![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 7, 2020, 11:00 AM IST
ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಪೊಲೀಸರು ಸೋಮವಾರ(ಡಿಸೆಂಬರ್ 7, 2020) ಐವರು ಭಯೋತ್ಪಾದಕರನ್ನು ಬಂಧಿಸುವ ಮೂಲಕ ಭಾರೀ ದಾಳಿಯ ಸಂಚನ್ನು ವಿಫಲಗೊಳಿಸಿರುವುದಾಗಿ ವರದಿ ತಿಳಿಸಿದೆ.
ದೆಹಲಿಯ ಶಕರ್ ಪುರ್ ಪ್ರದೇಶದಲ್ಲಿ ಗುಂಡಿನ ಚಕಮಕಿಯ ಬಳಿಕ ಐವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಸ್ಪೆಷಲ್ ಸೆಲ್ ಡಿಸಿಪಿ ಪ್ರಮೋದ್ ಕುಶ್ವಾಹಾ ತಿಳಿಸಿದ್ದಾರೆ. ಈ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಇವರು ಮೂವರು ಉಗ್ರರು ಜಮ್ಮು-ಕಾಶ್ಮೀರ ಮೂಲದವರಾಗಿದ್ದು, ಇಬ್ಬರು ಪಂಜಾಬ್ ರಾಜ್ಯಕ್ಕೆ ಸೇರಿದವರು ಎಂದು ವರದಿ ವಿವರಿಸಿದೆ. ಸ್ಪೆಷಲ್ ಸೆಲ್ ಅಧಿಕಾರಿಗಳು ಉಗ್ರರನ್ನು ಬಂಧಿಸಲು ತೆರಳಿದ್ದ ವೇಳೆ ಗುಂಡಿನ ದಾಳಿ ನಡೆದಿತ್ತು. ನಂತರ ಐವರು ಶಂಕಿತ ಉಗ್ರರನ್ನು ಬಂಧಿಸಿ, ಅವರ ಬಳಿ ಇದ್ದ ಶಸ್ತ್ರಾಸ್ತ್ರ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಪೊಲೀಸರ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್ ಎಂಎಲ್ ಸಿ ಪುತ್ರ ಮತ್ತು ಸ್ನೇಹಿತರು
ರಾಜಧಾನಿ ದೆಹಲಿಯ ಖಾನ್ ಮಾರ್ಕೆಟ್ ಪ್ರದೇಶದಲ್ಲಿ 20 ದಿನಗಳ ಹಿಂದೆ ಸ್ಫೋಟದ ಸಂಚು ರೂಪಿಸಿದ್ದ ಜೈಶ್ ಎ ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ದೆಹಲಿ ದೆಹಲಿ ಪೊಲೀಸರು ಸೆರೆಹಿಡಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ವರದಿ ವಿವರಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.