ಉಗ್ರರ ಸಂಚು ವಿಫಲ; ಜಮ್ಮು-ಕಾಶ್ಮೀರ ಸೋಫೋರ್ ಸೇತುವೆ ಕೆಳಗೆ 3ಕೆಜಿ ಐಇಡಿ ಪತ್ತೆ
ಐಇಡಿಯನ್ನು ನಿಷ್ಕ್ರಿಯಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
Team Udayavani, Jan 13, 2020, 3:21 PM IST
ನವದೆಹಲಿ: ಸುಮಾರು ಮೂರು ಕೆಜಿಯಷ್ಟು ಐಇಡಿ(ಸುಧಾರಿತ ಸ್ಫೋಟಕ ಸಾಧನ)ಯನ್ನು ಭದ್ರತಾ ಪಡೆ ಜಮ್ಮು-ಕಾಶ್ಮೀರದ ಸೋಪೋರ್ ಸೇತುವೆ ಕೆಳಭಾಗದಲ್ಲಿ ಪತ್ತೆಹಚ್ಚುವ ಮೂಲಕ ಉಗ್ರರ ದಾಳಿಯನ್ನು ವಿಫಲಗೊಳಿಸಿರುವ ಘಟನೆ ಸೋಮವಾರ ನಡೆದಿದೆ.
ಅಪಾರ ಪ್ರಮಾಣದಲ್ಲಿ ಐಇಡಿ ಪತ್ತೆಯಾದ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ. ಐಇಡಿಯನ್ನು ನಿಷ್ಕ್ರಿಯಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
33ನೇ ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು, ಕಾಶ್ಮೀರ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ರಫಿಯಾಬಾದ್ ಸೇತುವೆ ಕೆಳಗೆ ಸುಮಾರು 3ಕೆಜಿಯಷ್ಟು ಐಇಡಿ ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.
ಐಇಡಿ ಮೂಲಕ ಸ್ಫೋಟ ನಡೆಸುವ ಸಂಚಿನ ಹಿಂದೆ ಯಾವ ಭಯೋತ್ಪಾದಕ ಸಂಘಟನೆ ಇದೆ ಎಂಬುದನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.