ವಿಮಾನ ಮಾದರಿ ಬೋಗಿ!
Team Udayavani, Oct 29, 2018, 9:02 AM IST
ಹೊಸದಿಲ್ಲಿ: ವಿಮಾನಗಳು ಹಾರಾಡುವ ಎತ್ತರದಲ್ಲಿ ಆಮ್ಲಜನಕ ಕಡಿಮೆಇರುವುದರಿಂದಾಗಿ ಪ್ರತ್ಯೇಕ ಗಾಳಿ ಒತ್ತಡ ವ್ಯವಸ್ಥೆಯನ್ನು ರೂಪಿಸಲಾಗಿರುತ್ತದೆ. ಇದೇ ವ್ಯವಸ್ಥೆಯನ್ನು ಈಗ ಬಿಲಾಸ್‌ಪುರ-ಮನಾಲಿ-ಲೇಹ್ ರೈಲು ಮಾರ್ಗದಲ್ಲಿ ಸಂಚರಿಸುವ ಬೋಗಿಗಳಿಗೆ ಅಳವಡಿಸಲಾಗುತ್ತಿದೆ. ಈ ರೈಲು ಮಾರ್ಗವು ವಿಶ್ವದಲ್ಲೇ ಅತಿ ಎತ್ತರದ ರೈಲು ಮಾರ್ಗವಾಗಿದ್ದು, ಸಂಚರಿಸುವ ಪ್ರಯಾಣಿಕರಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳದಿರಲು ಈ ವ್ಯವಸ್ಥೆ ಮಾಡಲಾಗಿದೆ.
ಸಮುದ್ರ ಮಟ್ಟದಿಂದ 5,360 ಮೀಟರ್ ಎತ್ತರದಲ್ಲಿ ಈ ರೈಲು ಸಂಚರಿಸಲಿದೆ. 83,360 ಕೋಟಿ ರೂ. ವೆಚ್ಚದಲ್ಲಿ 465 ಕಿ.ಮೀ ಉದ್ದದ ರೈಲು ಮಾರ್ಗವನ್ನು ನಿರ್ಮಿಸಲಾಗುತ್ತಿದೆ. ಈ ರೀತಿಯ ಬೋಗಿಗಳನ್ನು ಚೀನಾದ ಕ್ವಿಂಘೆ- ಟಿಬೆಟ್ ರೈಲು ಮಾರ್ಗದಲ್ಲಿ ಸಂಚರಿಸುವ ಬೋಗಿಗಳಿಗೂ ಅಳವಡಿಸಲಾಗಿದೆ. ವಿಮಾನಗಳನ್ನು ತಯಾರಿಸುವ ಕೆನಡಾದ ಬೊಂಬಾರ್ಡಿಯರ್ ಕಂಪೆನಿ ಚೀನಗೆ ಬೋಗಿಗಳನ್ನು ನಿರ್ಮಿಸುತ್ತಿದೆ.
ಆದರೆ ಭಾರತದಲ್ಲಿ ಈ ಬೋಗಿಗಳನ್ನು ತಯಾರಿಸಲಾಗುತ್ತದೆಯೇ ಅಥವಾ ವಿದೇಶದಿಂದ ಖರೀದಿಸಲಾಗುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲಗಳ ಪ್ರಕಾರ, ಇಂಟಗ್ರೇಟೆಡ್ ಕೋಚ್ ಫ್ಯಾಕ್ಟರಿಯಲ್ಲೇ ಈ ಕೋಚ್‌ಗಳನ್ನು ತಯಾರಿಸುವ ಸಾಧ್ಯತೆಯಿದೆ. ಸದ್ಯ ಬುಲೆಟ್ ಟ್ರೇನ್‌ಗಳ ಕೋಚ್‌ಗಳನ್ನು ಇಲ್ಲಿ ತಯಾರಿಸಲು ನಿರ್ಧರಿಸಲಾಗಿದೆ. ಈ ಮಾರ್ಗದ ಅಂತಿಮ ಸಮೀಕ್ಷೆ ಕಾರ್ಯ ಚಾಲ್ತಿಯಲ್ಲಿದ್ದು, ರೈಲು ಓಡಾಟ ಆರಂಭಿಸಿದ ನಂತರದಲ್ಲಿ ಲೇಹ್‌ನಿಂದ ಬಿಲಾಸ್‌ಪುರದವರೆಗಿನ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸಲಿದೆ. 74 ಸೇತುವೆಗಳು, 124 ಪ್ರಮುಖ ಸೇತುವೆಗಳು ಹಾಗೂ 396 ಸಣ್ಣ ಸೇತುವೆಗಳನ್ನು ಈ ಮಾರ್ಗಕ್ಕಾಗಿ ನಿರ್ಮಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.