Mallikarjun Kharge: ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸ ಹೇಳಿಕೆ ಸುಳ್ಳು: ಖರ್ಗೆ ಆಕ್ರೋಶ
ಮೋದಿ ಸುಳ್ಳು ಹೇಳಿದ್ದಾರೆ, ನಾವು ಮಂಗಳಸೂತ್ರ ಕಸಿದಿಲ್ಲ
Team Udayavani, May 22, 2024, 10:10 PM IST
ನವದೆಹಲಿ: ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ರಾಮ ಮಂದಿರವನ್ನು ಬುಲ್ಡೋಜರ್ ಮೂಲಕ ಕೆಡವಿ ಹಾಕಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರಸ್ಕರಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ನಮ್ಮ ಪಕ್ಷ ಎಲ್ಲಾ ಧರ್ಮಗಳನ್ನು ಗೌರವದಿಂದ ಕಾಣುತ್ತದೆ. ನಮ್ಮ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ರಾಮ ಮಂದಿರವನ್ನು ಬುಲ್ಡೋಜರ್ ಮೂಲಕ ಕೆಡವಿ ಹಾಕಲಿದೆ ಎಂಬ ಪ್ರಧಾನಿ ಹೇಳಿಕೆ ಸಂಪೂರ್ಣ ಸುಳ್ಳು. ಕಾಂಗ್ರೆಸ್ ನೇತೃತ್ವದ ಸರ್ಕಾರ 55 ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಯಾರ ಮಂಗಳಸೂತ್ರವನ್ನೂ ಕಸಿದುಕೊಂಡಿಲ್ಲ, ಯಾರನ್ನೂ ಪೂಜೆ ಮಾಡಬೇಡಿ ಎಂದು ತಡೆ ಹೇರಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ರಾಮ ಮಂದಿರ ಧ್ವಂಸಗೊಳಿಸುತ್ತಾರೆ ಎಂಬ ಹೇಳಿಕೆ ಸಂಪೂರ್ಣ ಸುಳ್ಳು. ಬಿಜೆಪಿ ನಾಯಕರು ಅದೇ ರೀತಿ ಮಾತನಾಡುತ್ತಾರೆ. ಬಡವರಿಗೆ ನೆರವು ನೀಡುವುದು ಮತ್ತು ಗೌರವಿಸುವುದು ತುಷ್ಟೀಕರಣವೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಮತ್ತು ಮೋದಿಯವರು ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ಜನರು ಸಂತೋಷದಿಂದ ಜೀವಿಸುತ್ತಿದ್ದರು ಎಂದು ಖರ್ಗೆ ಸಂದರ್ಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನನ್ನ ಖಾಸಗಿ ಫೋಟೋ ಬಿಡುಗಡೆಮಾಡಲು ಆಪ್‌ನಲ್ಲಿ ಸಂಚು ನಡೆಯುತ್ತಿದೆ: ಸ್ವಾತಿ ಮಲಿವಾಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.