Manish Sisodia 17 ತಿಂಗಳ ನಂತರ ತಿಹಾರ್ ಜೈಲಿನಿಂದ ಹೊರಬಂದ ಆಪ್ ನಾಯಕ
ಇಂದು ಸತ್ಯ ಗೆದ್ದಿದೆ. ಕೊನೆಯಲ್ಲಿ, ಸತ್ಯವೇ ಗೆಲ್ಲುತ್ತದೆ ಎಂದ ಆಪ್
Team Udayavani, Aug 9, 2024, 7:51 PM IST
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರು 17 ತಿಂಗಳ ಜೈಲು ವಾಸದ ನಂತರ ಶುಕ್ರವಾರ(ಆಗಸ್ಟ್ 9) ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಬಳಿಕ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬಿಡುಗಡೆಯಾಗಿ ಹೊರ ಬಂದಿದ್ದಾರೆ.
ಸಿಸೋಡಿಯಾ ಅವರನ್ನು 2023 ರ ಫೆಬ್ರವರಿ 26ರಂದು ಸಿಬಿಐ, ಎರಡು ವಾರಗಳ ನಂತರ ಇಡಿ ಬಂಧಿಸಿತ್ತು. ಈಗ ಎರಡೂ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ.
ಜೈಲಿನಿಂದ ಹೊರಬಂದ ಸಿಸೋಡಿಯಾ ಅವರನ್ನು ಸ್ವಾಗತಿಸಲು ಆಮ್ ಆದ್ಮಿ ಪಕ್ಷದ ಬೆಂಬಲಿಗರು ಧ್ವಜಗಳನ್ನು ಹಿಡಿದು ಜೋರಾಗಿ ಹರ್ಷೋದ್ಗಾರ ಮಾಡಿದರು. “ನಾವು ಈ ಕಾನೂನು ಹೋರಾಟವನ್ನು ಸಂವಿಧಾನದ ಮೂಲಕ ತಾರ್ಕಿಕ ಅಂತ್ಯಕ್ಕೆ ತಂದಿದ್ದೇವೆ. ನನ್ನೊಂದಿಗಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅವರು “ಕೇಜ್ರಿವಾಲ್, ಕೇಜ್ರಿವಾಲ್” ಎಂದು ಘೋಷಣೆಯನ್ನು ಸಿಸೋಡಿಯಾ ಕೂಗಿದರು.
“ಇಂದು ಸತ್ಯ ಗೆದ್ದಿದೆ. ಕೊನೆಯಲ್ಲಿ, ಸತ್ಯವೇ ಗೆಲ್ಲುತ್ತದೆ,” ಎಂದು ದೆಹಲಿ ಮುಖ್ಯಮಂತ್ರಿಯ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಟೀಮ್ ಕೇಜ್ರಿವಾಲ್” ಪೋಸ್ಟ್ ಮಾಡಿದೆ. ಕೇಜ್ರಿವಾಲ್ ಸದ್ಯ ಅದೇ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದಾರೆ.
इंक़लाब ज़िंदाबाद🇮🇳
तमाम साज़िशों और षड्यंत्रों को ध्वस्त करके दिल्ली की शिक्षा क्रांति के नायक @msisodia जी आए जेल से बाहर 🙌#ManishKiBailSachKiJeet pic.twitter.com/FANLqVEu6s
— AAP (@AamAadmiParty) August 9, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.