Mangaluru: ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ
Team Udayavani, Nov 1, 2024, 2:19 PM IST
ಮಂಗಳೂರು: ಭಾರತೀಯ ಚುನಾವಣ ಆಯೋಗವು ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ವೇಳಾಪಟ್ಟಿ ಹೊರಡಿಸಿದ್ದು, ಅ.29ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.
ನ.28ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. ನ.9, 10 ಹಾಗೂ 23, 24ರಂದು ವಿಶೇಷ ನೋಂದಣಿ ಅಭಿಯಾನವು ಆಯಾ ಮತಗಟ್ಟೆಗಳಲ್ಲಿ ನಡೆಯಲಿದೆ. ಡಿ.24ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು, ಜ.6ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.
ಕರಡು ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ: ಬೆಳ್ತಂಗಡಿ- 2,32,269, ಮೂಡುಬಿದಿರೆ-2,10,211, ಮಂಗಳೂರು ನಗರ ಉತ್ತರ-2,56,112, ಮಂಗಳೂರು ನಗರ ದಕ್ಷಿಣ- 2,53,407, ಮಂಗಳೂರು- 2,09,955, ಬಂಟ್ವಾಳ- 2,29,236, ಪುತ್ತೂರು-2,16,821, ಸುಳ್ಯ- 2,09,261
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿಯಲ್ಲಿ 51,815 ಮತದಾರರ ಸೇರ್ಪಡೆ, 22,948 ತೆಗೆದು ಹಾಕಿದ್ದು ಹಾಗೂ 28,827 ಹೆಸರು ತಿದ್ದುಪಡಿ ಮಾಡಲಾಗಿದೆ. 18ರಿಂದ 19 ವರ್ಷದ 19,905 ಮತದಾರರು ಸೇರ್ಪಡೆಯಾಗಿದ್ದಾರೆ. 85 ವರ್ಷ ಮೇಲ್ಪಟ್ಟ 23,894 ಮತದಾರರಿದ್ದಾರೆ. 14,268 ಅಂಗವಿಕಲ ಮತದಾರರಿದ್ದಾರೆ. 258 ಆನಿವಾಸಿ ಭಾರತೀಯ ಮತ್ತು 514 ಸೇವಾ ಮತದಾರರಿದ್ದಾರೆ .
ಯಾವುದಕ್ಕೆ ಯಾವ ಅರ್ಜಿ ನಮೂನೆಗಳು?
-ನಮೂನೆ 6: 18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರು ಸೇರಿಸಲು.
-ನಮೂನೆ 6ಎ: ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು.
-ನಮೂನೆ 7: ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು.
-ನಮೂನೆ 8: ವಿಳಾಸ ಬದಲಾವಣೆ, ಮತದಾರರ ಪಟ್ಟಿಯಲ್ಲಿ ಹೆಸರು, ತಂದೆಯ ಹೆಸರು, ವಿಳಾಸ, ವಯಸ್ಸು, ಲಿಂಗ ಮುಂತಾದವುಗಳನ್ನು ತಿದ್ದುಪಡಿ ಮಾಡಲು, ಎಪಿಕ್ ಕಾರ್ಡ್ ಬದಲಾಯಿಸಲು ಇತ್ಯಾದಿ.
-ನಮೂನೆ 6: ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು.
ಜ.1, ಎ.1, ಜು.1, ಅ.1ರಂದು 18 ವರ್ಷ ತುಂಬಿರುವ ಮತದಾರರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ನ.9, 10, 23, 24ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿಶೇಷ ನೋಂದಣಿ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಅರ್ಹ ಮತದಾರರು ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹುದು.
ವೋಟರ್ ಹೆಲ್ಪ್ಲೈನ್ ಆ್ಯಪ್ ಅಥವಾ https://voters.eci.gov.in ವೆಬ್‌ಸೈಟ್ ಮೂಲಕವೂ ಅರ್ಜಿ ಸಲ್ಲಿಸಬಹುದು. ವಯಸ್ಸು ಮತ್ತು ವಾಸಸ್ಥಳದ ದಾಖಲೆಗಳು ಮತ್ತು ಒಂದು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಬೇಕು.
ಸಾರ್ವಜನಿಕರು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿ ಕಾರಿಗಳಲ್ಲಿ ಅಥವಾ ಮತದಾರ ನೋಂದಣಾಧಿ ಕಾರಿ ಕಚೇರಿ (ಎ.ಸಿ. ಕಚೇರಿ, ತಹಶೀಲ್ದಾರ್ ಕಚೇರಿ) ಭೇಟಿ ನೀಡಿ ಹೆಸರು ನೋಂದಾಯಿಸುವ ಬಗ್ಗೆ ಅಥವಾ ಲೋಪದೋಷಗಳ ಬಗ್ಗೆ ಪರಿಶೀಲಿಸಬಹುದು.
ವೆಬ್ ಪೋರ್ಟಲ್ www.ecokarnataka.kar.nic.in, https://voters.eci.gov.in ಮತ್ತು www.dk.nic.in
ನಲ್ಲಿ ವಿವರಗಳನ್ನು ಪರಿಶೀಲಿಸಬಹುದು. ಮತದಾರರ ಸಹಾಯವಾಣಿ 1950 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಮತದಾರರ ಪಟ್ಟಿ ಪರಿಷ್ಕರಣೆ ಪರಿಣಾಮಕಾರಿಯಾಗಲು ಎಲ್ಲ ರಾಜಕೀಯ ಪಕ್ಷಗಳು ಪ್ರತಿ ಬೂತ್ ಮಟ್ಟದಲ್ಲಿ ಬಿಎಲ್‌ಎಗಳನ್ನು ನೇಮಕಾತಿ ಮಾಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.