ಇಂದು ಸಂಜೆ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ವೀಕ್ಷಣೆಗೆ 9 ಕೇಂದ್ರ: ಬಿಗಿ ಪೊಲೀಸ್ ಭದ್ರತೆ

Team Udayavani, Jan 15, 2020, 8:40 AM IST

SHABARIMALE-1

ಶಬರಿಮಲೆ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಕೇರಳದ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಕ್ತರ ಗಡಣವೇ ಎದ್ದು ಕಾಣುತ್ತಿದೆ. ಸನ್ನಿಧಾನ ಸುತ್ತ ಪೊಲೀಸ್ ಪಹರೆ ಬಿಗುಗೊಳಿಸಲಾಗಿದೆ. ಬುಧವಾರ ಸಂಜೆ ಜ್ಯೋತಿ ದರ್ಶನವಾಗುವುದಾದರೂ ಮುಂಜಾನೆಯೇ ಸನ್ನಿಧಾನದ ಆಸುಪಾಸಿನ 9 ಕೇಂದ್ರಗಳಲ್ಲಿ ಭಕ್ತರು  ತುಂಬಿಕೊಂಡಿದ್ದಾರೆ.

ಸನ್ನಿಧಾನದಲ್ಲಿರುವ ವಾವರ ಸ್ವಾಮಿಯ ನಡೆಯಲ್ಲಿ, ಅಗ್ನಿಕುಂಡದ ಸಮೀಪ, ಅಪ್ಪ-ಅರವಣ ವಿತರಣಾ ಕೌಂಟರ್ ಸಮೀಪ, ಅನ್ನದಾನ ಮಂಟಪದ ಬಳಿ, ಮರಕ್ಕೂಟಂನಲ್ಲಿ, ಮಾಳಿಗಪುರತ್ತಮ್ಮ ದೇವಸ್ಥಾನದಲ್ಲಿ, ಇನ್ಸಿನೇಟರ್ ಕೇಂದ್ರ, ಶರಮ್ ಗುತ್ತಿ, ಪಾಂಡಿತ್ತಾವಳದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರು ಮಕರಜ್ಯೋತಿ ವೀಕ್ಷಿಸಲಿದ್ದಾರೆ. ಪಿಳ್ಳಂಪಲ್ಲಿ, ನೀಲಕ್ಕಲ್, ಗಣೇಶ ಬೆಟ್ಟ ಪ್ರದೇಶದಲ್ಲೂ ಭಕ್ತರು ಸೇರಿಕೊಂಡಿದ್ದಾರೆ.

ಅಪಾಯ ಎದುರಾಗುವ ಹಿನ್ನೆಲೆಯಲ್ಲಿ  ಬಹು ಮಹಡಿ ಕಟ್ಟಡಗಳ ಮೇಲೆ ಹಾಗೂ ಪಂಪಾ ನದಿಯ ಸನಿಹವಿರುವ ಹಿಲ್​ಟಾಪ್​ನಲ್ಲಿ ಮಕರ ಜ್ಯೋತಿ ವೀಕ್ಷಣೆಗೆ ಇಲ್ಲಿನ ಪೊಲೀಸರು ನಿರ್ಬಂಧ ಹೇರಿದ್ದಾರೆ. ಶಬರಿಮಲೆ ಶ್ರೀಅಯ್ಯಪ್ಪ ಸನ್ನಿಧಾನದಲ್ಲಿ ಮಕರಜ್ಯೋತಿ ವೀಕ್ಷಣೆಗೆ ತಯಾರಿ ಪೂರ್ತಿಗೊಂಡಿದ್ದು, ಭಕ್ತರು ಭಾರಿ ಪ್ರಮಾಣದಲ್ಲಿ ಕ್ಷೇತ್ರಕ್ಕೆ ಬಂದು ಸೇರುತ್ತಿದ್ದಾರೆ.

ಜ.15ರಂದು ಪ್ರಾತಃ 2.09ಕ್ಕೆ ಮಕರ ಸಂಕ್ರಮಣ ಪೂಜೆ ನಡೆಸಲಾಯಿತು.ಈ ಹಿನ್ನೆಲೆಯಲ್ಲಿ ಜ.14ರ ತಡರಾತ್ರಿವರೆಗೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.  ಜ.15 ರ ಬುಧವಾರ ಪ್ರಾತಃಕಾಲ 2.09ಕ್ಕೆ ಸೂರ್ಯನು ಧನುರಾಶಿಯಿಂದ ಮಕರ ರಾಶಿಗೆ ಪ್ರವೇಶಿಸಿದಾಗ ಮಕರ ಸಂಕ್ರಮಣ ಪೂಜೆ ಮತ್ತು ಸಂಕ್ರಮಣಾಭಿಷೇಕ ನಡೆಸಲಾಯಿತು.  ತಿರುವನಂತಪುರಂನ ಕಾವಾಡಿಯಾರ್ ಅರಮನೆಯ ವಿಶೇಷ ತುಪ್ಪವನ್ನು ಸನ್ನಿಧಾನಕ್ಕೆ ತರಲಾಗಿದೆ.

ಸಂಕ್ರಮಣ ಪೂಜೆ ಹಾಗೂ ಸಂಕ್ರಮಣ ಅಭಿಷೇಕ ನಡೆದ ಬಳಿಕ ಹರಿವರಾಸನಂ ಹಾಡಿನೊಂದಿಗೆ ಗರ್ಭಗುಡಿ ಬಾಗಿಲು ಮುಚ್ಚಲಾಯಿತು.

ಪಂದಳ ಅರಮನೆಯಿಂದ ಜ.13ರ ಸೋಮವಾರ ಹೊರಟ ಪವಿತ್ರ ತಿರುವಾಭರಣಂಗಳನ್ನು ಹೊತ್ತುಕೊಂಡ ಮೆರವಣಿಗೆ ಜ.15ರ ಬುಧವಾರ ಮಧ್ಯಾಹ್ನ ಪಂಪಾಗೆ  ತಲುಪಲಿದ್ದು, ಅಲ್ಲಿಂದ ಪಂದಳ ಅರಮನೆಯ ರಾಜಪ್ರತಿನಿಧಿಗಳ ಅನುಮತಿಯೊಂದಿಗೆ ಪಂಪಾ ಗಣಪತಿ ಸನ್ನಿಧಾನದ ಸಮೀಪ ದಾಟಿ ನೀಲಿಮಲೆ ಬೆಟ್ಟವನ್ನು ಏರಲಿದೆ. ಕನ್ನಿ ಸ್ವಾಮಿಗಳು ತರುವ ಶರಗಳನ್ನು ಇಡುವ ಸ್ಥಳವಾದ ಶರಮ್‌ ಗುತ್ತಿಯಲ್ಲಿ ಕೇರಳ ಸರಕಾರದ ಅಧೀನದ ತಿರುವಾಂಕೂರ್ ದೇವಸ್ವಂ ಬೋರ್ಡ್‌ನ ಅಧಿಕಾರಿಗಳು ತಿರುವಾಭರಣಂ ಮೆರವಣಿಗೆಯನ್ನು  ಎದುರುಗೊಂಡು ಸ್ವಾಗತಿಸಿ, ಶಬರಿಮಲೆಯ ಅಯ್ಯಪ್ಪನ  ಸನ್ನಿಧಾನಕ್ಕೆ ಒಯ್ಯುತ್ತಾರೆ.

ಸಂಜೆ 5.30ಕ್ಕೆ ಅಯ್ಯಪ್ಪ ಸ್ವಾಮಿಯ ಯೋಗಮುದ್ರಾ ವಿಗ್ರಹಕ್ಕೆ ತಿರುವಾಭರಣಂಗಳನ್ನು ತೊಡಿಸಿ,ವಿಶೇಷ ಅಲಂಕಾರಗಳನ್ನು ಮಾಡಿ ಸಂಜೆ 6.30ರಿಂದ ದೀಪಾರಾಧನೆ ಹಾಗೂ ವಿವಿಧ ವೈಧಿಕ ಕಾರ್ಯಗಳು ನಡೆಯಲಿದೆ. ಸಂಜೆ 6.45ರ ನಂತರ ಪೊನ್ನಂಬಲ ಬೆಟ್ಟದಲ್ಲಿ ಮಕರಜ್ಯೋತಿ ಕಾಣಿಸಿಕೊಳ್ಳಲಿದೆ.

ಶಬರಿಮಲೆ ಸನ್ನಿಧಾನದ ವಿರುದ್ಧ ದಿಕ್ಕಿನಲ್ಲಿರುವ ಪೊನ್ನಂಬಲಮೇಡು ಗಿರಿಯಲ್ಲಿ  ಮಕರಜ್ಯೋತಿಯು ಮೂರು ಬಾರಿ ದೀಪ್ಯಮಾನವಾಗಿ ಮಿಣುಗಿ ಅದೃಶ್ಯವಾಗುತ್ತದೆ.

ಬಿಗಿಬಂದೋ‌ಬಸ್ತ್:
ಕಳೆದ ವರ್ಷಕ್ಕಿಂತ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶಬರಿಮಲೆಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಕೇರಳ ಸರಕಾರ ಮುನ್ನೆಚ್ಚರಿಕೆ ಕ್ರಮವಾಗಿ ಭಾರೀ ಬಂದೋಬಸ್ತ್ ಮಾಡಿದೆ. ಕೇರಳ‌ ಪೊಲೀಸ್ ಇಲಾಖೆಯ ಸಿಬಂದಿಗಳ ಜತೆ ರಾಪಿಡ್ ಆಕ್ಷನ್ ಫೋರ್ಸ್, ಎನ್.ಡಿ.ಆರ್.ಎಫ್ ಪಡೆಗಳ ಸಿಬಂದಿಗಳು ಭದ್ರತೆ ಹಾಗೂ ಭಕ್ತರ ಸುರಕ್ಷತೆಯ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಈಗಾಗಲೇ ಸಿಬಂದಿಗಳಿಗೆ ಕರ್ತವ್ಯ ಹಂಚಿಕೆ ಮಾಡಿದ್ದು,ಸೂಕ್ತ ಮಾರ್ಗದರ್ಶನ ನೀಡಿದ್ದು ಯಾವುದೇ ಅಹಿತರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಲಾಗಿದೆ.

-ಪ್ರವೀಣ್ ಚೆನ್ನಾವರ

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.