ಮಲ್ಯ ಹಸ್ತಾಂತರ ನಿಧಾನ: ಸುಪ್ರೀಂ ಕೋರ್ಟ್ ಗರಂ
Team Udayavani, Dec 13, 2017, 6:45 AM IST
ನವದೆಹಲಿ: ಭಾರತೀಯ ಬ್ಯಾಂಕುಗಳಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಬೇಕಾಗಿರುವ ವಿಜಯ್ ಮಲ್ಯ ಅವರನ್ನು ಯುಕೆಯಿಂದ ಭಾರತಕ್ಕೆ ಹಸ್ತಾಂತರಗೊಳಿಸುವ ಪ್ರಕ್ರಿಯೆ ಮಂದಗತಿಯಲ್ಲಿ ಸಾಗುತ್ತಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ.
ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾ. ಅರುಣ್ ಮಿಶ್ರಾ ಅವರುಳ್ಳ ನ್ಯಾಯಪೀಠ, “”ಮಲ್ಯ, ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಹಸ್ತಾಂತರ ತಡ ಆಗುತ್ತಿರುವುದೇಕೆ? ಕಳೆದೆಂಟು ತಿಂಗಳಿಂದ ಸುಪ್ರೀಂ ಕೋರ್ಟ್, ಆದೇಶಗಳನ್ನೂ ನೀಡುತ್ತಿದೆ. ವಿದೇಶಾಂಗ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆಯನ್ನೂ ನೀಡುತ್ತಿದೆ. ಆದರೂ, ಸರ್ಕಾರ ಕ್ಯಾರೇ ಎನ್ನುತ್ತಿಲ್ಲ. ನಿಮ್ಮ (ಸರ್ಕಾರ) ಉದ್ದೇಶವಾದರೂ ಏನು?” ಎಂದು ಆಕ್ಷೇಪಿಸಿತು.
ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಣಿಂದರ್ ಸಿಂಗ್ ಹಾಗೂ ಹಿರಿಯ ವಕೀಲ ವಿ. ಮೋಹನಾ ಅವರ ಉಪಸ್ಥಿತಿ ಬಗ್ಗೆಯೂ ಮಾತನಾಡಿದ ನ್ಯಾಯಪೀಠ, ಪ್ರತಿ ಕಲಾಪಕ್ಕೂ ಸರ್ಕಾರದ ಪರ ಬೇರೆ ಬೇರೆ ವಕೀಲರು ಬರುತ್ತಿದ್ದಾರೆ. ಆದರೆ, ಇವರ್ಯಾರೂ ಗಡಿಪಾರು ಕುರಿತಂತೆ ಆದ ಬೆಳವಣಿಗೆ ಬಗ್ಗೆ ಮಾಹಿತಿ ನೀಡುತ್ತಿಲ್ಲ” ಎಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ
Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ
Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
MUST WATCH
ಹೊಸ ಸೇರ್ಪಡೆ
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.