ಮೋದಿ ಅಡ್ವೆಂಚರ್ ಶೋ ಟೀಸರ್ ವೈರಲ್
Team Udayavani, Jul 29, 2019, 8:07 PM IST
ಮಣಿಪಾಲ: ಪ್ರಧಾನಿ ನರೇಂದ್ರ ಮೋದಿ ಅವರು ಡಿಸ್ಕವರಿ ಚಾನೆಲ್ ನಲ್ಲಿ ಪ್ರಸಾರವಾಗುವ “ಮ್ಯಾನ್ v/s ವೈಲ್ಡ್” ಎಂಬ ಅಡ್ವೆಂಚರ್ ಶೋನಲ್ಲಿ ಭಾಗವಹಿಸಿದ್ದಾರೆ. ಇದರ ವಿಡಿಯೋ ಚಿತ್ರಿಕರಣ ಈಗಾಗಲೇ ಪೂರ್ಣಗೊಂಡಿದ್ದು, ಅದರ ಮೊದಲ ಟೀಸರ್ ಅನ್ನು ಡಿಸ್ಕವರಿ ಚಾನೆಲ್ ನ ಎಡ್ವರ್ಡ್ ಮೈಕೆಲ್ ಗ್ರಿಲ್ಸ್ ಅವರು ಟ್ವೀಟ್ ಮಾಡಿದ್ದಾರೆ. ಎಡ್ವರ್ಡ್ ಮೈಕೆಲ್ ಗ್ರಿಲ್ಸ್ ಕಾರ್ಯಕ್ರಮವಾದ ಮ್ಯಾನ್ v/s ವೈಲ್ಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಟ್ವೀಟರ್‌ನಲ್ಲಿ ಶ್ಲಾಘನೆಯ ಮಾತುಗಳನ್ನಾಡಿದ್ದಾರೆ. ಜತೆಗೆ ವಿಡಿಯೋವನ್ನೂ ಗ್ರಿಲ್ಸ್ ಟ್ಯಾಗ್ ಮಾಡಿದ್ದಾರೆ.
ಎಡ್ವರ್ಡ್ ಮೈಕೆಲ್ ಗ್ರಿಲ್ಸ್ ಅವರು ಇದನ್ನು ಟ್ವೀಟರ್‌ನಲ್ಲಿ ಪ್ರಧಾನಿ ಮೋದಿಯವರು ರೀಟ್ವೀಟ್ ಮಾಡಿದ್ದಾರೆ. ಈ ಮೂಲಕ ಮೈಕೆಲ್ ಅವರಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಬಳಿಕ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಈ ವಿಡಿಯೋ ತುಣುಕನ್ನು ಮೋದಿ ಅಪ್ಲೋಡ್ ಮಾಡಿದ್ದಾರೆ. ಇಲ್ಲೂ ಈ ವಿಡಿಯೋ ಟೀಸರ್ ಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬರೋಬ್ಬರಿ 4 ಗಂಟೆಗಳಲ್ಲೇ ಇದಕ್ಕೆ 17 ಸಾವಿರ ಮಂದಿ ಕಮೆಂಟ್ ಮಾಡಿದ್ದಾರೆ. ಮಾತ್ರವಲ್ಲದೇ ಮೋದಿ ಅವರ ಈ ಸಾಹಸವನ್ನು ಕೊಂಡಾಡಿದ್ದಾರೆ. 30 ಲಕ್ಷಕ್ಕಿಂತಲೂ ಅಧಿಕ ಜನರು ಈ ವಿಡಿಯೋ ತುಣುಕನ್ನು ವೀಕ್ಷಿಸಿದ್ದು, ಲೈಕ್ ಮಾಡಿದ್ದಾರೆ. ಸೋಮವಾರ ದಿನ ಮೋದಿ ಅವರ ಈ ಟ್ರೆಂಡಿಂಗ್ ವಿಡಿಯೋ ಭಾರೀ ಸದ್ದು ಮಾಡಿದೆ ಮಾತ್ರವಲ್ಲದೇ ಇನ್ನೂ ಕೆಲವು ದಿನಗಳವರೆಗೆ ಇದು ಟ್ರೆಂಡಿಂಗ್ ನಲ್ಲೇ ಮುಂದುವರಿಯುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.