ಮೊದಲು ಕ್ಷಮೆ ಯಾಚಿಸಿ

ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿಗೆ ವೈದ್ಯರ ಷರತ್ತು

Team Udayavani, Jun 15, 2019, 6:00 AM IST

q-39

ಹೊಸದಿಲ್ಲಿ: ಆಸ್ಪತ್ರೆಯಲ್ಲಿ ಸಹೋದ್ಯೋಗಿಗಳ ಮೇಲೆ ಹಲ್ಲೆ ಖಂಡಿಸಿ ಸತತ 4 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವೈದ್ಯರ ಬಗ್ಗೆ ಹಗುರವಾಗಿ ಮಾತನಾಡಿದ್ದ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೀಗ ಕ್ಷಮೆ ಕೇಳಬೇಕಾದ ಅನಿವಾರ್ಯತೆ ಎದುರಾಗಿದೆ.

ವೈದ್ಯರ ಪ್ರತಿಭಟನೆ ಹಿಂದೆ ಬಿಜೆಪಿ ಮತ್ತು ಸಿಪಿಎಂ ಸಂಚು ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದ ಮಮತಾ, ಕೂಡಲೇ ಮುಷ್ಕರ ಕೈಬಿಡುವಂತೆ ಗುರುವಾರ ಎಚ್ಚರಿಕೆ ನೀಡಿದ್ದರು. ಆದರೆ, ಅವರ ಎಚ್ಚರಿಕೆಗೆ ಬಗ್ಗದ ವೈದ್ಯರು ಪಟ್ಟು ಬಿಡದೇ ಮುಷ್ಕರ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲ, ಪ್ರತಿಭಟನೆ ನಿಲ್ಲಿಸಬೇಕೆಂದರೆ ಸಿಎಂ ಮಮತಾ ಅವರು ವೈದ್ಯರ ಕ್ಷಮೆ ಕೇಳಬೇಕು ಮತ್ತು ನಮ್ಮ ಎಲ್ಲ ಷರತ್ತುಗಳಿಗೂ ಒಪ್ಪಬೇಕು ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಮತ್ತೂಂದೆಡೆ, ಕಲ್ಕತ್ತಾ ಹೈಕೋರ್ಟ್‌ ಕೂಡ ದೀದಿ ವಿರುದ್ಧ ಕಿಡಿಕಾರಿದ್ದು, ಕೂಡಲೇ ವೈದ್ಯರೊಂದಿಗೆ ಮಾತುಕತೆ ನಡೆಸಿ, ಮುಷ್ಕರ ವಾಪಸ್‌ ಪಡೆಯುವಂತೆ ಮನವೊಲಿಸಿ ಎಂದು ಸೂಚಿಸಿದೆ. ಆದರೆ, ಈ ಕುರಿತು ಮಧ್ಯಂತರ ಆದೇಶ ಹೊರಡಿಸಲು ಕೋರ್ಟ್‌ ನಿರಾಕರಿಸಿದೆ. ಒಟ್ಟಿನಲ್ಲಿ, ಎಲ್ಲ ದಿಕ್ಕುಗಳಿಂದಲೂ ದೀದಿ ಮೇಲೆ ಒತ್ತಡ ಬೀಳುತ್ತಿದ್ದು, ಕ್ಷಮೆ ಕೇಳಬೇಕಾದ ಅನಿವಾರ್ಯತೆಗೆ ಮಮತಾ ಸಿಲುಕಿದ್ದಾರೆ.

ಪ್ರತಿಷ್ಠೆ ಬಿಡಿ: ದೀದಿಗೆ ಕೇಂದ್ರ ಸಚಿವ: ವೈದ್ಯರ ಪ್ರತಿಭಟನೆ ದಿನ ಕಳೆದಂತೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌, ‘ಇಂಥ ಸೂಕ್ಷ್ಮ ವಿಚಾರಗಳನ್ನು ಪ್ರತಿಷ್ಠೆಯಾಗಿ ಪರಿಗಣಿಸದೇ, ವಿವಾದ ಶಮನಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ’ ಎಂದು ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿಗೆ ಸಲಹೆ ನೀಡಿದ್ದಾರೆ. ಈ ಕುರಿತು ದೀದಿಗೆ ಪತ್ರ ಬರೆದಿರುವ ಹರ್ಷವರ್ಧನ್‌, ಕೂಡಲೇ ವೈದ್ಯರೊಂದಿಗೆ ಮಾತುಕತೆ ನಡೆಸಿ ವಿವಾದ ಪರಿಹರಿಸಿಕೊಳ್ಳಿ ಮತ್ತು ವೈದ್ಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ ಎಂದು ತಿಳಿಸಿದ್ದಾರೆ. ಜತೆಗೆ, ಮುಷ್ಕರ ಕೈಬಿಟ್ಟು ಕರ್ತವ್ಯ ಮುಂದುವರಿಸುವಂತೆ ವೈದ್ಯರಿಗೂ ಕರೆ ನೀಡಿದ್ದಾರೆ.

ವಿವಿಧ ನಗರಗಳಲ್ಲಿ ಪ್ರತಿಭಟನೆ: ಬಂಗಾಲದ ವೈದ್ಯರಿಗೆ ಬೆಂಬಲ ಸೂಚಿಸಿ ಶುಕ್ರವಾರ ಬೆಂಗಳೂರು, ದಿಲ್ಲಿ, ಮುಂಬೈ, ಒಡಿಶಾ, ಗೋವಾ, ರಾಜಸ್ಥಾನ ಸೇರಿದಂತೆ ದೇಶಾದ್ಯಂತ ವಿವಿಧ ನಗರಗಳಲ್ಲಿ ವೈದ್ಯರು ಕೆಲಸ ಬಹಿಷ್ಕರಿಸಿ, ಪ್ರತಿಭಟನಾ ಮೆರವಣಿಗೆಗಳನ್ನು ಕೈಗೊಂಡಿದ್ದಾರೆ. ವೈದ್ಯರ ಮುಷ್ಕರದಿಂದಾಗಿ ಪ.ಬಂಗಾಲದಾದ್ಯಂತ ರೋಗಿಗಳು ಪರದಾಡುವಂತಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದ ಕಾರಣ, ಅನೇಕ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

300 ವೈದ್ಯರ ರಾಜೀನಾಮೆಎನ್‌ಆರ್‌ಎಸ್‌ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವಂತೆಯೇ, ಪಶ್ಚಿಮ ಬಂಗಾಲದಲ್ಲಿನ ವಿವಿಧ ಸರ್ಕಾರಿ ಆಸ್ಪತ್ರೆಗಳ ಸುಮಾರು 300 ಮಂದಿ ಹಿರಿಯ ವೈದ್ಯರು ಶುಕ್ರವಾರ ಏಕಾಏಕಿ ರಾಜೀನಾಮೆ ನೀಡಿದ್ದಾರೆ. ಕರ್ತವ್ಯದಲ್ಲಿದ್ದ ವೈದ್ಯರ ಮೇಲೆ ನಡೆದ ಕ್ರೂರ ಹಲ್ಲೆಯನ್ನು ನಾವು ಖಂಡಿಸುತ್ತೇವೆ ಮತ್ತು ವೈದ್ಯರಿಗೆ ಬೆಂಬಲ ಸೂಚಿಸಿ ರಾಜೀನಾಮೆ ನೀಡುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಕಳುಹಿಸಿರುವ ರಾಜೀನಾಮೆ ಪತ್ರಗಳಲ್ಲಿ ತಿಳಿಸಿದ್ದಾರೆ. ಜತೆಗೆ, ಪ್ರಸ್ತುತ ಪರಿಸ್ಥಿತಿಯಲ್ಲಿ ನಮಗೆ ಸೇವೆಯನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದೂ ಅವರು ಹೇಳಿದ್ದಾರೆ.

ಮಮತಾ ಅವರು ಬಂಗಾಲಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಆದರೆ, ವೈದ್ಯರೊಂದಿಗೆ ಅವರು ಮಾತನಾಡಿದ ರೀತಿಯನ್ನು ಮಾತ್ರ ಬೆಂಬಲಿಸಲು ಆಗದು. ಬೆದರಿಕೆ ಹಾಕುವ ಬದಲು ವಿನಯದಿಂದ ವರ್ತಿಸ ಬಹುದಿತ್ತು. ಈಗ ಅವರು ಕ್ಷಮೆ ಕೇಳುವುದರಲ್ಲಿ ತಪ್ಪಿಲ್ಲ. ಅದರಿಂದ ಅವರ ಜನಪ್ರಿಯತೆಗೆ ಯಾವ ಧಕ್ಕೆಯೂ ಆಗಲ್ಲ.
ಅಪರ್ಣಾ ಸೇನ್‌, ನಟಿ

ದೀದಿಗೆ ವೈದ್ಯರ ಷರತ್ತುಗಳೇನು?
ಸಿಎಂ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ಕೊಟ್ಟು ಗಾಯಾಳು ವೈದ್ಯರ ಆರೋಗ್ಯ ವಿಚಾರಿಸಬೇಕು ಮತ್ತು ದಾಳಿಯನ್ನು ಖಂಡಿಸಿ ಪ್ರಕಟಣೆ ಹೊರಡಿಸಬೇಕು
ಪ್ರಕರಣದಲ್ಲಿ ಕೂಡಲೇ ಮುಖ್ಯಮಂತ್ರಿ ಮಧ್ಯಪ್ರವೇಶಿಸಬೇಕು
ವೈದ್ಯರಿಗೆ ಭದ್ರತೆ ಒದಗಿಸಲು ವಿಫ‌ಲವಾದ ಪೊಲೀಸರ ವಿರುದ್ಧದ ಕೈಗೊಂಡ ಕ್ರಮ ಗಳ ಕುರಿತು ಸಾಕ್ಷ್ಯಗಳನ್ನು ಒದಗಿಸಬೇಕು
ಬಂಗಾಲದಾದ್ಯಂತ ಕಿರಿಯ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಸುಳ್ಳು ಕೇಸುಗಳನ್ನು ಕೂಡಲೇ ವಾಪಸ್‌ ಪಡೆಯಬೇಕು
ಎಲ್ಲ ಆಸ್ಪತ್ರೆಗಳಲ್ಲೂ ಮೂಲಸೌಕರ್ಯ ಸುಧಾರಣೆ ಆಗಬೇಕು. ಆಸ್ಪತ್ರೆಗಳಲ್ಲಿ ಸಶಸ್ತ್ರ ಪೊಲೀಸ್‌ ಸಿಬಂದಿಯನ್ನು ನಿಯೋಜಿಸಬೇಕು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.