ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಜ.5 ರಿಂದ ವಿಮಾನ ಹಾರಾಟ ಆರಂಭ
Team Udayavani, Dec 20, 2022, 5:46 PM IST
ಪಣಜಿ: ಗೋವಾದ ಮೋಪಾದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಡಿಸೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಸೇವೆ ಜನವರಿ 5 ರಿಂದ ಪ್ರಾರಂಭವಾಗಲಿದೆ. ಈ ಹಿನ್ನಲೆಯಲ್ಲಿ ಇಂಡಿಗೋ ಮತ್ತು ಗೋ ಫಸ್ಟ್ ಎಂಬ ಎರಡು ವಿಮಾನಯಾನ ಸಂಸ್ಥೆಗಳು ಮುಂಬೈ, ದೆಹಲಿ, ಹೈದರಾಬಾದ್, ಬೆಂಗಳೂರಿನಂತಹ ಪ್ರಮುಖ ಸ್ಥಳಗಳಿಂದ ಮೋಪಾಕ್ಕೆ ತಮ್ಮ ವಿಮಾನ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದ್ದವು. ಅಲ್ಲದೆ, ವಿಮಾನ ಹಾರಾಟಕ್ಕೆ ಅಗತ್ಯ ಸಿಬ್ಬಂದಿಯನ್ನು ನೇಮಿಸಲು ವಿಮಾನಯಾನ ಸಂಸ್ಥೆಗಳು ನೇಮಕಾತಿ ಆರಂಭಿಸಿವೆ.
ಇಂಡಿಗೋ ಮತ್ತು ಗೋ ಫಸ್ಟ್ ಎಂಬ ಎರಡು ವಿಮಾನಯಾನ ಸಂಸ್ಥೆಗಳ ನಂತರ ಇದೀಗ ಆಕಾಶ ಏರ್ಲೈನ್ಸ್ ಕೂಡ ಮೋಪಾ ಮಾರ್ಗವನ್ನು ಆಯ್ಕೆ ಮಾಡಿದೆ. ಆದ್ದರಿಂದ, ಈ ವಿಮಾನಯಾನ ಸಂಸ್ಥೆಗಳ ವಿಮಾನಗಳು ಈಗ ಗೋವಾದ ದಾಬೋಲಿ ವಿಮಾನ ನಿಲ್ದಾಣದ ಬದಲಿಗೆ ಮೋಪಾ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಲಿವೆ. ಗೋವಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮೊಪಾ ಗೋವಾದಿಂದ ಮುಂಬೈ ಮತ್ತು ಬೆಂಗಳೂರಿಗೆ ವಿಮಾನಗಳು ಜನವರಿ 11 ರಿಂದ ಪ್ರಾರಂಭವಾಗಲಿವೆ. ಹೀಗಾಗಿ ಈಗಾಗಲೇ ವಿಮಾನ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರು ಪರದಾಡುವಂತಾಗಿದೆ.
ಅಕಾಶ ಏರ್ಲೈನ್ಸ್ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈ ಮತ್ತು ಬೆಂಗಳೂರಿಗೆ ವಿಮಾನಗಳನ್ನು ಪ್ರಾರಂಭಿಸುತ್ತದೆ. ಈಗಾಗಲೇ, ಗೋ ಫಸ್ಟ್ ಮತ್ತು ಇಂಡಿಗೋ ಏರ್ಲೈನ್ಸ್ ತಮ್ಮ ವಿಮಾನಗಳನ್ನು ಗೋವಾದ ದಾಬೋಲಿ ವಿಮಾನ ನಿಲ್ದಾಣದಿಂದ ಮೋಪಾ ವಿಮಾನ ನಿಲ್ದಾಣಕ್ಕೆ ಸ್ಥಳಾಂತರಿಸಿವೆ. ಅಕಾಶ ಏರ್ಲೈನ್ಸ್ ವಿಮಾನ ಹಾರಾಟಕ್ಕೆ ಅಗತ್ಯ ಸಿಬ್ಬಂದಿಯ ನೇಮಕಾತಿಯನ್ನು ಪ್ರಾರಂಭಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಮೋಪಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮನೋಹರ್ ಪರಿಕ್ಕರ್ ಹೆಸರು: ಸಿ.ಟಿ. ರವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.