Video: ಜಮೀನು ವಿವಾದ; ಯುವಕನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ
Team Udayavani, Oct 25, 2023, 2:59 PM IST
ಜೈಪುರ: ಜಮೀನು ವಿವಾದ ತಾರಕಕ್ಕೇರಿದ ಪರಿಣಾಮ ಯುವಕನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆಗೈದಿರುವ ಘಟನೆ ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಬುಧವಾರ(ಅ.25 ರಂದು) ನಡೆದಿದೆ.
ನಿರ್ಪತ್ ಗುರ್ಜರ್ ಎನ್ನುವ ಯುವಕನನ್ನು ಟ್ರ್ಯಾಕ್ಟರ್ ಹರಿಸಿ ಭೀಕರವಾಗಿ ಹತ್ಯೆಗೈಯಲಾಗಿದೆ.
ಕಳೆದ ಅನೇಕ ವರ್ಷದಿಂದ ಅಡ್ಡಾ ಗ್ರಾಮದಲ್ಲಿ ಬಹದ್ದೂರ್ ಗುರ್ಜರ್ ಮತ್ತು ಅತಾರ್ ಸಿಂಗ್ ಗುರ್ಜರ್ ಅವರ ಕುಟುಂಬದ ನಡುವೆ ಜಮೀನು ವಿಚಾರವಾಗಿ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ಬುಧವಾರ ಮುಂಜಾನೆ ಎರಡೂ ಕುಟುಂಬಗಳ ನಡುವೆ ಮಾತಿನ ಚಕಮಕಿ ಉಂಟಾಗಿದೆ.
ಮಾತು ಹಲ್ಲೆ ನಡೆಸುವ ಮಟ್ಟಕ್ಕೆ ಬೆಳೆದಾಗ ಬಹದ್ದೂರ್ ಗುರ್ಜರ್ ಜೊತೆಗಿದ್ದ ಸಹಚರನೊಬ್ಬ ಸೀದಾ ಟ್ರ್ಯಾಕ್ಟರ್ ನ್ನು ಅತಾರ್ ಸಿಂಗ್ ಅವರ ಮಗ ನಿರ್ಪತ್ ಗುರ್ಜರ್ ಮೇಲೆ ಹರಿಸಿದ್ದಾನೆ. ಎರಡೂ ಮೂರು ಟ್ರ್ಯಾಕ್ಟರ್ ಹರಿಸಿದ ಪರಿಣಾಮ ನಿರ್ಪತ್ ಗುರ್ಜರ್ ಕೊನೆಯುಸಿರೆಳೆದಿದ್ದಾನೆ.
ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗ್ರಾಮಸ್ಥರು ನೀಡಿದ ಮಾಹಿತಿಯ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇನ್ನೊಂದೆಡೆ ಈ ಘಟನೆ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದ್ದು, ಬಿಜೆಪಿ ಪ್ರಿಯಾಂಕ ಗಾಂಧಿ ಅವರು ಈಗ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದೆ.
बयाना – भरतपुर का बताया जा रहा है वायरल वीडियो जिसमें जमीनी विवाद में युवक को ट्रैक्टर से कुचल कुचल कर मार डाला..!!
भाजपा के राष्ट्रीय प्रवक्ता @Shehzad_Ind ने उठाए कानून व्यवस्था पर सवाल..!!@PoliceRajasthan @BharatpurPolice pic.twitter.com/py6gjpIkwW— MANOJ SHARMA/ मनोज शर्मा (@manojpehul) October 25, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.