Mangaluru: ತುಳು ವಿಕ್ಷನರಿ, ವಿಕಿಸೋರ್ಸ್‌ ಲೈವ್‌ ಆರಂಭ


Team Udayavani, Nov 1, 2024, 2:25 PM IST

23

ಮಂಗಳೂರು: ಅಂತರ್ಜಾಲ ನಿಘಂಟು ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್‌ ಅಧಿಕೃತವಾಗಿ ಲೈವ್‌ ಆಗಿದ್ದು, ಬಳಕೆದಾರರು ತುಳು ವಿಕ್ಷನರಿಯಲ್ಲಿ ಮಾಹಿತಿ ಹುಡುಕಬಹುದು, ಸಂಪಾದಿಸಬಹುದು ಮತ್ತು ಕೊಡುಗೆ ನೀಡಲು ಅವಕಾಶವಿದೆ.

2018 ಆಗಸ್ಟ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತುಳು ಸ್ನಾತಕೋತ್ತರ ಪದವಿ ಪ್ರಾರಂಭವಾದ ಸಂದರ್ಭದಲ್ಲಿ ತುಳು ವಿಕ್ಷನರಿಯ ಕೆಲಸವೂ ಪ್ರಾರಂಭವಾಗಿತ್ತು. ಇದು ಜಾಗತಿಕ ಮಟ್ಟದಲ್ಲಿ ತುಳು ಭಾಷೆಯನ್ನು ಗುರುತಿಸಲು ಪ್ರಮುಖ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುತ್ತದೆ. ತುಳು ಭಾಷಾಭಿಮಾನಿಗಳು ಮತ್ತು ವಿದ್ವಾಂಸರ ಸಹಯೋಗದಿಂದ ಈ ತುಳು ಶಬ್ದಕೋಶವನ್ನು ವಿಸ್ತರಿಸಲು ಮತ್ತು ಪರಿಷ್ಕರಿಸಲು ಡಿಜಿಟಲ್ ಮಾಧ್ಯಮದಲ್ಲಿ ಸಾಧ್ಯವಿದೆ.

ವಿಕ್ಷನರಿ ಒಂದು ಉಚಿತ, ಬಹುಭಾಷಾ ಆನ್‌ಲೈನ್‌ ನಿಘಂಟು. ವ್ಯಾಖ್ಯಾನಗಳು, ಉತ್ಪತ್ತಿಗಳು, ಉಚ್ಚಾರಣೆಗಳು, ಚಿತ್ರ, ಅನುವಾದಗಳು, ಗಾದೆ, ಒಗಟು, ನುಡಿಗಟ್ಟು ಮತ್ತು ಇನ್ನಿತರ ವಿಷಯಗಳನ್ನು ಸೇರಿಸಿಕೊಳ್ಳಬಹುದು. ಸಾಂಪ್ರದಾಯಿಕ ನಿಘಂಟುಗಳಿಗಿಂತ ಭಿನ್ನವಾಗಿ, ಇದು ಜಗತ್ತಿನಾದ್ಯಂತದ ಸ್ವಯಂಸೇವಕರ ಸಹಯೋಗದೊಂದಿಗೆ ಸಂಪಾದಿ ಸಲ್ಪಡುತ್ತದೆ. ಇದು ನಿರಂತರವಾಗಿ ಮಾರ್ಪಾಡು ಮತ್ತು ವಿಕಸನದಿಂದ ನೈಜ ಸಮಯದಲ್ಲಿ ಬೆಳೆಯುವಂತಹ ನಿಘಂಟು ಅಗಿದೆ. ತುಳು ವಿಕ್ಷನರಿಯಲ್ಲಿ 3000ಕ್ಕೂ ಅಧಿಕ ಶಬ್ದಗಳಿದ್ದು, ವ್ಯವಸ್ಥಿತವಾಗಿ ವ್ಯಾಕರಣ ನೆಲೆಯಲ್ಲಿ ವರ್ಗೀಕರಿಸಲಾಗಿದೆ. ಇದು ತುಳು ಭಾಷೆಯ ಪದಗಳ ಬಗ್ಗೆ ಆಳವಾದ ಮಾಹಿತಿಯನ್ನು ಒದಗಿಸುತ್ತದೆ. ಪದ, ಸಮಾನಾರ್ಥಗಳು, ಸಾಹಿತ್ಯ, ಪಾಡ್ದನ ಇತ್ಯಾದಿ ಬಳಕೆಯ ಉದಾಹರಣೆಗಳು, ಪದದ ಮೂಲಗಳು, ಇತರ ಭಾಷೆಯ ಸಮಾನಾರ್ಥಗಳು ಮತ್ತು ಅವುಗಳಿಗೆ ಲಿಂಕ್‌ ಮತ್ತು ವ್ಯಾಕರಣ ವಿವರಗಳು ಇತ್ಯಾದಿ ಭಾಷಾ ಕಲಿಕೆಗೆ, ಭಾಷಾಶಾಸ್ತ್ರಜ್ಞರಿಗೆ ಮತ್ತು ಸಾಂಸ್ಕೃತಿಕ ಅಧ್ಯಯನಕ್ಕೆ ಸಹಾಯವಾಗುವುದು.

ತುಳು ವಿಕ್ಷನರಿಯ ಜತೆಗೆ ತುಳು ವಿಕಿಸೋರ್ಸ್‌ ಕೂಡ ಪ್ರಾರಂಭವಾಗಿದೆ. ವಿಕಿಸೋರ್ಸ್‌ ಉಚಿತ ಆನ್‌ಲೈನ್‌ ಡಿಜಿಟಲ್‌ ಲೈಬ್ರೆರಿ. ಸಾರ್ವಜನಿಕ ಡೊಮೇನ್‌ನಲ್ಲಿ ಅಥವಾ ಮುಕ್ತ ಹಕ್ಕುಸ್ವಾಮ್ಯದ ಅಡಿಯಲ್ಲಿ ಮೂಲ ಪಠ್ಯಗಳನ್ನು ಹೊಂದಿದ್ದು, ಓದುಗರು, ಪುಸ್ತಕ ಬಳಕೆದಾರರು ವಿಷಯದ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಪಠ್ಯಗಳನ್ನು ವಿಕಿಸೋರ್ಸ್‌ ಸಹಕಾರಿ. ಪುಸ್ತಕವನ್ನು ಲಿಪ್ಯಂತರ ಮತ್ತು ಪ್ರೂಫ್ ರೀಡಿಂಗ್‌ ಓದುವ ಅನುಕೂಲವನ್ನು ಸಂಪಾದಕರು ಮಾಡಿಕೊಡುವರು. ಹೀಗೆ ಸಂಪಾದನೆಯಾದ ಪುಸ್ತಕವನ್ನು ಓದಬಹುದು ಮತ್ತು ಸಂಗ್ರಹಿಸಿ ಇಟ್ಟುಕೊಳ್ಳಬಹುದು. ತುಳು ವಿಕಿಸೋರ್ಸ್‌ ಪುಸ್ತಕಗಳು, ಪತ್ರಗಳು, ಐತಿಹಾಸಿಕ ಪಠ್ಯಗಳು ಮತ್ತು ಸಾಹಿತ್ಯ ಕೃತಿಗಳಂತಹ ಮೂಲ ತುಳು ದಾಖಲೆಗಳನ್ನು ಸಂರಕ್ಷಿಸಲು ಗಮನಹರಿಸುತ್ತದೆ. ಇದು ಸಂಶೋಧಕರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ತುಳು ಸಾಹಿತ್ಯ ಪರಂಪರೆಯ ಸಂರಕ್ಷಣೆಯಲ್ಲಿ ಆಸಕ್ತಿ ಹೊಂದಿರುವವರಿಗೆ ವಿಶೇಷವಾಗಿ ಉಪಯುಕ್ತವಾಗಿದೆ.

ಇದಕ್ಕೆ ಡಾ|ಯು.ಬಿ. ಪವನಜ, ಕರಾವಳಿ ವಿಕಿಮೀಡಿಯನ್‌ ಯೂಸರ್‌ ಗ್ರೂಪಿನ ಸದಸ್ಯರಾದ ಡಾ|ವಿಶ್ವನಾಥ ಬದಿಕಾನ, ದಿ|ರವೀಂದ್ರ ಮುಡ್ಕೂರು, ಭರತೇಶ ಅಲಸಂಡೆಮಜಲು, ಡಾ|ಕಿಶೋರ್‌ ಕುಮಾರ್‌ ರೈ ಶೇಣಿ ಮತ್ತು ಯಕ್ಷಿತಾ ಮೂಡುಕೊಣಾಜೆ, ಅನೂಪ್‌ ರಾವ್‌ ಕಾರ್ಕಳ, ಚಿದಾನಂದ ಕಂಪ, ಸಹಕರಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್‌ “ಉದಯವಾಣಿ’ಗೆ ಪ್ರತಿಕ್ರಿಯಿಸಿ “ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್‌ ಇವುಗಳ ಪ್ರಾರಂಭವು ಜಾಗತಿಕ ವೇದಿಕೆಯಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಮತ್ತು ಸಂರಕ್ಷಿಸುವ ಪ್ರಮುಖ ಹೆಜ್ಜೆಯಾಗಿದೆ. ಭವಿಷ್ಯದ ಪೀಳಿಗೆಯು ಈ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಲಿದೆ’ ಎಂದು ಹೇಳಿದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.