ದೇಶದ ಕೊನೆಯ ಗ್ರಾಮಕ್ಕೂ ವಿದ್ಯುತ್‌


Team Udayavani, Apr 30, 2018, 9:10 AM IST

Connection-29-47.jpg

ಹೊಸದಿಲ್ಲಿ: ಮಣಿಪುರದ ಸೇನಾಪತಿ ಜಿಲ್ಲೆಯ ಲಿಸಾಂಗ್‌ ಗ್ರಾಮಕ್ಕೆ ಶನಿವಾರ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದ್ದು, ಈ ಮೂಲಕ ಸರಕಾರ ಗುರುತಿಸಿದ ಗ್ರಾಮಗಳ ಪೈಕಿ ಕಟ್ಟಕಡೆಯ ಗ್ರಾಮಕ್ಕೂ ವಿದ್ಯುತ್‌ ಸಂಪರ್ಕ ಕಲ್ಪಿಸುವಲ್ಲಿ ಮಹತ್ವದ ಯಶಸ್ಸು ಸಾಧಿಸಿದಂತಾಗಿದೆ. ಈ ಕುರಿತು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಘೋಷಣೆ ಮಾಡಿದ್ದಾರೆ

ರವಿವಾರ ಟ್ವೀಟ್‌ ಮಾಡಿರುವ ಅವರು, ‘2018ರ ಎ.28 ಭಾರತದ ಅಭಿವೃದ್ಧಿ ಇತಿಹಾಸದಲ್ಲಿ ನೆನಪಿಡಬೇಕಾದ ದಿನ. ದೇಶದ ಇತರ ಭಾಗಗಳಂತೆ ಮಣಿಪುರದ ಲಿಸಾಂಗ್‌ ಗ್ರಾಮಕ್ಕೂ ಈಗ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಈ ಮಾಹಿತಿ ದೇಶದ ಪ್ರತಿಯೊಬ್ಬರು ಹೆಮ್ಮೆಪಡುವಂಥದ್ದಾಗಿದೆ. ಜತೆಗೆ ಭಾರತದ ಪ್ರತಿ ಗ್ರಾಮದಲ್ಲಿಯೂ ಈಗ ವಿದ್ಯುತ್‌ ಸಂಪರ್ಕ ಇದೆ ಎಂದು ಹೇಳಲು ಸಂತೋಷವಾಗುತ್ತದೆ’ ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಸರಕಾರ ನೀಡಿದ ಮಾಹಿತಿ ಪ್ರಕಾರ, 5,97,464 ಗ್ರಾಮಗಳಿಗೆ ಈಗ ವಿದ್ಯುತ್‌ ಸಂಪರ್ಕ ಪೂರ್ಣಗೊಂಡಿದೆ. ಅದಕ್ಕಾಗಿ ದೀನ್‌ ದಯಾಳ್‌ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ (ಡಿಡಿಯುಜಿಜೆವೈ)ಯನ್ನು ಸರಕಾರಿ ಸ್ವಾಮ್ಯದ ಗ್ರಾಮೀಣ ವಿದ್ಯುದೀಕರಣ ನಿಗಮ (ಆರ್‌ಇಸಿ) ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಾಗಿ ಕೇಂದ್ರ ಈ ವರೆಗೆ 75,893 ಕೋ.ರೂ. ವೆಚ್ಚ ಮಾಡಿದೆ.

ಯೋಜನೆ ಜಾರಿ ಮಾಡುವ ಸಂದರ್ಭದಲ್ಲಿ 18,452 ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಇರಲಿಲ್ಲ. ಹೆಚ್ಚಿನ ಸಮೀಕ್ಷೆ ನಡೆಸಿದ ವೇಳೆ ವಿದ್ಯುತ್‌ ಸಂಪರ್ಕ ಇರದ ಹೆಚ್ಚುವರಿ 1,275 ಗ್ರಾಮಗಳು ಪತ್ತೆಯಾಗಿದ್ದವು. ಎ.28ರ ಬಳಿಕ 1,236 ಗ್ರಾಮಗಳಲ್ಲಿ ಜನವಸತಿ ಇಲ್ಲದಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು. ಲಿಸಾಂಗ್‌ ಗ್ರಾಮದಲ್ಲಿ ಹತ್ತು ಕುಟುಂಬಗಳಿದ್ದು, 65 ಮಂದಿ ಇದ್ದಾರೆ. 2015ರ ಸ್ವಾತಂತ್ರ್ಯ ದಿನ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, 1 ಸಾವಿರ ದಿನಗಳ ಒಳಗಾಗಿ ‘ದೀನ್‌ ದಯಾಳ್‌ ಗ್ರಾಮ ಜ್ಯೋತಿ ಯೋಜನೆ’ ವ್ಯಾಪ್ತಿಯಲ್ಲಿ ದೇಶದ ಎಲ್ಲ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸುವ ವಾಗ್ಧಾನ ನೀಡಿದ್ದರು.

ಒಂದು ಗ್ರಾಮಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕಾಗಿದ್ದರೆ ಅದಕ್ಕೆ ಬೇಕಾಗಿರುವ ಮೂಲ ಸೌಕರ್ಯಗಳು ಇರಬೇಕು, ಶೇ.10ರಷ್ಟು ಮನೆಗಳಿರಬೇಕು, ಶಾಲೆ, ಪಂಚಾಯತ್‌ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕು. 2019ರ ಮಾರ್ಚ್‌ ಒಳಗಾಗಿ ದೇಶದ 4 ಕೋಟಿ ಕುಟುಂಬಗಳಿಗೆ ಪ್ರಧಾನಮಂತ್ರಿ ಸಹಜ್‌ ಬಿಜಿಲಿ ಹರ್‌ ಘರ್‌ ಯೋಜನಾ (ಸೌಭಾಗ್ಯ- Saubhagya), ಅಡಿಯಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಕೇಂದ್ರ ಸರಕಾರ ಗುರಿ ಹಾಕಿಕೊಂಡಿದೆ.

5,97,464- ಸಮೀಕ್ಷೆ ನಡೆಸಲಾಗಿರುವ ಒಟ್ಟು ಗ್ರಾಮಗಳು.
18,452 - 2015 ಎ.1ರ ಮಾಹಿತಿ ಪ್ರಕಾರ ವಿದ್ಯುತ್‌ ಸಂಪರ್ಕ ಇರದಿದ್ದ ಗ್ರಾಮಗಳು.
1,275- ವಿದ್ಯುತ್‌ ಇರದಿದ್ದ ಹೆಚ್ಚುವರಿ ಗ್ರಾಮಗಳು.
988- ದಿನಗಳಲ್ಲಿ ಎಲ್ಲ ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿದ ಹೆಗ್ಗಳಿಕೆ.
ಒಂದು ದಿನದಲ್ಲಿ 16 ಗ್ರಾಮಗಳು ಮತ್ತು ಅರ್ಧ ಗ್ರಾಮಕ್ಕೆ ವಿದ್ಯುತ್‌ ಸಂಪರ್ಕ

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

army

Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ

RG ಕರ್‌ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್‌ ಶಿಕ್ಷೆ ಪ್ರಕಟ

RG ಕರ್‌ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್‌ ರಾಯ್ ಗೆ ಜೀವಾವಧಿ ಶಿಕ್ಷೆ

ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ

CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.