Wheelchairನಲ್ಲಿ ಸದನಕ್ಕೆ ಬಂದ ಮನಮೋಹನ್ ಸಿಂಗ್:ಕಾಂಗ್ರೆಸ್ ಗೆ ನಾಚಿಕೆಯಾಗಬೇಕು ಎಂದ ಬಿಜೆಪಿ
Team Udayavani, Aug 8, 2023, 11:05 AM IST
ಹೊಸದಿಲ್ಲಿ: ಬಹುನಿರೀಕ್ಷಿತ ದಿಲ್ಲಿ ಸೇವೆಗಳ ಮಸೂದೆಯನ್ನು ಸೋಮವಾರ ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಗಿದೆ. ಬರೋಬ್ಬರಿ ಐದೂವರೆ ಗಂಟೆಗಳ ಕಾಲ ನಡೆದ ವಾಕ್ಸಮರದ ಬಳಿಕ ಮಸೂದೆ ಕೇಂದ್ರ ಸರ್ಕಾರದ ಪರವಾಗಿದೆ. ಮತದಾನದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯಸಭೆ ಕಲಾಪದಲ್ಲಿ ಭಾಗವಹಿಸಿದರು.
ಅನಾರೋಗ್ಯದಿಂದ ಬಳಲುತ್ತಿರುವ ಜೆಎಂಎಂನ ಸಿಭು ಸೊರೆನ್ ಅವರನ್ನು ಸದನಕ್ಕೆ ಕರೆತರಲಾಗಿತ್ತು. 91 ವರ್ಷದ ಮನಮೋಹನ್ ಸಿಂಗ್ ಅವರನ್ನು ವ್ಹೀಲ್ ಚೇರ್ ನಲ್ಲಿ ಕರೆತರಲಾಯಿತು. ಆದರೆ ಇದಕ್ಕೆ ಬಿಜೆಪಿ ಟೀಕೆ ಮಾಡಿದೆ.
ವ್ಲೀಲ್ ಚೇರ್ ನಲ್ಲಿ ಅವರನ್ನು ಕರೆದು ತಂದ ನಡೆಗೆ ಬಿಜೆಪಿ ಟೀಕೆ ಮಾಡಿದ್ದು, ಕಾಂಗ್ರೆಸ್ ನದ್ದು ನಾಚಿಕೆಗೇಡಿನ ನಡೆ ಎಂದು ಕರೆದಿದೆ.
ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಅಸ್ವಸ್ಥ ನಾಯಕನನ್ನು ರಾಜ್ಯಸಭೆಗೆ ಬರುವಂತೆ ಮಾಡಿದ ಹುಚ್ಚುತನವನ್ನು ರಾಷ್ಟ್ರವು ಮರೆಯುವುದಿಲ್ಲ ಎಂದು ಹೇಳಿದರು.
याद रखेगा देश, कांग्रेस की ये सनक!
कांग्रेस ने सदन में एक पूर्व प्रधानमंत्री को देर रात स्वास्थ्य की ऐसी स्थिति में भी व्हील चेयर पर बैठाये रखा वो भी सिर्फ़ अपना बेईमान गठबंधन ज़िंदा रखने के लिए!
बेहद शर्मनाक! pic.twitter.com/EVj9RR7XmP
— BJP (@BJP4India) August 7, 2023
ರಾಷ್ಟ್ರೀಯ ರಾಜಧಾನಿಯಲ್ಲಿ ಅಧಿಕಾರಶಾಹಿಯ ಮೇಲೆ ಕೇಂದ್ರದ ನಿಯಂತ್ರಣವನ್ನು ನೀಡುವ ವಿವಾದಾತ್ಮಕ ದೆಹಲಿ ಸೇವೆಗಳ ಮಸೂದೆಯನ್ನು ರಾಜ್ಯಸಭೆ ಅಂಗೀಕರಿಸಿದೆ.
ಮತದಾನದಲ್ಲಿ ಸರಕಾರದ ಪರವಾಗಿ 131 ಮತಗಳು ಚಲಾವಣೆಯಾದರೆ, ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಒಕ್ಕೂಟದ ಪರವಾಗಿ 102 ಮತಗಳು ಬಿದ್ದಿವೆ. ಕೇಂದ್ರ ಸರಕಾರದ ಪರವಾಗಿ ಬಿಜು ಜನತಾ ದಳ, ಟಿಡಿಪಿ, ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸಂಸದರು ಮತ ಹಾಕಿದ್ದಾರೆ. ಇದರಿಂದಾಗಿ ದಿಲ್ಲಿ ವ್ಯಾಪ್ತಿಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಮತ್ತು ಅವರ ಸೇವೆಗೆ ಸಂಬಂಧಿಸಿದ ವಿಚಾರದಲ್ಲಿ ಕೇಂದ್ರ ಸರಕಾರದ ಮಾತು ಅಂತಿಮವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.