ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ: ಮಣಿಪುರದಲ್ಲಿ ನಡೆಯಿತು ಆಘಾತಕಾರಿ ಘಟನೆ
Team Udayavani, Jul 20, 2023, 11:06 AM IST
ಇಂಫಾಲ್: ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆ ಹಿಂಸಾ ಪೀಡಿತ ಮಣಿಪುರದಲ್ಲಿ ನಡೆದಿದೆ. ಎರಡು ತಿಂಗಳ ಹಿಂದೆ ನಡೆದ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ. ಮೇ 4 ರಂದು ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಅಸಹಾಯಕ ಮಹಿಳೆಯರು ನಿರಂತರ ಕಿರುಕುಳಕ್ಕೆ ಒಳಗಾಗುವುದು ತೋರಿಸುತ್ತದೆ. ಅವರು ಸಹಾಯಕ್ಕಾಗಿ ಮನವಿ ಮಾಡುತ್ತಿದ್ದರು. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ಎಫ್) ಗುಂಪಿನ ಮೆರವಣಿಗೆಯ ಒಂದು ದಿನ ಮೊದಲು ಈ ವಿಡಿಯೋ ವೈರಲ್ ಆಗಿದೆ.
ವಿಡಿಯೋದಲ್ಲಿ ಮಹಿಳೆಯು ಸಹಾಯಕ್ಕಾಗಿ ಅಂಗಲಾಚುತ್ತಿದ್ದರು ಯುವಕನೊಬ್ಬ ಆಕೆಯ ಮೇಲೆ ನಿರಂತರ ಹಿಂಸೆ ಮಾಡುತ್ತಿರುವುದನ್ನು ಕಾಣಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಐಟಿಎಲ್‌ಎಫ್ ಮನವಿ ಮಾಡಿದೆ.
ಓರ್ವನ ಬಂಧನ: ಬುಧವಾರ ಈ ವಿಡಿಯೋ ವೈರಲ್ ಆಗಿದ್ದು, ಗುರುವಾರ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. 32 ವರ್ಷದ ಹೆರದಾಸ್ ಎಂಬಾತನನ್ನು ಬಂಧಿಸಲಾಗಿದ್ದು, ಈತನನ್ನು ಥೌಬಲ್ ಜಿಲ್ಲೆಯಲ್ಲಿ ಸೆರೆ ಹಿಡಿಯಲಾಗಿದೆ.
ಪೊಲೀಸರು ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಎಲ್ಲಾ ಆರೋಪಿಗಳನ್ನು ಸೆರೆ ಹಿಡಿಯಲು 12 ತಂಡಗಳನ್ನು ರಚಿಸಿದ್ದಾರೆ.
ಆಗಿದ್ದೇನು?: ಪೊಲೀಸ್ ದೂರಿನ ಪ್ರಕಾರ, ಘಟನೆಯ ದಿನ ಸುಮಾರು 800 ರಿಂದ 1,000 ಜನರು ಅತ್ಯಾಧುನಿಕ ಆಯುಧಗಳನ್ನು ಹಿಡಿದುಕೊಂಡು ಬಿ.ಫೈನೋಮ್ ಗ್ರಾಮಕ್ಕೆ ನುಗ್ಗಿ ಆಸ್ತಿಗಳನ್ನು ಧ್ವಂಸಗೊಳಿಸಿ ದೋಚಿದರು. ಮನೆಗಳನ್ನು ಸುಟ್ಟು ಹಾಕಿದರು. ದುಷ್ಕರ್ಮಿಗಳು ಮೈತೇಯ್ ಸಂಘಟನೆಗಳ ಸದಸ್ಯರು ಎಂದು ಶಂಕಿಸಲಾಗಿದೆ.
ದಾಳಿಯ ಸಮಯದಲ್ಲಿ, ಐದು ಗ್ರಾಮಸ್ಥರು (ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು) ಕಾಡಿಗೆ ಓಡಿಹೋದರು. ನಂತರ ಅವರನ್ನು ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ತಂಡವು ರಕ್ಷಿಸಿತು. ಐವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದಾಗ ಗುಂಪು ಅವರನ್ನು ಅಪಹರಿಸಿತು.
ಎಫ್ ಐಆರ್ ನ ಪ್ರಕಾರ ಜನಸಮೂಹವು ಒಬ್ಬ ವ್ಯಕ್ತಿಯನ್ನು ತಕ್ಷಣವೇ ಕೊಂದು ಮೂವರು ಮಹಿಳೆಯರನ್ನು ತಮ್ಮ ಬಟ್ಟೆಗಳನ್ನು ತೆಗೆಯುವಂತೆ ಒತ್ತಾಯಿಸಿತು. ಅವರಲ್ಲಿ 21 ವರ್ಷದ ಒಬ್ಬಾಕೆಯ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ ಗುಂಪು, ತಡೆಯಲು ಮಧ್ಯಪ್ರವೇಶಿಸಿದ 19 ವರ್ಷದ ಅವಳ ಸಹೋದರನನ್ನು ಕೊಲೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.