![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 6, 2020, 8:10 AM IST
ಜಮ್ಮು ಕಾಶ್ಮೀರ: ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ಮನೋಜ್ ಸಿನ್ಹಾ ಅವರನ್ನು ಜಮ್ಮು ಮತ್ತು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಗಿರೀಶ್ ಚಂದ್ರ ಮುರ್ಮು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಂಗಿಕರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮನೋಜ್ ಸಿನ್ಹಾ 2014ರಿಂದ 2019ರ ತನಕ ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು. ಜೊತೆಗೆ ಈವರೆಗೂ ಎರಡು ಬಾರಿ ಸಂಸತ್ತಿನಲ್ಲಿ ಬಿಜೆಪಿ ಪಕ್ಷವನ್ನು ಪ್ರತಿನಿಧಿಸಿದ್ದಾರೆ. ಬನಾರಸ್ ಹಿಂದು ಯೂನಿವರ್ಸಿಟಿಯಲ್ಲಿ ಅವರು ವಿದ್ಯಾರ್ಥಿ ನಾಯಕರಾಗಿದ್ದರು. ಉತ್ತರ ಪ್ರದೇಶದ ಘಾಜಿಪುರ ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಗೆಲುವು ಕಂಡಿದ್ದರು. ಆದಾಗ್ಯೂ 2019ರ ಚುನಾವಣೆಯಲ್ಲಿ ಸೋಲನುಭವಿಸಿದ್ದರು.
ಕೇಂದ್ರದ ಮಾಜಿ ಸಚಿವ ಮನೋಜ್ ಸಿನ್ಹಾ ಅವರ ನೇಮಕವನ್ನು ರಾಷ್ಟ್ರಪತಿ ಭವನ ಖಚಿತಪಡಿಸಿದ್ದು, ಶೀಘ್ರವೇ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಮೂಲಗಳ ಪ್ರಕಾರ, ಜಿಸಿ ಮುರ್ಮು ಬುಧವಾರ ಸಂಜೆ ತಮ್ಮ ರಾಜೀನಾಮೆ ಪತ್ರವನ್ನು ಕೇಂದ್ರಕ್ಕೆ ಕಳುಹಿಸಿದ್ದು, ತಕ್ಷಣವೇ ತಮ್ಮ ಹುದ್ದೆಯಿಮದ ಕೆಳಗಿಳಿದಿದ್ದಾರೆ. ಪ್ರಸ್ತುತ ಇವರು ಜಮ್ಮುವಿನಲ್ಲಿದ್ದು, ಗುರುವಾರ ದೆಹಲಿಗೆ ತೆರಳಲಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.