ಪ್ರತಿಪಕ್ಷಗಳ ಒಕ್ಕೂಟ ರಚನೆಯಾಗುತ್ತದೆ, ದೇಶವೇ ಒಕ್ಕೂಟದ ನೇತೃತ್ವ ವಹಿಸುತ್ತದೆ : ದೀದಿ
ಇಂದು ಸಂಜೆ ಪ್ರತಿಪಕ್ಷಗಳ ಪ್ರಮುಖರೊಂದಿಗೆ ದೀದಿ ಟೀ ಪಾರ್ಟಿ
Team Udayavani, Jul 28, 2021, 12:48 PM IST
ನವ ದೆಹಲಿ : ಐದು ದಿನ ಗಳ ರಾಷ್ಟ್ರ ರಾಜಧಾನಿಯ ಪ್ರವಾಸದಲ್ಲಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಿನ್ನೆ( ಜುಲೈ 27) ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ, ಕಾಂಗ್ರೆಸ್ ನ ಪ್ರಮುಖ ನಾಯಕರನ್ನು ಭೇಟಿಯಾದ ಬಳಿಕ ಇಂದು (ಬುಧವಾರ, ಜುಲೈ 28) ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಕ್ಕೂಟ ಸದ್ಯದಲ್ಲೇ ರೂಪುಗೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪ್ರತಿ ಪಕ್ಷಗಳ ಒಕ್ಕೂಟ ರಚನೆಯತಾಗುತ್ತದೆ. ಆ ಒಕ್ಕೂಟವೇ ದೇಶವನ್ನು ಮುನ್ನಡೆಸುತ್ತದೆ ಎಂದು ಹೇಳಿದ್ದಾರೆ.
ಪ್ರತಿಪಕ್ಷಗಳ ಒಕ್ಕೂಟದ ನೇತೃತ್ವವನ್ನು ನೀವೇ ವಹಿಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ದೇಶವೇ ನೇತೃತ್ವ ವಹಿಸುತ್ತದೆ, ನಾವೆಲ್ಲಾ ಅನುಸರಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : “ಶುಭಾಶಯಗಳು ಮಾಮ” : ನೂತನ ಸಿಎಂ ಬೊಮ್ಮಾಯಿ ಗೆ ಅಭಿನಯ ಚಕ್ರವರ್ತಿಯ ಹಾರೈಕೆ
ಇನ್ನು, ಪಶ್ಚಿಮ ಬಂಗಾಳದ ಉಪಚುನಾವಣೆಯ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಚುನಾವಣಾ ಆಯೋಗವು ಅದನ್ನು ನಿರ್ಧರಿಸುತ್ತದೆ. ಆಯೋಗ ನೀಡುವ ಪ್ರೋಟೋಕಾಲ್ ಮೂಲಕ ಉಪ ಚುನಾವಣೆ ನಡೆಯುತ್ತದೆ ಎಂದಿದ್ದಾರೆ.
ಏಳು ಸ್ಥಾನಗಳಿಗೆ ಉಪಚುನಾವಣೆ ಪಶ್ಚಿಮ ಬಂಗಾಳದಲ್ಲಿ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಉಪಚುನಾವಣೆ ಮತ್ತು ಇತರ ವಿಷಯಗಳ ಕುರಿತು ಚರ್ಚಿಸಲು ಜುಲೈ 15 ರಂದು ಟಿಎಂಸಿಯ ಆರು ಸದಸ್ಯರ ನಿಯೋಗ ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿತ್ತು.
ದೀದಿ ಟೀ ಪಾರ್ಟಿ
ಇಂದು(ಬುಧವಾರ, ಜುಲೈ 28) ಮಮತಾ ಬ್ಯಾನರ್ಜಿ ಎಲ್ಲಾ ಪ್ರತಿ ಪಕ್ಷಗಳ ನಾಯಕರೊಂದಿಗೆ ಟೀ ಪಾರ್ಟಿ ಏರ್ಪಡಿಸಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ತೆಗಳು ಮಾಹಿತಿ ನೀಡಿವೆ.
ಇದನ್ನೂ ಓದಿ : ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿಗೆ ಜಗದೀಶ್ ಶೆಟ್ಟರ್ ಅಭಿನಂದನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.