ರೈಲು ಹಳಿ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುವ ಹುಚ್ಚಿಗೆ ತರುಣ ಬಲಿ
Team Udayavani, Mar 6, 2017, 4:25 PM IST
ಪಣಜಿ : ಅಪಾಯಕಾರಿಯಾಗಿ ಸೆಲ್ಫಿ ತೆಗೆದುಕೊಳ್ಳುವ ಹುಚ್ಚಿಗೆ ಬಲಿಯಾಗುತ್ತಿರುವವರ ಸಂಖ್ಯೆ ಈಚಿನ ದಿನಗಳಲ್ಲಿ ಹೆಚ್ಚುತ್ತಲೇ ಇದೆ. ಇದಕ್ಕೆ ತಾಜಾ ಉದಾಹರಣೆಯಾಗಿ ಇಲ್ಲಿಗೆ ಸಮೀಪದ ದಾವೋಜಿ ಗ್ರಾಮದಲ್ಲಿ 25ರ ಹರೆಯದ ವ್ಯಕ್ತಿಯೋರ್ವ ರೈಲಿನ ಹಳಿಯ ಮೇಲೆ ನಿಂತುಕೊಂಡು ಸೆಲ್ಫಿ ತೆಗೆದುಕೊಳ್ಳುವಾಗ ಧಾವಿಸಿ ಬಂದ ರೈಲು ಬಡಿದು ಮೃತಪಟ್ಟ ಘಟನೆ ನಡೆದಿದೆ.
ಸಚಿನ್ ಕುಂಡೇಕರ್ ಎಂಬಾತ ಇಲ್ಲಿಂದ 10 ಕಿ.ಮೀ. ದೂರದಲ್ಲಿರುವ ಕರ್ಮಾಲಿ ಸ್ಟೇಶನ್‌ನಲ್ಲಿ ರೈಲಿನ ಹಳಿಯ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಈ ದುರ್ಘಟನೆ ನಡೆಯಿತು. ಕುಂಡೇಕರ್ ಜತೆಗೆ ಆತನ ಸ್ನೇಹಿತರೂ ಇದ್ದರು.
ತೀವ್ರವಾಗಿ ಗಾಯಗೊಂಡ ಆತನನ್ನು ಒಡನೆಯೇ ಗೋವಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಒಯ್ಯಲಾಯಿತಾದರೂ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಕೊಂಕಣ್ ರೈಲ್ವೇ ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಮದಕೈಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.