ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ಮತ್ತೆ ತಿರಸ್ಕೃತ
Team Udayavani, Jul 3, 2023, 3:20 PM IST
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ಮನೀಶ್ ಸಿಸೋಡಿಯಾಗೆ ಮತ್ತೆ ಹಿನ್ನಡೆಯಾಗಿದೆ. ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಮನೀಶ್ ಸಿಸೋಡಿಯಾ ಅವರು ದೆಹಲಿ ಸರ್ಕಾರದಲ್ಲಿ ಪ್ರಭಾವಿ ಹುದ್ದೆಯಲ್ಲಿದ್ದಾರೆ, ಹೀಗಾಗಿ ಜಾಮೀನು ಪಡೆಯುವಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಈ ಸಂಬಂಧ ಆಮ್ ಆದ್ಮಿ ಪಕ್ಷದ ಸಂವಹನ ಉಸ್ತುವಾರಿಯಾಗಿರುವ ವಿಜಯ್ ನಾಯರ್, ಹೈದರಾಬಾದ್ನ ಉದ್ಯಮಿ ಅಭಿಷೇಕ್ ಬೋಯಿನ್ಪಲ್ಲಿ, ಎಂ/ಎಸ್ ಪೆರ್ನಾಡ್ ರಿಚರ್ಡ್ ಕಂಪನಿಯ ಮ್ಯಾನೇಜರ್ ಬಿನೋಯ್ ಬಾಬು ಅವರ ಅರ್ಜಿಗಳನ್ನೂ ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
4 ತಿಂಗಳಿನಿಂದ ಜೈಲುವಾಸ
ಅಬಕಾರಿ ನೀತಿಯಲ್ಲಿನ ಆಪಾದಿತ ಹಗರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿ 26 ರಂದು ಬಂಧಿಸಲಾಯಿತು. ಮೊದಲಿಗೆ ಸಿಬಿಐ ಬಂಧನ ಮಾಡಿತು, ನಂತರ ಜಾರಿ ನಿರ್ದೇಶನಾಲಯ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತು. ಮನೀಶ್ ಸಿಸೋಡಿಯಾ 4 ತಿಂಗಳಿಗೂ ಹೆಚ್ಚು ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ: ಮುರಿದ ಚಕ್ರದಲ್ಲೇ 10ಕಿ.ಮೀ ಚಲಿಸಿದ ರೈಲು… ಪ್ರಯಾಣಿಕರ ಸಮಯ ಪ್ರಜ್ಞೆಯಿಂದ ತಪ್ಪಿತು ದುರಂತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.