ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ಗೋವಾ ಸಿಎಂ ಪರ್ರಿಕರ್
Team Udayavani, Mar 9, 2018, 7:30 AM IST
ಪಣಜಿ: ಪ್ಯಾಂಕ್ರಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕ್ಕೆ ತೆರಳಿದ್ದಾರೆ. ಪರ್ರಿಕರ್ ಅನುಪಸ್ಥಿತಿಯಲ್ಲಿ ಸರ್ಕಾರದ ಕಾರ್ಯನಿರ್ವಹಣೆ ಸುಗಮವಾಗಿ ಸಾಗಲು, ಮೂವರು ಸಚಿವರ ಸಮಿತಿಯನ್ನು ಪರ್ರಿಕರ್ ನಿರ್ಮಿಸಿದ್ದಾರೆ. ಮೂಲಗಳ ಪ್ರಕಾರ ಪರ್ರಿಕರ್ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ನ ನಾಲ್ಕನೇ ಹಂತದಲ್ಲಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಗೋವಾ ಸರ್ಕಾರವಾಗಲೀ, ಆಸ್ಪತ್ರೆಗಳಾಗಲೀ ನೀಡಿಲ್ಲ.
ಸೋಮವಾರ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಪರ್ರಿಕರ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರವೇ ಅವರು ಅಮೆರಿಕಕ್ಕೆ ತೆರಳಿದ್ದಾರೆ. ಅದಕ್ಕೂ ಮುನ್ನ ರಾಜ್ಯಪಾಲೆ ಮೃದುಲಾ ಸಿನ್ಹಾಗೆ ಪತ್ರ ಬರೆದು, ಪರ್ಯಾಯ ವ್ಯವಸ್ಥೆಯ ವಿವರ ತಿಳಿಸಿದ್ದಾರೆ. ಆದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ಪರ್ರಿಕರ್ ಅನುಮತಿ ಇಲ್ಲದೇ ಹೊರಡಿಸಬಾರದು ಎಂದೂ ಅವರು ಸೂಚಿಸಿದ್ದಾರೆ.
ಕಳೆದ ತಿಂಗಳೂ ಆಸ್ಪತ್ರೆಗೆ ದಾಖಲಾಗಿದ್ದರಾದರೂ, ಬಿಡುಗಡೆಗೊಂಡು ಬಂದು ಬಜೆಟ್ ಮಂಡನೆ ಮಾಡಿದ್ದರು. ನಂತರ ಕೆಲವೇ ದಿನಗಳಲ್ಲಿ ಹೊಟ್ಟೆ ನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.