ಅಫ್ಘಾನ್‌ನಲ್ಲಿ ಕಾಶ್ಮೀರ ಪ್ರೈಜ್‌ ಕ್ಯಾಚ್‌: 25 ವರ್ಷ ಹಿಂದೆ ದೇಶ ತೊರೆದಿದ್ದ ಉಗ್ರ ಸೆರೆ


Team Udayavani, Apr 18, 2020, 6:33 AM IST

ಅಫ್ಘಾನ್‌ನಲ್ಲಿ ಕಾಶ್ಮೀರ ಪ್ರೈಜ್‌ ಕ್ಯಾಚ್‌: 25 ವರ್ಷ ಹಿಂದೆ ದೇಶ ತೊರೆದಿದ್ದ ಉಗ್ರ ಸೆರೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ/ಶ್ರೀನಗರ: ಅಫ್ಘಾನಿಸ್ಥಾನದಲ್ಲಿ ಇಪ್ಪತ್ತೈದು ವರ್ಷಗಳ ಹಿಂದೆಯೇ ಜಮ್ಮು ಮತ್ತು ಕಾಶ್ಮೀರ ವಿರೋಧಿ ಚಟುವಟಿಕೆಗಳು ಶುರುವಾಗಿದ್ದವು ಎಂಬ ಅಂಶ ಬೆಳಕಿಗೆ ಬಂದಿದೆ. ಆ ದೇಶದ ನ್ಯಾಷನಲ್‌ ಡೈರೆಕ್ಟೊರೇಟ್‌ ಆಫ್ ಸೆಕ್ಯುರಿಟಿ (ಎನ್‌ಡಿಎಸ್‌) ಕೆಲ ದಿನಗಳ ಹಿಂದೆ ಇಸ್ಲಾಮಿಕ್‌ ಸ್ಟೇಟ್‌ ಖೊರೊಸಾನ್‌ ಪ್ರಾವಿನ್ಸ್‌ (ಐಎಸ್‌ಕೆಪಿ) ಉಗ್ರ ಸಂಘಟನೆಯ ಮುಖ್ಯಸ್ಥ ಅಸ್ಲಾಂ ಫಾರೂಕಿ ಜತೆಗೆ ಜಮ್ಮು ಮತ್ತು ಕಾಶ್ಮೀರದಿಂದ 25 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಇಜಾಝ್ ಅಹ್ಮದ್‌ ಅಹಂಗಾರ್‌ ಎಂಬಾತನನ್ನೂ ಬಂಧಿಸಲಾಗಿದೆ.

1990ರ ದಶಕದಲ್ಲಿ ಉಗ್ರರ ಜತೆಗೆ ಲಿಂಕ್‌ ಇದ್ದ ಆರೋಪದಲ್ಲಿ ಬಂಧಿಸಲಾಗಿತ್ತು ಮತ್ತು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ. ನಂತರ ಆತ ಬಾಂಗ್ಲಾದೇಶಕ್ಕೆ ತೆರಳಿ ಪಾಕಿಸ್ತಾನಕ್ಕೆ ತೆರಳಿದ್ದ.

ಆರಂಭದಲ್ಲಿ ಅಹಂಗಾರ್‌ನ ಪ್ರಾಮುಖ್ಯತೆ ಅಫ್ಘಾನ್‌ನ ತನಿಖಾ ಸಂಸ್ಥೆಗೆ ಗೊತ್ತಾಗಿರಲಿಲ್ಲ. ಅನಂತರ ನಡೆದ ವಿಚಾರಣೆ ವೇಳೆ ಆತನೇ ಕೇಂದ್ರಾಡಳಿತ ಪ್ರದೇಶದಲ್ಲಿ ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆಗೆ ಪ್ರಮುಖ ನೇಮಕ ಮಾಡಿಕೊಳ್ಳುವ ವ್ಯಕ್ತಿ ಎಂದು ಮೂಲಗಳನ್ನು ಉಲ್ಲೇಖೀಸಿ ‘ದ ಹಿಂದುಸ್ಥಾನ್‌ ಟೈಮ್ಸ್‌’ ವರದಿ ಮಾಡಿದೆ.

ಶ್ರೀನಗರದ ಬುಗಾಂನಲ್ಲಿ ಜನಿಸಿರುವ ಅಹಂಗಾರ್‌ನ ಕುಟುಂಬಕ್ಕೆ ಉಗ್ರ ನಂಟು ಇದೆ. ಆತನ ಮಾವ ಅಬ್ದುಲ್ಲಾ ಘಝನಿ ಲಷ್ಕರ್‌-ಎ-ತೊಯ್ಯಬಾದ ಕಮಾಂಡರ್‌ ಆಗಿದ್ದ. ನಂತರ ಅಲ್‌-ಖೈದಾಕ್ಕೆ ಸೇರಿ ಕೊನೆಯದಾಗಿ ಐಸಿಸ್‌ಗೆ ಸೇರ್ಪಡೆಯಾಗಿದ್ದ.

ಅಹಂಗಾರ್‌ನ ಪುತ್ರ ಅಬ್ದುಲ್ಲಾ ಉಮಿಯಾಸ್‌  ಅಫ್ಘಾನಿಸ್ತಾನದ ನಂಗರ್‌ಹಾರ್‌ನಲ್ಲಿ ಬುಡಮೇಲು ಕೃತ್ಯಗಳಲ್ಲಿ ಭಾಗವಹಿಸಿ ಭದ್ರತಾ ಪಡೆಗಳ ಗುಂಡಿಗೆ ಜೀವ ಕಳೆದುಕೊಂಡಿದ್ದ. ಇಝಾಜ್‌ ಅಹ್ಮದ್‌ನ ಅಳಿಯ ಹುಝಾಫಾ- ಅಲ್‌-ಬಕಿಸ್ತಾನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆನ್‌ಲೈನ್‌ ಮೂಲಕ ನೇಮಕ ಮಾಡಿಕೊಳ್ಳುತ್ತಿದ್ದಾತ 2019ರಲ್ಲಿ ಕೊಲ್ಲಲ್ಪಟ್ಟಿದ್ದ.

ಇಬ್ಬರು ಫಿನಿಶ್‌: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಶುಕ್ರವಾರ ಗುಂಡಿನ ಕಾಳಗ ನಡೆದಿದೆ. ಅದರಲ್ಲಿ ಇಬ್ಬರು ಉಗ್ರರನ್ನು ಕೊಲ್ಲಲಾ ಗಿದೆ. ದೈರೂ ಎಂಬಲ್ಲಿ ಉಗ್ರರಿರುವ ಬಗ್ಗೆ ಮಾಹಿತಿ ದೊರೆತು, ಕಾರ್ಯಾಚರಣೆ ಶುರು ಮಾಡಿದಾಗ ಗುಂಡಿನ ಕಾಳಗ ನಡೆದಿದೆ.

ಟಾಪ್ ನ್ಯೂಸ್

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುತ್ತಲೇ ಉಸಿರುಗಟ್ಟಿ ದಂಪತಿ ಸಾ*ವು…

Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…

MONEY (2)

IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ

Suicide 3

Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.