ಸುಷ್ಮಾ, ನಡ್ಡಾ, ಕಟೀಲ್ ಸೇರಿದಂತೆ ಹಲವರು ಮೋದಿ ಟೀಂನಲ್ಲಿ ಸ್ಥಾನ ಪಡೆಯುವಲ್ಲಿ ವಿಫಲ!
Team Udayavani, May 30, 2019, 11:16 PM IST
ನವದೆಹಲಿ: ನರೇಂದ್ರ ಮೋದಿ ಅವರ 2ನೇ ಅವಧಿಯ ಸರ್ಕಾರದಲ್ಲಿ ಮನೇಕಾ ಗಾಂಧಿ, ಸುರೇಶ್ ಪ್ರಭು, ಜೆಪಿ ನಡ್ಡಾ ಹಾಗೂ ರಾಧಾ ಮೋಹನ್ ಸಿಂಗ್ ಈ ಬಾರಿ ಕ್ಯಾಬಿನೆಟ್ ನಲ್ಲಿ ಯಾವುದೇ ಸ್ಥಾನ ಪಡೆದಿಲ್ಲ.
ಗುರುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ನರೇಂದ್ರ ಮೋದಿ 2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅಲ್ಲದೇ ಅಮಿತ್ ಶಾ ಸೇರಿದಂತೆ 58 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಆದರೆ ನೂತನ ಸಚಿವ ಸಂಪುಟದಲ್ಲಿ ಅನಾರೋಗ್ಯದ ಕಾರಣದಿಂದ ಕಳೆದ ಬಾರಿ ವಿತ್ತ ಸಚಿವರಾಗಿದ್ದ ಅರುಣ್ ಜೇಟ್ಲಿ, ವಿದೇಶಾಂಗ ಸಚಿವರಾಗಿದ್ದ ಸುಷ್ಮಾ ಸ್ವರಾಜ್ ಈ ಬಾರಿ ಸಂಪುಟದಿಂದ ಹೊರಗುಳಿದಿದ್ದಾರೆ. ಕರ್ನಾಟಕದಿಂದ ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ ಕ್ಯಾಬಿನೆಟ್ ದರ್ಜೆ ಪಡೆದಿದ್ದರೆ,ಸುರೇಶ್ ಅಂಗಡಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಭಾರೀ ಹಿನ್ನಡೆ ಎಂಬಂತೆ ರಾಜಕೀಯ ವಲಯದಲ್ಲಿ ವಿಶ್ಲೇಷಿಲಾಗುತ್ತಿದ್ದು, ಅನಂತ್ ಕುಮಾರ್ ಹೆಗಡೆಯಾಗಲಿ ಹ್ಯಾಟ್ರಿಕ್ ಜಯ ಸಾಧಿಸಿದ ದಕ್ಷಿಣ ಕನ್ನಡದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯದ ಬೇರೆ ಯಾವ ಸಂಸದರೂ ಬೇರೆ ಯಾರೂ ಸಚಿವ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.