Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
Team Udayavani, Apr 27, 2024, 3:03 PM IST
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿದ್ದು ಮತ್ತೊಮ್ಮೆ ಗಾಯಗೊಂಡಿದ್ದಾರೆ.
ಮಮತಾ ಅವರು ಇಂದು ಅಸನ್ಸೋಲ್ ನ ಟಿಎಂಸಿ ಅಭ್ಯರ್ಥಿಯಾಗಿರುವ ಶತ್ರುಘ್ನ ಸಿನ್ಹಾ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಬಳಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು ಈ ನಿಟ್ಟಿನಲ್ಲಿ ಇಂದು ಬೆಳಿಗ್ಗೆ ದುರ್ಗಾಪುರದಿಂದ ಅಸನ್ಸೋಲ್ ಗೆ ತೆರಳಲು ತಯಾರಿ ನಡೆಸಿ ಹೆಲಿಕಾಪ್ಟರ್ ಹತ್ತಿ ಇನ್ನೇನು ಕೂರಬೇಕು ಎನ್ನುವಷ್ಟರಲ್ಲಿ ಎಡವಿ ಬಿದ್ದಿದ್ದಾರೆ, ಈ ವೇಳೆ ಅವರ ಕಾಲಿಗೆ ಸಣ್ಣ ಗಾಯವಾಗಿದೆ ಎನ್ನಲಾಗಿದೆ.
ಹೆಲಿಕಾಪ್ಟರ್ ಒಳಗೆ ಬೀಳುತ್ತಿದ್ದಂತೆ ಎಚ್ಚೆತ್ತ ಭದ್ರತಾ ಸಿಬ್ಬಂದಿ ಕೂಡಲೇ ಅವರ ಸಹಾಯಕ್ಕೆ ಧಾವಿಸಿದ್ದಾರೆ, ಬಂದಿರುವ ಮಾಹಿತಿಯ ಪ್ರಕಾರ, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವಲ್ಪ ಸಮಯದ ನಂತರ ದುರ್ಗಾಪುರದಿಂದ ಅಸನ್ಸೋಲ್ಗೆ ತೆರಳಿದರು. ಅವರ ಗಾಯ ಅಷ್ಟೊಂದು ಗಂಭೀರವಾಗಿಲ್ಲ ಮತ್ತು ಅವರು ಅಸನ್ಸೋಲ್‌ನಲ್ಲಿ ಪಕ್ಷದ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಟಿಎಂಸಿ ಮೂಲಗಳು ಮಾಹಿತಿ ನೀಡಿದೆ.
ಕೆಲ ದಿನಗಳ ಹಿಂದೆ ಮಮತಾ ಬ್ಯಾನರ್ಜಿ ಅವರು ತಮ್ಮ ಮನೆಯಲ್ಲೇ ಬಿದ್ದು ಹಣೆಗೆ ಗಾಯವಾಗಿತ್ತು ಕೂಡಲೇ ಅವರನ್ನು ಚಿಕಿತ್ಸೆಗಾಗಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ದು, ಹಣೆಗೆ ಹೊಲಿಗೆ ಹಾಕಲಾಯಿತು.
ಅದಕ್ಕೂ ಮೊದಲು 2021ರ ವಿಧಾನಸಭಾ ಚುನಾವಣೆ ವೇಳೆ ನಂದಿಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ನೆರೆದಿದ್ದ ಜನಜಂಗುಳಿಯಲ್ಲಿ ನಡೆದ ಗಲಾಟೆಯಲ್ಲಿ ಮಮತಾ ಬ್ಯಾನರ್ಜಿ ಅವರ ಕಾಲು ಕಬ್ಬಿಣದ ಕಂಬಕ್ಕೆ ಸಿಲುಕಿ ಗಾಯಗೊಂಡಿದ್ದರು.
ಇದನ್ನೂ ಓದಿ: ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
#WATCH | West Bengal CM Mamata Banerjee slipped and fell while taking a seat after boarding her helicopter in Durgapur, Paschim Bardhaman today. She reportedly suffered a minor injury and was helped by her security personnel. She continued with her onward travel to Asansol. pic.twitter.com/UCt3dBmpTQ
— ANI (@ANI) April 27, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.