Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ
ಗಲಭೆ ಪ್ರಮಾಣ ಹೆಚ್ಚಾಗಿದ್ದರಿಂದ ಕೇಂದ್ರ ನಿರ್ಧಾರ
Team Udayavani, Nov 14, 2024, 10:42 PM IST
ನವದೆಹಲಿ/ಇಂಫಾಲ:ಮಣಿಪುರದ ಜಿರಿಬಾಮ್ ಜಿಲ್ಲೆ ಸೇರಿದಂತೆ ಹಲವೆಡೆ ಮತ್ತೆ ಹಿಂಸಾಕೃತ್ಯಗಳು ಹೆಚ್ಚಿದ್ದರಿಂದ ಆ ರಾಜ್ಯದಲ್ಲಿ ಮತ್ತೆ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು ಮತ್ತೆ ಜಾರಿಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಜತೆಗೆ ಈ ನಿಟ್ಟಿನಲ್ಲಿ ಗುರುವಾರ ಆದೇಶವನ್ನೂ ಹೊರಡಿಸಿದೆ. ಒಟ್ಟು 5 ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಕಾಯ್ದೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.
ಸೋಮವಾರ ನಡೆದಿದ್ದ ಬೆಳವಣಿಗೆಯಲ್ಲಿ 11 ಮಂದಿ ಕುಕಿ ಉಗ್ರರನ್ನು ಗುಂಡು ಹಾರಿಸಿ ಕೊಂದ ಘಟನೆ, 6 ಮಂದಿ ನಾಗರಿಕರ ಅಪಹರಣ ಘಟನೆ ನಡೆದ ಬಳಿಕ ರಾಜ್ಯದಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ಜಾರಿಗೆ ತರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಶಸ್ತ್ರಾಸ್ತ್ರ ವಶಕ್ಕೆ:
ಈ ನಡುವೆ, ಜಿರಿಬಾಮ್, ಚುರುಚಾಂದ್‌ಪುರ ಜಿಲ್ಲೆಗಳ ಹಲವು ಭಾಗಗಳಲ್ಲಿ ಯೋಧರು ಕಾರ್ಯಾಚರಣೆ ನಡೆಸಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 36 ಸಜೀವ ಗುಂಡುಗಳು, ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಏನಿದು ವಿಶೇಷಾಧಿಕಾರ ಕಾಯ್ದೆ?
– ದಂಗೆ, ಸಂಘರ್ಷ ಪೀಡಿತ ಸ್ಥಳಗಳಲ್ಲಿ ಈ ಕಾಯ್ದೆ ಜಾರಿ ಮಾಡಲಾಗುತ್ತದೆ
– ಗಲಭೆ ತುತ್ತಾಗಿರುವ ಸ್ಥಳದಲ್ಲಿ ಶೋಧ, ಸಂಶಯ ಬಂದವರ ಸೆರೆಗೆ ಸೇನೆಗೆ ಅಧಿಕಾರ
– ಪರಿಸ್ಥಿತಿ ನಿಯಂತ್ರಣಕ್ಕೆ ಗುಂಡು ಹಾರಿಸಲೂ ಯೋಧರಿಗೆ ಇದೆ ಅವಕಾಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.