Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
ನಾಪತ್ತೆಯಾಗಿದ್ದ 6 ಮಂದಿ ಶವ ಪತ್ತೆ ಬೆನ್ನಲ್ಲೇ ಭುಗಿಲೆದ್ದ ಹಿಂಸೆ
Team Udayavani, Nov 17, 2024, 6:27 AM IST
ಇಂಫಾಲ್: ಮಣಿಪುರದ ಜಿರಿ ಬಾಮ್‌ನಲ್ಲಿ 6 ಶವಗಳು ಪತ್ತೆಯಾಗುತ್ತಿದ್ದಂತೆ ರಾಜ್ಯದಲ್ಲಿ ಮತ್ತೂಮ್ಮೆ ಹಿಂಸಾಚಾರ ಭುಗಿಲೆದ್ದಿದೆ. ಉದ್ರಿಕ್ತರು ಶನಿವಾರ ಇಂಫಾಲ್‌ನಲ್ಲಿ ಇರುವ ಇಬ್ಬರು ಸಚಿವರು ಮತ್ತು ಐವರು ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ನಿಯಂತ್ರಿ ಸುವುದಕ್ಕಾಗಿ 7 ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸ ಲಾಗಿದ್ದು, ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.
ಕಾಣೆಯಾಗಿದ್ದಾರೆ ಎನ್ನಲಾಗಿದ್ದ ಮೈತೇಯಿ ಸಮುದಾಯದ 6 ಮಂದಿ ಶವವಾಗಿ ಪತ್ತೆ ಯಾಗಿದ್ದು, ಮಣಿಪುರದಲ್ಲಿ ಮತ್ತೂಮ್ಮೆ ಶಾಂತಿ, ಸುವ್ಯವಸ್ಥೆ ಹದಗೆಟ್ಟಿದೆ. ಮೈತೇಯಿ ಸಮುದಾಯಕ್ಕೆ ಸೇರಿದ ಮೂವರು ಮಕ್ಕಳು, ಮೂವರು ಮಹಿಳೆಯರು ಸೋಮವಾರ ನಾಪತ್ತೆಯಾಗಿದ್ದರು. ಇವರ ಶವಗಳು ನದಿಯಲ್ಲಿ ಪತ್ತೆಯಾಗಿದ್ದು, ಕುಕಿ ಬಂಡುಕೋರರು ಇವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಶವ ಪತ್ತೆಯಾಗುತ್ತಿದ್ದಂತೆ ಇಂಫಾಲ್‌ನಲ್ಲಿ ಮಹಿಳೆಯರು ಪ್ರತಿಭಟನೆ ಆರಂಭಿಸಿದ್ದು, ಕಲ್ಲು ತೂರಾಟ ನಡೆಸಿ, ಟೈರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭದ್ರತ ಪಡೆ ಗುಂಡಿಗೆ 10 ಮಂದಿ ಕುಕಿಗಳು ಬಲಿ
ಕುಕಿ ಬಂಡುಕೋರರು ಮತ್ತು ಭದ್ರತ ಪಡೆಗಳ ನಡುವೆ ನಡೆದ ಸಂಘರ್ಷದಲ್ಲಿ 10 ಮಂದಿ ಕುಕಿ ಯುವಕರು ಸಾವಿಗೀಡಾಗಿದ್ದಾರೆ. ಮೃತದೇಹಗಳನ್ನು ಅಸ್ಸಾಂಗೆ ಸಾಗಿಸ ಲಾಗಿದ್ದು, ಅಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಯುವಕರ ಕುಟುಂಬಸ್ಥರು ಶನಿವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ರಾಜ್ಯಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ “ಸೆಂಗೋಲ್’ ಸಮರ!
BJP: ವಿಪ್ ನೀಡಿದ್ರೂ ಕಲಾಪಕ್ಕೆ ಗೈರಾದ 20 ಸಂಸದರಿಗೆ ಬಿಜೆಪಿ ನೋಟಿಸ್ ಸಾಧ್ಯತೆ
ವಂಚನೆಗೀಡಾಗಿ ಪಾಕ್ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ
PM Modi: ಕಾಂಗ್ರೆಸ್ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು
Coimbatore ಸರಣಿ ಸ್ಫೋಟದ ರೂವಾರಿ ಎಸ್.ಎ.ಬಾಷಾ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.