವರೆಗೆ ಬಿಜೆಪಿಯ ತಮಿಳುನಾಡು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, 1997 ರಿಂದ 1999 ರವರೆಗೆ ಉಪಾಧ್ಯಕ್ಷರಾಗಿ ಮತ್ತು 1999 ರಿಂದ 2000 ರವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2000 ರಲ್ಲಿ ಅವರು ಬಿಜೆಪಿಗೆ ರಾಜೀನಾಮೆ ನೀಡಿ AIADMK ಗೆ ಸೇರಿದ್ದರು. 2022 ರಲ್ಲಿ ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿತರಾಗಿದ್ದರು.
2024 ಮತ್ತು 2026ರಲ್ಲಿ ತಮಿಳುನಾಡಿನಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ನಡೆಯಲಿದ್ದು ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.