ನೂತನ ಕೃಷಿ ಕಾಯ್ದೆಗಳಿಗೆ ಬಹುಮತ

ಕಾಯ್ದೆಗಳಿಗೆ ಬೆಂಬಲ ಸೂಚಿಸಿದ ಶೇ.53.6 ಭಾರತೀಯರು!

Team Udayavani, Dec 22, 2020, 12:30 AM IST

ನೂತನ ಕೃಷಿ ಕಾಯ್ದೆಗಳಿಗೆ ಬಹುಮತ

ಕೃಷಿ ಕಾಯ್ದೆ ವಾಪಸ್‌ಗೆ ಆಗ್ರಹಿಸಿ ಪ್ರಧಾನಿ ಮೋದಿ ಅವರಿಗೆ ರೈತರಿಂದ ನೆತ್ತರ ಪತ್ರ.

ಹೊಸದಿಲ್ಲಿ: ಕೇಂದ್ರದ ಹೊಸ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ 26ನೇ ದಿನ ಪೂರೈಸಿರುವಂತೆಯೇ, ಬಹುತೇಕ ಭಾರ ತೀಯರು ಈ ಕಾಯ್ದೆಗಳಿಗೆ ಬೆಂಬಲ ಸೂಚಿಸಿದ್ದಾರಲ್ಲದೇ, ರೈತರು ಪ್ರತಿಭಟನೆ ಯನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ನ್ಯೂಸ್‌18 ನೆಟ್‌ವರ್ಕ್‌ ನಡೆಸಿರುವ ಸಮೀಕ್ಷೆ ಯಿಂದ ಈ ವಿಚಾರ ತಿಳಿದುಬಂದಿದೆ. 22 ರಾಜ್ಯಗಳ 2400ಕ್ಕೂ ಅಧಿಕ ಮಂದಿ ಯನ್ನು ಈ ಸಮೀಕ್ಷೆಯಲ್ಲಿ ಬಳಸಿಕೊಳ್ಳ ಲಾಗಿದೆ. ಹೊಸ ಕಾಯ್ದೆಗ ಳಿಂದಾಗಿ ರೈತರಿಗೆ ಅನು ಕೂಲವಾಗಲಿದೆ ಎಂದೇ ಅನೇಕರು ಅಭಿಪ್ರಾಯಪಟ್ಟಿದ್ದು, ಉತ್ತರಪ್ರದೇಶ, ಮಧ್ಯಪ್ರದೇಶ, ಆಂಧ್ರ ಮತ್ತು ತೆಲಂಗಾ ಣಗಳಂತಹ ಕೃಷಿ ಅವಲಂಬಿತ ರಾಜ್ಯಗಳಲ್ಲೂ ಕಾಯ್ದೆಗಳ ಪರ ಜನಾಭಿಪ್ರಾಯವಿರುವುದು ವಿಶೇಷ. ಆದರೆ ಪಂಜಾಬ್‌ನಲ್ಲಿ ಈ ಕಾಯ್ದೆಗಳಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಶೇ.53.6ರಷ್ಟು ಮಂದಿ ಕಾಯ್ದೆಗಳಿಗೆ ಬೆಂಬಲ ಸೂಚಿಸಿದ್ದು, ಶೇ.56.59ರಷ್ಟು ಮಂದಿ ಅನ್ನದಾತರು ಪ್ರತಿಭಟನೆ ವಾಪಸ್‌ ಪಡೆಯಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಹೊಸ ಕಾಯ್ದೆಗಳಿಂದಾಗಿ ರೈತರ ಬೆಳೆಗೆ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ಶೇ.60.9ರಷ್ಟು ಮಂದಿ ಅಭಿಪ್ರಾಯ ಪಟ್ಟರೆ, ಎಪಿಎಂಸಿ ಮಂಡಿಗಳಿಂದ ಹೊರಗಡೆಯೂ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ಸಿಗುವುದನ್ನು ಶೇ.69.65 ಮಂದಿ ಸ್ವಾಗತಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಸರಕಾರ ಸೂಕ್ತ ಪರಿಹಾರ ಒದಗಿಸಲಿ
ಸೋಮವಾರ ದೇಶಾದ್ಯಂತ ಪ್ರತಿಭಟನ ಸ್ಥಳಗಳಲ್ಲಿ ರೈತರು ಒಂದು ದಿನದ ಉಪವಾಸ ಕೈಗೊಂಡಿದ್ದಾರೆ. ಜತೆಗೆ ಮುಂದಿನ ಸುತ್ತಿನ ಮಾತುಕತೆಗೆ ಸಂಬಂಧಿಸಿ ಸರಕಾರ ಬರೆದಿರುವ ಪತ್ರದಲ್ಲಿ ಹೊಸತೇನೂ ಇಲ್ಲ. ನಾವು ಮಾತುಕತೆಗೆ ಸದಾ ಸಿದ್ಧರಿದ್ದೇವೆ. ಆದರೆ, ಸರಕಾರ ನಮ್ಮ ಬೇಡಿಕೆಗೆ ತಕ್ಕಂತೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತರು ಹೇಳಿದ್ದಾರೆ. ಇದೇ ವೇಳೆ, ಕೃಷಿ ಕಾಯ್ದೆಗಳ ಕುರಿತು ಚರ್ಚಿಸಲು ಕೇರಳ ಸರಕಾರವು ಡಿ. 23ರಂದು ವಿಧಾನಸಭೆಯ ವಿಶೇಷ ಅಧಿವೇಶನ ಕರೆದಿದೆ. ರೈತರಿಂದ ರಕ್ತದಾನ: ಸಿಂಘು ಗಡಿಯಲ್ಲಿ ಎನ್‌ಜಿಒವೊಂದು ರಕ್ತದಾನ ಶಿಬಿರ ಏರ್ಪಡಿಸಿದ್ದು, ಪ್ರತಿಭಟನಾನಿರತ ಅನ್ನದಾತರು ಸಾಲುಗಟ್ಟಿ ಈ ಶಿಬಿರದಲ್ಲಿ ಪಾಲ್ಗೊಂಡರು. ಒಂದೇ ದಿನದಲ್ಲಿ 240 ರೈತರು ರಕ್ತದಾನ ಮಾಡಿದ್ದಾರೆ.

ವಿದೇಶಿ ದೇಣಿಗೆ ಮೇಲೆ ಕೇಂದ್ರ ಸರಕಾರ ನಿಗಾ
ರೈತರ ಪ್ರತಿಭಟನೆಗೆ ವಿದೇಶದಿಂದ ಹಣಕಾಸು ನೆರವು ಹರಿದುಬಂದಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ, ಕೇಂದ್ರ ಸರಕಾರ ಈ ಕುರಿತು ವಿವರಣೆ ಕೋರಿದೆ. ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ಎಂಬ ರೈತ ಸಂಘಟನೆಯು ಅನುಮತಿ ಇಲ್ಲದೇ 10 ಲಕ್ಷ ರೂ.ಗಳನ್ನು ವಿದೇಶದಿಂದ ಪಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಬಿಕೆಯು ಖಾತೆ ಹೊಂದಿರುವ ಪಂಜಾಬ್‌ನ ಬ್ಯಾಂಕ್‌ಗೆ ಫಾರೆಕ್ಸ್‌ ಇಲಾಖೆಯು ಇಮೇಲ್‌ ಕಳುಹಿಸಿ, ವಿದೇಶಿ ದೇಣಿಗೆಯ ನೋಂದಣಿ ವಿವರ ನೀಡುವಂತೆ ಸೂಚಿಸಿತ್ತು. ಈ ಬಗ್ಗೆ ಬ್ಯಾಂಕ್‌ನ ಅಧಿಕಾ ರಿಯು ರೈತ ಸಂಘಟನೆಯ ಪ್ರಧಾನ ಕಾರ್ಯದರ್ಶಿಗೆ ಮಾಹಿತಿ ನೀಡಿದ ಬಳಿಕ ವಿಚಾರ ಬಹಿರಂಗವಾಗಿತ್ತು.

ಎಷ್ಟು ರಾಜ್ಯಗಳಲ್ಲಿ ಸಮೀಕ್ಷೆ?-22
ಎಷ್ಟು ಜನ ಭಾಗಿ-2400
ಕೃಷಿ ಕಾಯ್ದೆಗಳ ಪರ – 53.6%
ರೈತರು ಪ್ರತಿಭಟನೆ ವಾಪಸ್‌ ಪಡೆಯಬೇಕು ಎಂದವರು-56.59%
ಕೃಷಿಯ ಆಧುನೀಕರಣಕ್ಕೆ ಬೆಂಬಲ-73.05%
ಪ್ರತಿಭಟನೆ ರಾಜಕೀಯ ಪ್ರೇರಿತ-48.7%

ಟಾಪ್ ನ್ಯೂಸ್

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.