ಗೆಹ್ಲೋಟ್- ಪೈಲಟ್ ಜಗಳದಿಂದ ಖರ್ಗೆಗೆ ಲಾಭ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗ?

Team Udayavani, Sep 27, 2022, 10:35 AM IST

ಗೆಹ್ಲೋಟ್- ಪೈಲಟ್ ಜಗಳದಿಂದ ಖರ್ಗೆಗೆ ಲಾಭ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗ?

ಹೊಸದಿಲ್ಲಿ: ರಾಜಸ್ಥಾನದಲ್ಲಿ ಸಿಎಂ ಪಟ್ಟಕ್ಕಾಗಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ನಡೆದ ಜಗಳ ಕಾರಣದಿಂದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆಗೆ ಲಾಭವಾಗುವ ಸಾಧ್ಯತೆ ಹೆಚ್ಚಿದೆ. ತಮ್ಮ ಉತ್ತರಾಧಿಕಾರಿ ವಿಚಾರದಲ್ಲಿ ಸಿಎಂ ಅಶೋಕ್‌ ಗೆಹ್ಲೋಟ್‌ ಅವರ ವರ್ತನೆ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಗರಂ ಆಗಿದೆ. ಅಷ್ಟೇ ಅಲ್ಲ, ಗಾಂಧಿ ಕುಟುಂಬದ ನಂಬಿಕಸ್ಥ ಎಂದೇ ಬಿಂಬಿತವಾಗಿದ್ದ ಅಶೋಕ್‌ ಗೆಹ್ಲೋಟ್‌ ಈಗ ಎಐಸಿಸಿ ಅಧ್ಯಕ್ಷ ಗಾದಿಯ ಸ್ಪರ್ಧೆಯಿಂದಲೇ ಹೊರಬಿದ್ದಿದ್ದಾರೆ.

ಸಚಿನ್ ಪೈಲಟ್ ಅವರನ್ನು ಸಿಎಂ ಸ್ಥಾನಕ್ಕೆ ನೇಮಿಸಬಾರದು ಎಂದು ಗೆಹ್ಲೋಟ್ ಬಣದ 92 ಶಾಸಕರು ಪಟ್ಟು ಹಿಡಿದಿದ್ದರು. ರವಿವಾರ ರಾತ್ರಿ ಆರಂಭವಾದ ಈ ಡ್ರಾಮಾ ಸೋಮವಾರವೂ ಮುಂದುವರಿದಿದ್ದು, ಇದು ಕೈ ಹೈಕಮಾಂಡ್  ಸಿಟ್ಟಿಗೆ ಕಾರಣವಾಗಿದೆ.

ಒಟ್ಟಾರೆಯಾಗಿ ರಾಜಸ್ಥಾನದ ಬೆಳವಣಿಗೆ ಕಾಂಗ್ರೆಸ್‌ ಪಾಲಿಗೆ ಅರಾಜಕತೆಯಾಗಿ ಮಾರ್ಪಾಡಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ಚುನಾವಣೆಯ ಪ್ರಕ್ರಿಯೆಯಿಂದ ಅಶೋಕ್‌ ಗೆಹ್ಲೋಟ್‌ ಹಿಂದಕ್ಕೆ ಸರಿಯುವಂತೆ ಸೂಚಿಸಲಾಗಿದೆ.

ರಾಜಸ್ಥಾನದಲ್ಲಿ ಎರಡು ದಿನಗಳ ಡ್ರಾಮಾ ಮತ್ತು 10 ಜನಪಥ್‌ ನಲ್ಲಿ ಸಭೆಗಳ ನಂತರ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ಮುಗಿಯುವವರೆಗೆ (ಸೆಪ್ಟೆಂಬರ್ 30) ರಾಜಸ್ಥಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ಇದನ್ನೂ ಓದಿ:ಚೋರ್ಲಾ ಘಾಟ್ : ಭಾರೀ ವಾಹನಗಳಿಗೆ ನಿಷೇಧವಿದ್ದರೂ ನಿಯಮ ಉಲ್ಲಂಘಿಸುತ್ತಿರುವ ವಾಹನ ಚಾಲಕರು

ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸೋಮವಾರ ಸೋನಿಯಾ ನಿವಾಸದಲ್ಲಿ ಪ್ರಿಯಾಂಕಾ ವಾದ್ರಾ, ಕೆ.ಸಿ.ವೇಣುಗೋಪಾಲ್‌, ಮಲ್ಲಿಕಾರ್ಜುನ ಖರ್ಗೆ, ಕಮಲ್‌ನಾಥ್‌, ಅಜಯ ಮಕೇನ್‌ ಸಭೆ ನಡೆಸಿದರು. ಅಲ್ಲದೆ, ಈಗ ವೇಣುಗೋಪಾಲ್‌, ದಿಗ್ವಿಜಯ್‌ ಸಿಂಗ್‌, ಮುಕುಲ್‌ ವಾಸ್ನಿಕ್‌ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ರೇಸ್‌ಗೆ ಬಂದಿದ್ದಾರೆ. ಇವರಲ್ಲಿ ಒಬ್ಬರನ್ನು ಅಧ್ಯಕ್ಷ ಸ್ಥಾನಕ್ಕೆ ತರಲು ಹೈಕಮಾಂಡ್‌ ಉತ್ಸುಕವಾಗಿದೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಗೆ ನಿಷ್ಠರಾಗಿರುವ, ರಾಜ್ಯಸಭೆಯ ವಿಪಕ್ಷ ನಾಯಕಾಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಇದೀಗ ಅಧ್ಯಕ್ಷ ಸ್ಥಾನದ ರೇಸ್ ನ ಮುಂಚೂಣಿಯಲ್ಲಿದ್ದಾರೆ. ರಾಹುಲ್ ಗಾಂಧಿಯೇ ಅಧ್ಯಕ್ಷರಾಗಬೇಕು ಎಂದು ಹೇಳುತ್ತಿದ್ದ ಖರ್ಗೆ ಇದೀಗ ಪ್ರೆಸಿಡೆಂಟ್ ರೇಸ್ ಗೆ ಬರುವಷ್ಟು ರಾಜಕೀಯ ಬೆಳವಣಿಗೆಗಳು ನಡೆದಿದೆ.

ಗೆಹ್ಲೋಟ್ ನಿಷ್ಠಾವಂತ ಶಾಂತಿ ಕುಮಾರ್ ಧರಿವಾಲ್ ಅವರು ರಾಜಸ್ಥಾನದ ಎಐಸಿಸಿ ಉಸ್ತುವಾರಿ ಅಜಯ್ ಮಾಕನ್ ಅವರು ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಮತ್ತು ಪೈಲಟ್ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.