ಮೂರು ಡೋಸ್ ಫೈಜರ್ ಲಸಿಕೆ ಪಡೆದಾತನಿಗೆ ಒಮಿಕ್ರಾನ್ ಸೋಂಕು ದೃಢ!
Team Udayavani, Dec 18, 2021, 9:26 AM IST
ಮುಂಬೈ: ಅಮೆರಿಕದ ನ್ಯೂಯಾರ್ಕ್ ನಿಂದ ಹಿಂದಿರುಗಿದ 29 ವರ್ಷದ ವ್ಯಕ್ತಿಗೆ ಶುಕ್ರವಾರ ಮುಂಬೈನಲ್ಲಿ ಒಮಿಕ್ರಾನ್ ರೂಪಾಂತರಿ ಸೋಂಕು ತಗುಲಿರುವುದು ಧೃಢವಾಗಿದೆ. ಈ ಬಗ್ಗೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಪ್ರಕಟಣೆಯಲ್ಲಿ ತಿಳಿಸಿದೆ.
ಒಮಿಕ್ರಾನ್ ಸೋಂಕಿತ ವ್ಯಕ್ತಿಗೆ ಯಾವುದೇ ರೋಗಲಕ್ಷಣಗಳಿಲ್ಲ. ಈತ ಫೈಜರ್ ಲಸಿಕೆಯ ಮೂರು ಡೋಸ್ ತೆಗೆದುಕೊಂಡಿದ್ದಾನೆ ಎಂದು ಬಿಎಂಸಿ ಹೇಳಿದೆ.
ನವೆಂಬರ್ 9 ರಂದು ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಅವರು ಕೋವಿಡ್ -19 ಪಾಸಿಟಿವ್ ಪತ್ತೆಯಾಗಿತ್ತು. ನಂತರ ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿತ್ತು. ಅವರ ಇಬ್ಬರು ನಿಕಟ ಸಂಪರ್ಕಿತರ ಕೋವಿಡ್ ಪರೀಕ್ಷೆ ನೆಗಟಿವ್ ವರದಿಯಾಗಿದೆ ಎಂದು ಬಿಎಂಸಿ ತಿಳಿಸಿದೆ.
ಇದನ್ನೂ ಓದಿ:ಕೊವೊವ್ಯಾಕ್ಸ್‌ಗೆ ಡಬ್ಲ್ಯುಎಚ್‌ಒ ಮಾನ್ಯತೆ
“ಸೋಂಕಿತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಿಗೆ ಯಾವುದೇ ರೋಗಲಕ್ಷಣಗಳಿಲ್ಲ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಪ್ರಕರಣದೊಂದಿಗೆ ಮುಂಬೈನ ಒಮಿಕ್ರಾನ್ ರೋಗಿಗಳ ಸಂಖ್ಯೆಯನ್ನು 15 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಐವರು ಮುಂಬೈನ ಹೊರಗಿನವರು ಸೇರಿದ್ದಾರೆ. ಆದರೆ ಈ ಪೈಕಿ 13 ರೋಗಿಗಳು ಈಗಾಗಲೇ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.