ಮಣಿಪುರ ಮತ್ತೆ ಅಸ್ಥಿರ


Team Udayavani, Mar 12, 2017, 3:45 AM IST

manipur.jpg

-ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಯತ್ನ
-ಎನ್‌ಡಿಎ ಮಿತ್ರ ಪಕ್ಷಗಳೊಡನೆ ಮೊದಲ ಪತಾಕೆ ಹಾರಿಸಲು ಬಿಜೆಪಿ ಸಜ್ಜು
-ಸಂಗ್ಮಾ ಕಿಂಗ್‌ ಮತ್ತೆ ಮೇಕರ್‌

ಇಂಫಾಲ್‌: ಮಣಿಪುರದಲ್ಲಿ ಮತ್ತೆ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಬಹುಮತದ ಹತ್ತಿರದಲ್ಲಿವೆ. ಎರಡೂ ಪಕ್ಷಗಳಿಗೆ ಪ್ರಾದೇಶಿಕ ಹಾಗೂ ಚಿಕ್ಕ ಪಕ್ಷಗಳ ಬೆಂಬಲ ಅತ್ಯಗತ್ಯ. ಬಳಿಕ 15 ವರ್ಷಗಳ ಕಾಲ ಸ್ಥಿರ ಆಡಳಿತ ಕಂಡಿದ್ದ ಮಣಿಪುರ ಮತ್ತೆ ಅತಂತ್ರ ಸ್ಥಿತಿಗೆ ಜಾರಿದೆ.

ರಾಜ್ಯದಲ್ಲಿ ಅತ್ಯಂತ ಹೆಚ್ಚು ವರ್ಷ ಆಡಳಿತ ನಡೆಸಿದ ಹೆಗ್ಗಳಿಕೆ ಹೊಂದಿರುವ ಹಾಲಿ ಮುಖ್ಯಮಂತ್ರಿ ಓಕ್ರಂ ಇಬೋಬಿ ಸಿಂಗ್‌, ಚುನಾವಣಾ ಪೂರ್ವ ಮತ್ತು ನಂತರದ ಎಲ್ಲ ಸಮೀಕ್ಷೆಗಳನ್ನು ಸುಳ್ಳುಗೊಳಿಸಿ, 28 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

2012ರ ವಿಧಾನಸಭೆ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನದಲ್ಲಿ ಜಯ ಗಳಿಸಿದ್ದ ಬಿಜೆಪಿ ಈ ಬಾರಿ 20 ಸ್ಥಾನಗಳನ್ನು ಹೆಚ್ಚು ಗಳಿಸಿದೆ. ಅಲ್ಲದೇ, ತನ್ನ ನೇತೃತ್ವದ ಎನ್‌ಡಿಎ ಪಾಳೆಯದಲ್ಲಿರುವ ಎನ್‌ಪಿಎಫ್, ಎನ್‌ಪಿಪಿ, ಎಲ್‌ಜೆಪಿ ಹಾಗೂ ಪಕ್ಷೇತರರ ಬೆಂಬಲ ಪಡೆದು ಸರ್ಕಾರ ರಚಿಸುವ ವಿಶ್ವಾಸವನ್ನೂ ವ್ಯಕ್ತಪಡಿಸಿದೆ.

ಕಳೆದ ವಿಧಾನಸಭೆ ಚುನಾವಣೆವರೆಗೂ ಕಾಂಗ್ರೆಸ್‌ನಲ್ಲಿದ್ದ ಪಿ.ಎ.ಸಂಗ್ಮಾ ಈ ಬಾರಿ ತಮ್ಮದೇ ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ (ಎನ್‌ಪಿಪಿ) ರಚಿಸುವ ಮೂಲಕ ಕಣಕ್ಕಿಳಿದಿದ್ದರು. ಆದರೆ, ಮೊದಲ ಚುನಾವಣೆಯಲ್ಲಿಯೇ ನಾಲ್ಕು ಸ್ಥಾನಗಳನ್ನು ಮಾತ್ರ ಗೆದ್ದಿದ್ದರೂ ಸರ್ಕಾರ ರಚನೆಗೆ ಕಿಂಗ್‌ ಮೇಕರ್‌ ಆಗಿ ಹೊರಹೊಮ್ಮಿದ್ದಾರೆ. ಪ್ರಸ್ತುತ ಎನ್‌ಡಿಎ ಪಾಳೆಯದಲ್ಲಿಯೇ ಇದ್ದರೂ ಕಾಂಗ್ರೆಸ್‌ಗೆ ಬೆಂಬಲ ನೀಡಲಾಗದ ಅನಿವಾರ್ಯತೆಯನ್ನೇನೂ ಹೊಂದಿಲ್ಲ.

ಎನ್‌ಡಿಎ ಅಂಗಪಕ್ಷವಾಗಿರುವ ನಾಗಾ ಪೀಪಲ್ಸ್‌ ಫ್ರಂಟ್‌ (ಎನ್‌ಪಿಎಫ್) ಮತ್ತೆ ನಾಲ್ಕು ಸ್ಥಾನಗಳಲ್ಲಿ ಜಯ ಗಳಿಸಿದೆ. ಈ ಮೂಲಕ ಸರ್ಕಾರ ರಚಿಸುವ ಕನಸು ಕಾಣುತ್ತಿರುವ ಬಿಜೆಪಿಗೆ ಪ್ರಮುಖ ಆಧಾರ ಸ್ಥಂಭವಾಗಲಿದೆ.

ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿರುವ ರಾಮ್‌ ವಿಲಾಸ್‌ ಪಾಸ್ವಾನ್‌ ನೇತೃತ್ವದ ಎಲ್‌ಜಿಪಿ ಕಳೆದ ಬಾರಿಯಂತೆ ಒಂದು ಸ್ಥಾನದಲ್ಲಿ ವಿಜಯಪತಾಕೆ ಹಾರಿಸಿದೆ. ಈ ಮೂಲಕ ಬಿಜೆಪಿ ಸರ್ಕಾರ ರಚಿಸಲು ಮುಂದಾದರೆ ಅನಿವಾರ್ಯ ಮಿತ್ರ ಪಕ್ಷವಾಗಿ ಹೊರಹೊಮ್ಮಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ನಗಣ್ಯವಾಗಿದೆ. ಪಕ್ಷಗಳ ಅಬ್ಬರದ ಮಧ್ಯೆಯೂ ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ಮುಂದಾದರೆ ಮಹತ್ವ ಪಡೆಯಲಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Protect Manipur: Mallikarjun Kharge’s letter to the President

ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ

Madras High Court stays awarding of M.S. Subbulakshmi Award to Krishna

Chennai: ಕೃಷ್ಣಗೆ ಎಂ.ಎಸ್‌.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್‌ ಹೈಕೋರ್ಟ್‌ ತಡೆ

Savarkar defamation case:: Rahul ordered to appear in person on December 2

Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ

ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Suside-Boy

Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

police

Siddapura: ಕಂಟೇನರ್‌ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.