ಟಿ20 ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ

Team Udayavani, Mar 13, 2018, 7:30 AM IST

s-23.jpg

ಕೊಲಂಬೊ: ತ್ರಿಕೋನ ಟಿ20 ಸರಣಿಯಲ್ಲಿ ಭಾರತ ತಂಡ ಶ್ರೀಲಂಕಾದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. 
ಟಾಸ್​ ಗೆದ್ದ ಭಾರತ ಮೊದಲು ಫೀಲ್ಡಿಂಗ್​ ಆರಿಸಿಕೊಂಡಿತು. ಮೊದಲು ಬ್ಯಾಟಿಂಗ್​ ಮಾಡಿದ ಶ್ರೀಲಂಕಾ ತಂಡ ನಿಗದಿತ 19 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 152 ರನ್​ ಗಳಿಸಿ ಭಾರತಕ್ಕೆ 153 ರನ್​ ಗುರಿ ನೀಡಿತು. ಭಾರತ ತಂಡ 17.3 ಓವರ್​ಗಳಲ್ಲಿ ಕೇವಲ 4 ವಿಕೆಟ್​ ಕಳೆದುಕೊಂಡು 153 ರನ್​ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ಮಳೆಯಿಂದಾಗಿ 19 ಓವರ್‌ಗಳಿಗೆ ಸೀಮಿತಗೊಂಡ ಪಂದ್ಯದಲ್ಲಿ ಶ್ರೀಲಂಕಾ 9 ವಿಕೆಟಿಗೆ 152  ರನ್‌ ಗಳಿಸಿ ಭಾರತಕ್ಕೆ ಸವಾಲೊಡಿತ್ತು. ಸಂಜೆ ಸುರಿದ ಮಳೆಯಿಂದಾಗಿ ಪಂದ್ಯದ ಆರಂಭ 95 ನಿಮಿಷಗಳಷ್ಟು ವಿಳಂಬಗೊಂಡಿತ್ತು. ಟಾಸ್‌ ಗೆದ್ದ ರೋಹಿತ್‌ ಶರ್ಮ ಲಂಕೆಯನ್ನು ಮೊದಲು ಬ್ಯಾಟಿಂಗಿಗೆ ಇಳಿಸಿದರು. ದನುಷ್ಕ ಗುಣತಿಲಕ-ಕುಸಲ್‌ ಮೆಂಡಿಸ್‌ ಜೋಡಿಯ ಆಟ ಅಬ್ಬರದಿಂದಲೇ ಕೂಡಿತ್ತು. ಮೊದಲ ವಿಕೆಟಿಗೆ ಕೇವಲ 2.1 ಓವರ್‌ಗಳಲ್ಲಿ 25 ರನ್‌ ಒಟ್ಟುಗೂಡಿತು. ಆಗ 8 ಎಸೆತಗಳಿಂದ 17 ರನ್‌ ಬಾರಿಸಿದ ಗುಣತಿಲಕ ಅವರನ್ನು ಕೆಡವಿದ ಶಾರ್ದೂಲ್‌ ಠಾಕೂರ್‌ ಭಾರತಕ್ಕೆ ಮೊದಲ ಯಶಸ್ಸು ತಂದಿತ್ತರು. 9 ರನ್‌ ಅಂತರದಲ್ಲಿ ವಾಷಿಂಗ್ಟನ್‌ ಸುಂದರ್‌ ದೊಡ್ಡ ಬೇಟೆಯಾಡಿದರು. ಕುಸಲ್‌ ಪೆರೆರ ಅವರನ್ನು ಮೂರೇ ರನ್ನಿಗೆ ಬೌಲ್ಡ್‌ ಮಾಡಿದರು. ಆದರೆ ಆರಂಭಕಾರ ಕುಸಲ್‌ ಮೆಂಡಿಸ್‌ ಇನ್ನೊಂದು ತುದಿಯಲ್ಲಿ ಸಿಡಿಯುತ್ತಲೇ ಇದ್ದರು. ಅವರಿಗೆ ಉಪುಲ್‌ ತರಂಗ ಉತ್ತಮ ಬೆಂಬಲವಿತ್ತರು. 3ನೇ ವಿಕೆಟಿಗೆ 62 ರನ್‌ ಹರಿದು ಬಂತು. 55 ರನ್‌ ಮಾಡಿದ ಕುಸಲ್‌ ಮೆಂಡಿಸ್‌ ಲಂಕಾ ಸರದಿಯ ಸರ್ವಾಧಿಕ ಸ್ಕೋರರ್‌ (38 ಎಸೆತ, 3 ಬೌಂಡರಿ, 3 ಸಿಕ್ಸರ್‌). 

ದ್ವಿತೀಯ ಸುತ್ತಿನ ಈ ಪಂದ್ಯಕ್ಕಾಗಿ ಭಾರತ ಒಂದು ಬದಲಾವಣೆ ಮಾಡಿಕೊಂಡಿತ್ತು. ರಿಷಬ್‌ ಪಂತ್‌ ಬದಲು ಕೆ.ಎಲ್‌. ರಾಹುಲ್‌ ಅವರನ್ನು ಕಣಕ್ಕಿಳಿಸಿತು. ಶ್ರೀಲಂಕಾ ನಾಯಕ ದಿನೇಶ್‌ ಚಂಡಿಮಾಲ್‌ 2 ಪಂದ್ಯಗಳ ನಿಷೇಧಕ್ಕೊಳಗಾದ್ದರಿಂದ ತಿಸರ ಪೆರೆರ ತಂಡವನ್ನು ಮುನ್ನಡೆಸಿದರು. ಚಂಡಿಮಾಲ್‌ ಬದಲು ವೇಗಿ ಸುರಂಗ ಲಕ್ಮಲ್‌ ಅವರನ್ನು ಆಡುವ ಬಳಗವನ್ನು ಸೇರಿಸಿಕೊಳ್ಳಲಾಯಿತು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Kasaragod:ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ

UTK

Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್‌

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.