Crime: ಕೇಂದ್ರ ಸಚಿವರ ಮನೆಯಲ್ಲಿ ಯುವಕನ ಶವ ಪತ್ತೆ: ಸ್ಥಳದಲ್ಲಿತ್ತು ಸಚಿವರ ಮಗನ ಪಿಸ್ತೂಲ್
Team Udayavani, Sep 1, 2023, 10:26 AM IST
ಲಕ್ನೋ : ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದರೊಬ್ಬರ ನಿವಾಸದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ನಿವಾಸದಲ್ಲೇ ಈ ಘಟನೆ ನಡೆದಿದ್ದು ಅಲ್ಲದೆ ಸ್ಥಳದಲ್ಲಿ ಸಚಿವರ ಪುತ್ರನ ಹೆಸರಿನಲ್ಲಿ ಪರವಾನಗಿ ಪಡೆದ ಪಿಸ್ತೂಲ್ ಕೂಡ ಪತ್ತೆಯಾಗಿರುವುದು ಭಾರಿ ಅನುಮಾನಕ್ಕೆ ಎಡೆಮಾಡಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಸಚಿವರ ನಿವಾಸವನ್ನು ಶೋಧ ನಡೆಸಿದ್ದು ಬಲಿಯಾದ ಯುವಕ ವಿಕಾಸ್ ಶ್ರೀವಾಸ್ತವ ಎನ್ನಲಾಗಿದ್ದು, ಈತ ಕೌಶಲ್ ಕಿಶೋರ್ ಅವರ ಮಗನ ಸ್ನೇಹಿತ ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Kambala: ಸೆ.10ರಂದು ಮೂಡಬಿದಿರೆಯಲ್ಲಿ ಕಂಬಳ ಸಮಿತಿಯ ಮಹಾಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.